ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ. ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ. ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ
Read More »Yearly Archives: 2022
ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ : ‘BMTC’ ಬಸ್ ಪಾಸಿನ ದರ ಹೆಚ್ಚಳ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು, ಮಾಸಿಕ, ದೈನಿಕ ಬಸ್ ಪಾಸಿನ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸಂಸ್ಥೆಯ ಆರ್ಥಿಕ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯು ವಿತರಣೆ ಮಾಡುತ್ತಿರುವ ವಜ್ರ ಹವಾನಿಯಂತ್ರಿತ ಸೇವೆಗಳ ದೈನಿಕ, ಮಾಸಿಕ ಪಾಸುಗಳ ದರಗಳನ್ನು ದಿನಾಂಕ 2023ರ್ ಜನವರಿ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ವಜ್ರ ಮಾಸಿಕ …
Read More »ಸಿಎಂ ಹುದ್ದೆಯನ್ನೇ ಮಾರಾಟಕ್ಕಿಟ್ಟ ಅಮಿತ್ ಶಾ ಆರೋಪ ತಮಾಷೆಯಾಗಿದೆ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಅಮಿತ್ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿಯ ಎಟಿಎಂ …
Read More »ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ
ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ ₹150 | ಪ್ರತಿಭಟನೆ ಕೈಬಿಟ್ಟ ಕಬ್ಬು ಬೆಳೆಗಾರರು
ಬೆಂಗಳೂರು: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಜತೆಗೆ ಹೆಚ್ಚುವರಿಯಾಗಿ ₹ 150 ನೀಡಲು ರಾಜ್ಯ ಸರ್ಕಾರವು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕಬ್ಬು ಬೆಳೆಗಾರರು ಶುಕ್ರವಾರ ಸ್ಥಗಿತಗೊಳಿಸಿದರು. ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಎಫ್‌ಆರ್‌ಪಿ ಜತೆಗೆ ಪ್ರತಿ ಟನ್‌ಗೆ …
Read More »ಕುಷ್ಟಗಿ ಕ್ಷೇತ್ರಕ್ಕೆ ಬಸವರಾಜ್ ಹಳ್ಳೂರಗೆ ಗಾಳ ಹಾಕಿದ ಜನಾರ್ದನ ರೆಡ್ಡಿ
ಕುಷ್ಟಗಿ:ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷಕ್ಕೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಗಾಳ ಹಾಕಿದ್ದು,ಕುಷ್ಟಗಿ ಕ್ಷೇತ್ರದಲ್ಲಿ ರೆಡ್ಡಿ ಪಕ್ಷ ಇದೀಗ ಮುನ್ನೆಲೆಗೆ ಬಂದಿದೆ. ಈಗಾಗಲೇ ಜೆಡಿಎಸ್ ತುಕಾರಾಮ್ ಸುರ್ವೆ ತನ್ನ ಅಭ್ಯರ್ಥಿ ಎಂದು ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಭ್ಯರ್ಥಿಗಳೆಂದು ಪ್ರಕಟಿಸುವುದು ಬಾಕಿ ಇದೆ. …
Read More »ಮೆಜೆಸ್ಟಿಕ್ ‘ಅಕ್ರಮ’ ವ್ಯಾಪಾರ: ಪ್ರಶ್ನಿಸಿದರೆಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆ
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ ಸುರಂಗ ಮಾರ್ಗದಲ್ಲಿ ‘ಅಕ್ರಮ’ ವ್ಯಾಪಾರ ಜೋರಾಗಿದ್ದು, ಇದನ್ನು ಪ್ರಶ್ನಿಸುವ ಜನರ ಮೇಲೆ ವ್ಯಾಪಾರಿಗಳು ಹಲ್ಲೆ ಮಾಡುತ್ತಿದ್ದಾರೆ. ತಮ್ಮದೇ ಗುಂಪು ಕಟ್ಟಿಕೊಂಡು ಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆಯೊಡ್ಡುತ್ತಿರುವ ದೂರುಗಳು ಹೆಚ್ಚಾಗಿವೆ. ನಿಲ್ದಾಣಕ್ಕೆ ಬಂದು ಹೋಗುವ ಜನರ ಸಂಚಾರಕ್ಕೆ ಅನುಕೂಲವಾಗಲೆಂದು ಸುರಂಗ ಮಾರ್ಗ ನಿರ್ಮಿಸಲಾಗಿದ್ದು, ‘ಕಡ್ಡಾಯವಾಗಿ ಸುರಂಗ ಮಾರ್ಗ ಬಳಸಿ’ ಎಂಬ ನಾಮಫಲಕಗಳನ್ನು ನೇತುಹಾಕಲಾಗಿದೆ. ಆದರೆ, ಜನರು ಓಡಾಡುವ …
Read More »ಐದು ಮೆಗಾ ಹಾಸ್ಟೆಲ್‌ಗಳ ನಿರ್ಮಾಣ:C.M. ಬೊಮ್ಮಾಯಿ
ಬೆಳಗಾವಿ: ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದ ಐದು ಸ್ಥಳಗಳಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಗುರುವಾರ 2022-23ನೇ ಸಾಲಿನ ಪೂರಕ ಅಂದಾಜಿನ ಎರಡನೇ ಕಂತಿನ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ‘ಪ್ರಥಮ ಬಾರಿ ಮೆಗಾ ಹಾಸ್ಟೆಲ್ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಮಂಗಳೂರು, ಧಾರವಾಡ, ಮೈಸೂರು, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಈ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು’ ಎಂದು ತಿಳಿಸಿದರು. ‘ಅಗತ್ಯವಿದ್ದರೆ ಇತರ ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ …
Read More »ಮೀಸಲಾತಿ | ರಂಗನ ಮಂಗ ಮಾಡಲು ಹೊರಟಿದ್ದಾರೆ” H.D.K
ತುಮಕೂರು: ಒಕ್ಕಲಿಗ, ಲಿಂಗಾಯತ ಸಮುದಾಯದ ಮೀಸಲಾತಿ ಸಂಬಂಧ ಪ್ರವರ್ಗ ಬದಲಾವಣೆ ಮಾಡುವ ಮೂಲಕ ‘ರಂಗನ ಮಂಗ ಮಾಡಲು’ ಬಿಜೆಪಿಯವರು ಹೊರಟಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಶುಕ್ರವಾರ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರವರ್ಗ ಬದಲಾವಣೆ ಮಾಡಿರುವುದರಿಂದ ಎರಡೂ ಸಮುದಾಯಗಳಿಗೂ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಆಗುವುದಿಲ್ಲ. ಪ್ರವರ್ಗ ಬದಲಾವಣೆ ಮಾಡಿರುವುದೇ ಸಾಧನೆ. ಈವರೆಗೆ ಮೂಗಿಗೆ ತಪ್ಪ ಹಚ್ಚುತ್ತಿದ್ದವರು, ಈಗ ಹಣೆಗೆ ಹಚ್ಚಿದ್ದಾರೆ. …
Read More »ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ
ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು
Read More »