ಧಾರವಾಡ: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ(63) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಕಲಾವಿದ ಬಸಲಿಂಗಯ್ಯ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಜಾನಪದ ಕಲಾವಿದ ಬಸಲಿಂಗಯ್ಯ ಧಾರವಾಡದ ನಿವಾಸಿಯಾಗಿದ್ದರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ಇವರ ಪತ್ನಿ ವಿಶ್ವೇಶ್ವರಿ ಹಿರೇಮಠ ಕೂಡ ಜಾನಪದ ಕಲಾವಿದೆಯಾಗಿದ್ದು ಜಾನಪದ ಸಂಶೋಧನಾ ಸಂಸ್ಥೆ ಮೂಲಕ ಬಸಲಿಂಗಯ್ಯ ಹಿರೇಮಠ ದಂಪತಿ ಕಲಾ ಸೇವೆ ಮಾಡುತ್ತಿದ್ದರು. ಅಲ್ಲದೇ ಅನೇಕ ಜಾನಪದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ …
Read More »Daily Archives: ಜನವರಿ 9, 2022
ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ನೂರಾರು ಜನ
ಬೆಳಗಾವಿ: ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರರ ಗೆಲುವು ವಿಚಾರಕ್ಕೆ ಸಂಬಂಧಪಟ್ಟಂತೆ ಸೇಡಿನ ರಾಜಕಾರಣ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಪರ ಹಣ ಹಂಚಿರುವುದಾಗಿ ಶಶಿಕಲಾ ಜೊಲ್ಲೆ (shashikala jolle) ಆಪ್ತರು ದೂರು ದಾಖಲಿಸಿದ್ದು, ಈ ಪ್ರಕರಣಕ್ಕೆ ಸಂಬಂಧ ಇಲ್ಲದೇ ಇರುವವರನ್ನು ಪೊಲೀಸರು (Karnataka police) ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ …
Read More »ಐಸಿಯುನಲ್ಲಿ ತಂದೆ ಸಾವು; ಕೊವಿಡ್ನಿಂದ ಹತ್ತಿರ ಹೋಗದ ಮಗ; ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ
ಕಳೆದ ಕೆಲವು ದಿನಗಳಿಂದ ವಿಶಾಲ್ ದದ್ಲಾನಿ ಅವರ ತಂದೆ ಮೋತಿ ದದ್ಲಾನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಕೊರೊನಾ ವೈರಸ್ ಕಾರಣದಿಂದ ಜನರು ಎದುರಿಸುತ್ತಿರುವ ಕಷ್ಟ ಒಂದೆರಡಲ್ಲ. ಎಲ್ಲರ ಬದುಕಿನಲ್ಲಿ ಅನಿಶ್ಚಿತತೆ ಆವರಿಸಿದೆ. ಮುಂದೇನು ಎಂಬ ಗೊಂದಲದಲ್ಲೇ ಕಾಲ ಕಳೆಯುವಂತಾಗಿದೆ. ಕೊವಿಡ್ (Covid 19) ಸೋಂಕು ತಗುಲಿದರೆ ಆತ್ಮೀಯರಿಂದಲೂ ದೂರ ಇರಬೇಕಾದ ಪರಿಸ್ಥಿತಿ ಬಂದೊದಗುತ್ತಿದೆ. ಪ್ರೀತಿಪಾತ್ರರ ಅಂತಿಮ ಸಂಸ್ಕಾರದಲ್ಲೂ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಬಾಲಿವುಡ್ನ (Bollywood) ಖ್ಯಾತ ಗಾಯಕ …
Read More »ಇಂದು ಕನಕಪುರದಲ್ಲಿ ನಡೆದೀತೇ ಹೈಡ್ರಾಮಾ; ಪಾದಯಾತ್ರೆಗೆ ಕೈ ನಾಯಕರ ಸಂಗಮ
ಬೆಂಗಳೂರು/ರಾಮನಗರ: ಮೇಕೆದಾಟು ಯೋಜನೆಯ ತ್ವರಿತ ಜಾರಿ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕರ ದಂಡು ಕನಕಪುರ ತಲುಪಿದೆ. ರವಿವಾರ ಬೆಳಗ್ಗೆ ಪಾದಯಾತ್ರೆ ಆರಂಭವಾಗಲಿದ್ದು, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಉದ್ಘಾಟಿಸುವರು. ಕನ್ನಡ ಚಲನಚಿತ್ರೋದ್ಯಮದ ಬೆಂಬಲವೂ ದೊರೆತಿದ್ದು, ನಟ ಶಿವರಾಜ್‌ಕುಮಾರ್, ದುನಿಯಾ ವಿಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಈ ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಯಾದರೆ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಚಿಂತಿಸಿದ್ದು ಹೆಚ್ಚಿನ ಪೊಲೀಸ್ ನಿಯೋಜನೆಗೂ …
Read More »ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ
ಬೆಂಗಳೂರು: ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದ ಪೈಪೋಟಿ ಶುರುವಾಗಿದ್ದು, ಘಟಾನುಘಟಿಗಳು ಸ್ಪರ್ಧೆಯಲ್ಲಿದ್ದಾರೆ. ಈ ಹುದ್ದೆಗೆ ಮಾನದಂಡ ಪಕ್ಷ ನಿಷ್ಠೆಯಾ ಅಥವಾ ವಿವಾದಾತ್ಮಕ ವ್ಯಕ್ತಿತ್ವವಾ ಎಂಬ ವಿಷಯ ಹೈಕಮಾಂಡ್ ಅಂಗಳ ತಲುಪಿದೆ. ಈ ಹುದ್ದೆಯಲ್ಲಿ ತಮ್ಮವರನ್ನು ಪ್ರತಿಷ್ಠಾಪಿಸಲು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ “ರಂಗಪ್ರವೇಶ’ ಮಾಡಿದ್ದಾರೆ. ಬಿ.ಕೆ.ಹರಿಪ್ರಸಾದ್, ನಸೀರ್ ಅಹಮದ್, ಸಿ.ಎಂ.ಇಬ್ರಾಹಿಂ, ಅಲ್ಲಂ …
Read More »ಬೆಳಗಾವಿ ಕಡೆಗೆ ಹೊರಟ್ಟಿದ್ದ ರೈಲು ಹಳಿತಪ್ಪಿ 300 ಮೀಟರ್ ವರೆಗಿನ ರೈಲು ಮಾರ್ಗ ಕಿತ್ತು ಹೋಗಿದೆ.
ಅಳ್ನಾವರ: ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಬೆಳಗಾವಿ ಕಡೆಗೆ ಹೊರಟ್ಟಿದ್ದ ಸರಕು ಸಾಗಣೆ ರೈಲು ಹಳಿತಪ್ಪಿದ್ದು, 300 ಮೀಟರ್ ವರೆಗಿನ ರೈಲು ಮಾರ್ಗ ಕಿತ್ತು ಹೋಗಿದೆ. ರೈಲು ನಿಲ್ದಾಣದಲ್ಲಿ ಒಟ್ಟು ಆರು ಮಾರ್ಗಗಳಿವೆ. ಕೊನೆಯ ಮಾರ್ಗ ಗೂಡ್ಸ್ ರೈಲುಗಳ ಸಂಚಾರಕ್ಕೆ ಮೀಸಲಾಗಿದೆ. ಇಲ್ಲಿನ ನಿಲ್ದಾಣದಿಂದ ರೈಲು ಹೊರಡುತ್ತಿದ್ದಂತೆ ಭಾರಿ ಸದ್ದು ಉಂಟಾಯಿತು, ಹಳಿಯ ಮಾರ್ಗದಲ್ಲಿ ದೂಳು ಎದ್ದಿತ್ತು. ಸಕಾಲದಲ್ಲಿ ರೈಲು ನಿಲುಗಡೆ ಮಾಡಿದ್ದರಿಂದ ಯಾವುದೇ ಅನಾಹುತ ಆಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು …
Read More »ಪಂಚರಾಜ್ಯ ವಿಧಾನಸಭೆ ಚುನಾವಣೆ: ಸೋಲು-ಗೆಲುವಿನ ಹಿಂದೆ ಆರು ಲೆಕ್ಕಾಚಾರ!
ನವದೆಹಲಿ, ಜನವರಿ 8: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ನಡುವೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದೆ. ಶನಿವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ, ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದಾರೆ. ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರ, ಗೋವಾದ 40 ವಿಧಾನಸಭೆ ಕ್ಷೇತ್ರ, ಪಂಜಾಬ್ 117 ವಿಧಾನಸಭೆ ಕ್ಷೇತ್ರ, …
Read More »ಚಂದ್ರನ ಮೇಲೆ ನಿಗೂಢ ವಸ್ತು: ಅದೇನೆಂದು ಪತ್ತೆ ಹಚ್ಚಿದ ನಾಸಾ!
ಚೀನಾದ ಯುಟು-2 ರೋವರ್ ಚಂದ್ರನ ಮೇಲೆ ನಿಗೂಢವಾದ ಗುಡಿಸಲು ಆಕಾರದ ವಸ್ತುವನ್ನು ಪತ್ತೆ ಮಾಡಿತ್ತು. ಈ ವಸ್ತು ಏನಿರಬಹುದು ಅಂತ ಇಡೀ ವಿಶ್ವದ ತಜ್ಞರೆಲ್ಲಾ ತಲೆ ಕೆರೆದುಕೊಂಡು ಸಂಶೋಧನೆಯಲ್ಲಿ ಮುಳುಗಿದ್ರು. ಕೆಲವರಂತೂ ಅದು ಏಲಿಯನ್ಗಳು ನಿರ್ಮಿಸಿರೋ ಠಿಕಾಣಿ ಅಂತೆಲ್ಲಾ ಹೇಳಿದ್ರು. ಇದೀಗ ಚೀನಾದ ಯುಟು-2 ತಂಡವೇ ಈ ಬಗ್ಗೆ ಮಾಹಿತಿ ನೀಡಿದೆ. ಇದು ನಿಗೂಢ ವಸ್ತು ಏನಲ್ಲ.. ನಾವು ರೋವರ್ ಮೂಲಕ ಸೂಕ್ಷ್ಮವಾಗಿ ಪರಿಶೀಲಿಸಿದ್ದೀವಿ. ಇದು ಮೊಲದ ಆಕಾರದಲ್ಲಿರೋ ಒಂದು …
Read More »ಈ ದೇವಾಲಯದಲ್ಲಿ ಶೂ-ಚಪ್ಪಲಿ ಅರ್ಪಿಸುವುದರಿಂದ ವ್ರತಗಳು ನೆರವೇರುತ್ತವೆ..!
ನವದೆಹಲಿ: ಸಾಮಾನ್ಯವಾಗಿ ಜನರು ದೇವರನ್ನು ಪೂಜಿಸಲು ದೇವಸ್ಥಾನಕ್ಕೆ ಹೋಗುತ್ತಾರೆ. ದೇವರಿಗೆ ನೈವೇದ್ಯ, ಪ್ರಸಾದ, ಹೂವುಗಳನ್ನು ಅರ್ಪಿಸಲು ಹೋಗುತ್ತಾರೆ. ಆದರೆ ಇಲ್ಲಿರುವ ದೇವಿಯ ದೇವಸ್ಥಾನದಲ್ಲಿ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಪೂರೈಸಲು ಶೂ ಮತ್ತು ಚಪ್ಪಲಿಗಳ ಮಾಲೆ(Footwear Festival)ಗಳನ್ನು ಅರ್ಪಿಸುತ್ತಾರೆ. ಈ ದೇವಸ್ಥಾನದಲ್ಲಿ ಭಕ್ತರು ಇದನ್ನು ಏಕೆ ಮಾಡುತ್ತಾರೆ ಮತ್ತು ಈ ದೇವಾಲಯಕ್ಕೆ ಸಂಬಂಧಿಸಿದ ಸಂಪ್ರದಾಯಗಳು ಯಾವುವು ಎಂಬುದನ್ನು ತಿಳಿಯಿರಿ. ಪಾದರಕ್ಷೆ ಉತ್ಸವವನ್ನು ಆಯೋಜಿಸಲಾಗುತ್ತದೆ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಲಕ್ಷ್ಮಿದೇವಿ ದೇವಸ್ಥಾನ(Laxmidevi Temple)ವಿದೆ. ಪ್ರತಿ …
Read More »