Breaking News

Daily Archives: ಜನವರಿ 23, 2022

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಾಗಾಭರಣ

ಬೆಂಗಳೂರು : ಟಿ.ಎಸ್.ನಾಗಾಭರಣ ಇಂದು 69ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರಿ ನೌಕರಿಯಲ್ಲಿ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ನಿವೃತ್ತಿಯಾಗಬೇಕಿತ್ತು. ಆದರೆ ಸದಾ ಪಾದರಸದಂತಿರುವ ಇವರಿಗೆ ನಿವೃತ್ತಿಯೆಂಬುದೇ ಇಲ್ಲ. ಸಿನಿಮಾ, ನಾಟಕ, ಧಾರಾವಾಹಿಗಳ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನೂ ಹೊತ್ತಿರುವ ಇವರದ್ದು ಬಿಡುವಿಲ್ಲದ ದುಡಿಮೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಇವರಿಗೆ ಇಂದು ಕನ್ನಡ ಸಿನಿಮಾದ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ರಾಜಕೀಯ ರಂಗದ ದಿಗ್ಗಜರು ಹಾರೈಸಿದ್ದಾರೆ. ಜೊತೆಗೆ ಬಾಲಿವುಡ್ ಸೇರಿದಂತೆ ವಿವಿಧ ಭಾಷೆಯ …

Read More »

ಪುಷ್ಪ’ ಸಿನಿಮಾ ಪ್ರೇರಣೆ : ಭೀಕರ ಹತ್ಯೆ ಮಾಡಿದ ಬಾಲಕರು

ಅಲ್ಲು ಅರ್ಜುನ್ ನಟಿಸಿರುವ ‘ಪುಷ್ಪ’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಮುನ್ನೂರು ಕೋಟಿಗೂ ಹೆಚ್ಚು ಹಣ ಗಳಿಸಿದೆ. ಲಕ್ಷಾಂತರ ಮಂದಿ ಸಿನಿಮಾವನ್ನು ನೋಡಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮ್ಯಾನರಿಸಂ, ಸಿನಿಮಾದಲ್ಲಿನ ಹಾಡುಗಳು, ಡ್ಯಾನ್ಸ್ ಸ್ಟೆಪ್‌ಗಳನ್ನು ಜನರು ಅನುಕರಿಸುತ್ತಿದ್ದಾರೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ದೆಹಲಿಯ ಮೂವರು ಬಾಲಕರು ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾಗಿ ಕೊಲೆಯೇ ಮಾಡಿಬಿಟ್ಟಿದ್ದಾರೆ! ದೆಹಲಿಯ ಮೂವರು ಬಾಲಕರು ‘ಪುಷ್ಪ’ …

Read More »

ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು.

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. …

Read More »

ಮತ್ತೊಂದು ಸರ್ಕಾರಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೇಹೊನ್ನತ್ತಿ ಗ್ರಾಮ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಅವರು, ನಿನ್ನೆ ಸೋಂಕಿನ ಪ್ರಕರಣದ ಕಾರಣದಿಂದಾಗಿ ಶಾಲೆಯಲ್ಲಿ ಕೊರೋನಾ ಪರೀಕ್ಷೆಯನ್ನು ಮಾಡಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 11 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯ …

Read More »

ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅಭಿನಂದಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗೋಕಾಕ ಮತಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದು ಘಟಪ್ರಭಾದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಶಿವಾಪೂರದ ಕಿರಣ ಬಸಗೌಡ ಪಾಟೀಲ ಹಾಗೂ ಮಮದಾಪೂರ ಗ್ರಾಮದ ಕುಮಾರಿ …

Read More »

ಬೆಳಗಾವಿ:ಜಾರಕಿಹೊಳಿ ಸಹೋದರನ್ನು ದೂರವಿಟ್ಟು ಅರಣ್ಯ ಸಚಿವ ಉಮೇಶ ಕತ್ತಿ ನಿವಾಸದಲ್ಲಿ ರ‌ಹಸ್ಯ ಸಭೆ

ಸಚಿವ ಉಮೇಶ ಕತ್ತಿ ಅವರು ತಮ್ಮ ನೇತೃತ್ವದಲ್ಲಿ ಪಕ್ಷದ ಕೆಲವು ಮುಖಂಡರೊಂದಿಗೆ ರಹಸ್ಯವಾಗಿ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ ಹಾಗೂ ಹಲವು ಚರ್ಚೆಗಳಿಗೂ ಗ್ರಾಸವಾಗಿದೆ. ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಲಾಗಿದೆ.   ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಸಭೆ ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.   ಇಲ್ಲಿನ ಕತ್ತಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಚಿಕ್ಕೋಡಿ …

Read More »

ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ   ಬೆಳಗಾವಿ: ಕರೋನಾ ಸೋಂಕಿನ ಭೀತಿ ಹೆಚ್ಚಳ ಕಾರಣ ಗ್ರಾಮೀಣ ಜನತೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.   ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಟೀಮ್‌ ರಾಹುಲ್‌ ಸತೀಶ್‌ ಜಾರಕಿಹೊಳಿ ವತಿಯಿಂದ ಭಾನುವಾರ …

Read More »

ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ

ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.   ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ …

Read More »

ಗಂಗಾ ರಾಮ್ ಲಕ್ಷ್ಮಣ ಕಾಂಬಳೆ ರೈತನ ಹೊಲಕ್ಕೆ ಶಾಟ್ ಸರ್ಕಿಟನಿಂದ ಬೆಂಕಿ

ವರ್ಷಗಟ್ಟಲೆ ಬಿಸಿಲು ಚಳಿ ಮಳೆಯೆನ್ನದೆ ಕಷ್ಟಪಟ್ಟು ದುಡಿಯುವ ರೈತರ ಗೋಳು ಕೇಳುವವರಾರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರಗಾಂವ ಎಂಬ ಗ್ರಾಮದಲ್ಲಿ ಗಂಗಾ ರಾಮ್ ಲಕ್ಷ್ಮಣ್ ಕಾಂಬಳೆ ಎಂಬ ಬಡ ರೈತನ ಹೊಲದಲ್ಲಿ ನಿನ್ನೆ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿಗಳ ನಡುವೆ ಘರ್ಷಣೆ ಉಂಟಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಸುಮಾರು ಎರಡೂವರೆ ಎಕರೆ ಕಬ್ಬು ಸುಟ್ಟು ಕರಕಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ.ಆದರೆ …

Read More »

ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನಕ್ಕೆ ಬೇಡಿಕೆ; ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ

ಬೆಳಗಾವಿ: ರಾಜ್ಯ ಸಚಿವ ಸಂಪುಟ (Cabinet) ಪುನಾರಚನೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಹಾರ ಸಚಿವ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ನಿನ್ನೆ (ಜ.22) ಗೌಪ್ಯ ಸಭೆ ನಡೆದಿದೆ. ಜಾರಕಿಹೊಳಿ ಸಹೋದರರನ್ನ ಹೊರಗಿಟ್ಟು ಉಮೇಶ್ ಕತ್ತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಉಮೇಶ್ ಕತ್ತಿ ನಿವಾಸದಲ್ಲಿ ಸಭೆ ನಡೆದಿದ್ದು, ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. …

Read More »