Breaking News

Daily Archives: ಜನವರಿ 27, 2022

ದೇಶದಲ್ಲಿ 2.86 ಲಕ್ಷ ಹೊಸ ಪ್ರಕರಣ,

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂಲಕ ಬುಧವಾರಕ್ಕೆ ಹೋಲಿಸಿದಾಗ ಅಲ್ಪ ಏರಿಕೆ ಕಂಡುಬಂದಿದೆ. ಬುಧವಾರದಂದು 2.85 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಕಳೆದ 24 ತಾಸಿನಲ್ಲಿ 573 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 3,06,357 ಮಂದಿ ಗುಣಮುಖರಾಗಿದ್ದು, ಒಟ್ಟು 3,76,77,328 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣ …

Read More »

‘ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ’ – ಸಚಿವ ನಾಗೇಶ್

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು. ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ …

Read More »

ಹೃದಯಾಘಾತದಿಂದ ಎಎಸ್‌ಐ ಸುರೇಶ್​ ಸಾವು

ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು. ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.  

Read More »

ಡಿ.ಕೆ. ಶಿವಕುಮಾರ್ ಗೂ ನಮಗೂ ಹೊಂದಾಣಿಕೆಯಾಗಲ್ಲ. ,ಶೀಘ್ರವೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ: ಸಿ.ಎಂ. ಇಬ್ರಾಹಿಂ

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು …

Read More »

ಸಿದ್ದುಗೆ ಹೈಕಮಾಂಡ್ ಟಕ್ಕರ್

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಹಿರಿಯ ನಾಯಕ‌ ಬಿ.ಕೆ.ಹರಿಪ್ರಸಾದ್ ನೇಮಕ ಈಗ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗುತ್ತಿದ್ದು, ಮಾಜಿ ಸಿಎಂ‌ ಸಿದ್ದರಾಮಯ್ಯ ಅವರಿಗೆ ಟಕರ್ ನೀಡುವುದಕ್ಕಾಗಿಯೇ ಈ‌ ನೇಮಕ ನಡೆದಿದೆ ಎಂಬ ಮಾತು ಕೇಳಿ ಬಂದಿದೆ.   ಎಐಸಿಸಿಯಲ್ಲಿ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿರುವ ಹರಿಪ್ರಸಾದ್ ದಿಲ್ಲಿ ಅಂಗಣದಲ್ಲಿ ಪಳಗಿದ ರಾಜಕಾರಣಿ. ಕಾಂಗ್ರೆಸ್ ವರಿಷ್ಠರ ಜತೆಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಆದರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜತೆ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …

Read More »

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.   ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.

ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು. ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. …

Read More »

ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …

Read More »

ಕ್ರಿಕೆಟರ್ ಶಿಖರ್​ ಧವನ್​​ ಕಪಾಳಕ್ಕೆ ಬಾರಿಸಿದ ತಂದೆ..!

ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ. ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ ಮಾಡಿದ್ದಾರೆ. ಇದರಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್‌ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ …

Read More »