Breaking News

Monthly Archives: ಜನವರಿ 2022

ಎಂಇಎಸ್ ನಾಯಕ ದೀಪಕ ಧಳವಿ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈಲಿನಿಂದ ಬಿಡುಗಡೆ

ಎಂಇಎಸ್ ನಾಯಕ ದೀಪಕ ಧಳವಿ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈಲಿನಿಂದ ಬಿಡುಗಡೆಯಾದ ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ, ಜೈಲಿನಿಂದ ಬಿಡುಗಡೆಯಾದೆವೆಂದು ಸಂತಸ ಪಡಬೇಕೋ, ಅಥವಾ ನಮ್ಮ ಮೇಲೆ ನಮ್ಮ ಸರಕಾರವೇ ಕೇಸ್ ಹಾಕಿದ್ದಕ್ಕೆ ದುಃಖ ಪಡಬೇಕೋ ಒಂದೂ ತಿಳಿಯುತ್ತಿಲ್ಲ. ಇನ್ನು ನಗರದಲ್ಲಿ ಪೊಲೀಸ್ ವಾಹನಗಳನ್ನು ಸುಟ್ಟು ಗ್ಲಾಸ್‍ಗಳನ್ನು ಪುಡಿ ಮಾಡಿದ ಆರೋಪಿಗಳ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕು. …

Read More »

ಬೆಳಗಾವಿಯ ರೈಲ್ವೇ ನಿಲ್ದಾಣದಲ್ಲಿ ಕೋವಿಡ್ ತಪಾಸಣೆ ತಪ್ಪಿಸಿಕೊಳ್ತಿರುವ ಪ್ರಯಾಣಿಕರು

ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಆದ್ರೂ ಕೂಡ ಇಲ್ಲಿನ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಯಾವುದೇ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಹೌದು ಬೆಳಗಾವಿಯ ಕೇಂದ್ರ ರೈಲ್ವೇ ನಿಲ್ದಾಣದ ಮುಖ್ಯ ದ್ವಾರದಲ್ಲಿ ಮಾತ್ರ ರೈಲ್ವೇ ಇಲಾಖೆ ಸಿಬ್ಬಂದಿ ಕಟ್ಟು ನಿಟ್ಟಾಗಿ ತಪಾಸಣೆ ಮಾಡುತ್ತಿದ್ದಾರೆ. ಆದರೆ ಕಳ್ಳ ಮಾರ್ಗ ಮೂಲಕ ಪ್ರಯಾಣಿಕರು ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವುದು ಬೆಳಕಿಗೆ ಬಂದಿದೆ. ಇಲ್ಲಿನ …

Read More »

ಡಿಕೆ ಸೋದರರಿಗೆ ಪೌರುಷ ಇದೆಯಾ?: ಅಶ್ವತ್ಥನಾರಾಯಣ ಸವಾಲು

ರಾಮನಗರ: ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸುತನ ಇರೋದು ಬಿಜೆಪಿಗೆ ಮಾತ್ರ; ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಂಥಾಹ್ವಾನ ನೀಡಿದ್ದಾರೆ. `ಡಿ.ಕೆ.ಶಿವಕುಮಾರ್ ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿ, …

Read More »

ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಆರ್ಥಿಕ ನೆರವಿಗೆ `E-KYC’ ಕಡ್ಡಾಯ

ಹಾವೇರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಯ 1,96,387 ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ.   E-KYC ಯನ್ನು ಎರಡು ವಿಭಾಗದಲ್ಲಿ ಕೈಗೊಳ್ಳಬಹುದಾಗಿದೆ. ರೈತರು https://pmkisan.gov.in ವೆಬ್‍ಸೈಟ್‍ನಲ್ಲಿ Farmers corner £À E-KYC ಅವಕಾಶದಡಿ ಈಗಾಗಲೇ ಪಿ.ಎಂ.ಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ …

Read More »

ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ

ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಾಣಾಳು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಂಡಸ್ತನವನ್ನು ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕು. ಪರಿಸರ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಅಲ್ಲಿ ಗಂಡಸ್ತನ ತೋರಿಸಬೇಕು ಎಂದು …

Read More »

ತಮಿಳುನಾಡಿಗೆ ನಿಗದಿಗಿಂತ ಹೆಚ್ಚು ನೀರು

ಬೆಂಗಳೂರು: ಮೇಕೆದಾಟು ಯೋಜನೆಗೆ ಅತ್ತ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಲೇ ಇದ್ದರೆ, ಇತ್ತ ಕಾವೇರಿಯಿಂದ ತಮಿಳುನಾಡಿಗೆ ಬಿಡಬೇಕಾದ ನೀರು ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಹರಿದು ಹೋಗಿದೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪಿನ ಪ್ರಕಾರ, ಸಾಮಾನ್ಯ ಜಲವರ್ಷದಲ್ಲಿ ತಮಿಳುನಾಡಿಗೆ 2018-19ನೇ ಸಾಲಿನಿಂದ 177.25 ಟಿಎಂಸಿ ಅಡಿ ನೀರು ಬಿಡಬೇಕಿದೆ. ಆದರೆ, ಪ್ರಸಕ್ತ ವರ್ಷವೂ ಸೇರಿ ಕಳೆದ ನಾಲ್ಕು ವರ್ಷಗಳಲ್ಲಿ ಈ ಪ್ರಮಾಣಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. …

Read More »

23 ಪೊಲೀಸರಿಗೆ ಸೋಂಕು ದೃಢ

ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ 21 ಕಾನ್ಸ್‌ಟೇಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೊರೊನಾ ಸೋಂಕಿತ ಪೊಲೀಸರನ್ನು ಹೋಂ ಕ್ವಾರೆಂಟೇನ್ ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ

Read More »

ಸುಪ್ರೀಂಕೋರ್ಟ್ ನ ನಾಲ್ವರು ಜಡ್ಜ್ ಗಳಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 150 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್‍ ಗೆ ಒಳಗಾಗಿದ್ದಾರೆ.ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 32 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ನಾಲ್ವರಿಗೆ ಪಾಸಿಟಿವ್ ಪತ್ತೆಯಾಗಿದೆ. ಇಬ್ಬರಿಗೆ ಗುರುವಾರವೇ ಸೋಂಕು ಕಾಣಿಸಿಕೊಂಡಿತ್ತು. ಇತ್ತೀಚೆಗೆ ನಿವೃತ್ತರಾದ ನ್ಯಾಯಮೂರ್ತಿ ಆರ್.ಸುಬ್ಬಾಶ್ ರೆಡ್ಡಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗಿಯಾಗಿದ್ದ ನಾಲ್ವರು ನ್ಯಾಯಮೂರ್ತಿಗಳಿಗೆ ಪಾಸಿಟಿವ್ ದೃಢಪಟ್ಟಿದೆ.  

Read More »

ಹಾವು ಕಚ್ಚಿ ವಿದ್ಯಾರ್ಥಿ ಸಾವು

ಮೈಸೂರು: ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ವಿಶ್ವಚೇತನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅಬ್ರಾರ್ ಪಾಷ ಎಂಬಾತನೇ ಹಾವು ಕಚ್ಚಿ ಸಾವನ್ನಪ್ಪಿದ ವಿದ್ಯಾರ್ಥಿ.   ಭಾನುವಾರ ರಜೆಯಿದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಕೊಳ್ಳೇಗಾಲದಿಂದ ತಲಕಾಡಿಗೆ ಬಂದಿದ್ದನು. ಇಲ್ಲಿನ ಕಾವೇರಿ ನದಿ ಮತ್ತು ಮರಳಿನಲ್ಲಿ ಓಡಾಡುತ್ತಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಾ ಸುತ್ತಮುತ್ತ ಓಡಾಡುತ್ತಿದ್ದ ವೇಳೆ ಬದಿಯಲ್ಲಿದ್ದ …

Read More »

ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.ಕಿತ್ತೂರು ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 15 ರಿಂದ 18ವರ್ಷದ 68 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳ ಹಿಂದೆ 12 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿತ್ತು. ಸೋಂಕಿತರ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೋಲಾರದ ದೇವರಾಜ್ ಅರಸು ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 6 ವಿದ್ಯಾರ್ಥಿನಿಯರು ಹಾಗೂ ಅಡುಗೆಭಟ್ಟನಿಗೆ ಕೊರೊನಾ …

Read More »