Breaking News

Daily Archives: ಫೆಬ್ರವರಿ 4, 2022

ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎಂದು ಭಾವಿಸುವುದನ್ನು ನಿಲ್ಲಿಸಬೇಕು”

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರದಂದು ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಾ ದೇಶದಲ್ಲಿ ಎರಡು ಭಾರತಗಳಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ‘ಇಂದಿರಾ ಈಸ್ ಇಂಡಿಯಾ’ ನಂಬಿಕೆಯಿಂದ ಹೊರಬರಬೇಕು ಎಂದು ಹೇಳಿದರು.   ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಪರವಾಗಿ ಮಾತನಾಡಿದ ನಖ್ವಿ, ‘ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎನ್ನುವ ಭಾವನೆಯಿಂದ ಹೊರಬರಬೇಕು.ಕಾಂಗ್ರೆಸ್ ಎಂದರೆ ದೇಶ ಮತ್ತು ದೇಶ ಎಂದರೆ ಕಾಂಗ್ರೆಸ್ …

Read More »

ಕ್ಯಾನ್ಸರ್ ತಡೆಗೆ ನೀಡುವ ಹೆಚ್‌ಪಿವಿ ಲಸಿಕೆ ಅಭಿಯಾನ ಕೋವಿಡ್‌ನಿಂದಾಗಿ ಸ್ಥಗಿತ..!

ಹೈದರಾಬಾದ್‌: ಜಗತ್ತಿನಲ್ಲಿ ಹೆಚ್ಚಿನ ಸಾವುಗಳ ಪ್ರಮುಖ ಕಾರಣಗಳಲ್ಲಿ ಕ್ಯಾನ್ಸರ್‌ ಕೂಡ ಒಂದು. ಇಂದು ವಿಶ್ವ ಕ್ಯಾನ್ಸರ್‌ ಜಾಗೃತಿ ದಿನವಾಗಿದ್ದು, ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ಕ್ಯಾನ್ಸರ್‌ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಸ್ತನ ಕ್ಯಾನ್ಸರ್‌, ಗರ್ಭ ಕ್ಯಾನ್ಸರ್‌, ಶ್ವಾಸಕೋಶ, ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಿವೆ. ಕ್ಯಾನ್ಸರ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಗತ್ತನ್ನು ಒಟ್ಟುಗೂಡಿಸುವ ಜಾಗತಿಕ ಉಪಕ್ರಮವೇ ವಿಶ್ವ ಕ್ಯಾನ್ಸರ್‌ ದಿನವಾಗಿದ್ದು, ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸುವ …

Read More »

ಲವರ್​ಗಳ ದಿನದಂದು ನನಗೆ ಯಾವ ಪಕ್ಷದ ಮೇಲೆ ಲವ್ ಅಂತ ಹೇಳುತ್ತೇನೆ

ಫೆಬ್ರವರಿ 14 ರಂದು (February) ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ದಿನ  ಮುಂದಿನ ರಾಜಕೀಯ ನಿರ್ಧಾರವನ್ನು ನಾನು ಪ್ರಕಟಿಸುತ್ತೇನೆ, ಆದರೆ ಯಾವುದೇ ಕಾರಣಕ್ಕೂ ಹೊಸ ಪಕ್ಷ ಕಟ್ಟುವುದಿಲ್ಲ. ಮೊದಲು ಜನರ ಅಭಿಪ್ರಾಯವನ್ನು ಕೇಳಿಕೊಂಡು ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂದು ನಿರ್ಧರಿಸುತ್ತೇನೆ ಎಂದು ಮಾಜಿ ಕಾಂಗ್ರೆಸ್​ ಮುಖಂಡ, ಎಂಎಲ್​ಸಿ ಸಿ.ಎಂ.ಇಬ್ರಾಹಿಂ (C.M Ibrahim)  ಹೇಳಿದ್ದಾರೆ. ಮೈಸೂರಿನಲ್ಲಿ (Mysuru) ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕರ್ನಾಟಕ ರಾಜ್ಯದಲ್ಲಿ  ಕಾಂಗ್ರೆಸ್‌ನ  (Congress) ಅಧ್ಯಾಯ ಮುಗಿದು ಹೋಗಿದೆ. ಯಾರಿಗೆ ಏನು ಬೇಕೋ ಅದನ್ನು ತಗೊಂಡು ಹೋಗ್ತಿದ್ದಾರೆ. ಮಂಚ, ಬೆಡ್‌, ದಿಂಬು  ಹೀಗೆ ಅವಶ್ಯಕತೆಗೆ ತಕ್ಕಂತೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ನಿಜಕ್ಕೂ ಕನಸಿನ ಮಾತು ಎಂದು ತಮ್ಮ ಹಳೆಯ ಪಕ್ಷದ ಬಗ್ಗೆ ವ್ಯಂಗ್ಯವಾಡಿದ್ದಾರೆ

Read More »

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆ ಖಾಲಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ …

Read More »

ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಸ್ವ ಉದ್ಯೋಗ ಮಾಡುವ ದೃಷ್ಟಿಯಿಂದ ಮುಂಬರುವ ಬಜೆಟ್ ನಲ್ಲಿ ಹೊಲಿಗೆಯಂತ್ರ ನೀಡುವ ಯೋಜನೆ ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಸಚಿವ ಶಿವರಾಮ ಹೆಬ್ಬಾರ್, ಕಾರ್ಮಿಕರಿಗೆ ಹೊಲಿಗೆ ಯಂತ್ರ ಯೋಜನೆ ಜಾರಿಗೆ 15 ಕೋಟಿ ರೂ. ಮೀಸಲಿಡಲಾಗಿದೆ. …

Read More »