ಬೆಂಗಳೂರು: ರಾಜ್ಯದ ಲಕ್ಷಾಂತರ ಸಣ್ಣ ರೈತರ ಪಾಲಿಗೆ ಕಂಟಕಪ್ರಾಯವಾಗಿ ‘ಬಂಧನ ಭೀತಿ’ ತಂದೊಡ್ಡಿರುವ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಕೊಂಚ ಸಡಿಲಿಸಲು ಸರ್ಕಾರ ನಿರ್ಧರಿಸಿದೆ. ಜತೆಗೆ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕಾಫಿ, ಅಡಕೆ ಇತ್ಯಾದಿ ಬೆಳೆ ಬೆಳೆಯುತ್ತಿರುವ ರೈತರಿಗೆ ಅದೇ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಬಯಸಿದೆ. ಕಂದಾಯ ಇಲಾಖೆಯಿಂದ ಮುಂದಿನ ಕೆಲವು ವಾರ, ತಿಂಗಳಲ್ಲಿ ಒಂದಷ್ಟು ಮಹತ್ವಪೂರ್ಣ ತೀರ್ವನಗಳನ್ನು ಎದುರು ನೋಡಬಹುದಾಗಿದೆ. ಸೋಮವಾರ ವಿಜಯವಾಣಿ ಕಚೇರಿಯಲ್ಲಿ ನಡೆದ …
Read More »Daily Archives: ಫೆಬ್ರವರಿ 8, 2022
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಡಬಲ್ ಗಿಫ್ಟ್ : ʼಫಿಟ್‌ಮೆಂಟ್ʼ ಜೊತೆ ʼಸ್ಯಾಲರಿʼಯೂ ಹೆಚ್ಚಳ |
ನವದೆಹಲಿ : ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಪ್ರಕಾರ, ದೇಶಾದ್ಯಂತ ಸರ್ಕಾರಿ ನೌಕರರು(Government Employees) ಶೀಘ್ರದಲ್ಲೇ ಒಳ್ಳೆಯ ಸುದ್ದಿ ಪಡೆಯಬಹುದು. ಮಾಧ್ಯಮ ವರದಿಗಳ ಪ್ರಕಾರ, ಕೇಂದ್ರ ಸರ್ಕಾರವು ಕೇಂದ್ರ ಮತ್ತು ರಾಜ್ಯ ನೌಕರರ ಫಿಟ್‌ಮೆಂಟ್ ಅಂಶದಲ್ಲಿ ಹೆಚ್ಚಳವನ್ನ ಶೀಘ್ರದಲ್ಲೇ ಘೋಷಿಸಬಹುದು. ವರದಿಗಳ ಪ್ರಕಾರ, ಫಿಟ್‌ಮೆಂಟ್ ಅಂಶದ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಫಿಟ್‌ಮೆಂಟ್ ಅಂಶವನ್ನು 2.57 ಪಟ್ಟು ಹೆಚ್ಚಿಸಿ …
Read More »ವಿಚ್ಛೇತ ಮಹಿಳೆಯೊಂದಿಗೆ ಪ್ರೀತಿ ನಾಟಕವಾಡಿ ವಂಚನೆ
ಬೆಂಗಳೂರು,ಫೆ.7-ವಿಚ್ಛೇತ ಮಹಿಳೆಯನ್ನು ಪುಸಲಾಯಿಸಿ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿ ಕೊಂಡು ಮೋಸ ಮಾಡಿರುವ ವ್ಯಕ್ತಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂದಿರಾನಗರದ 30 ವರ್ಷದ ನೊಂದ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಪತಿಗೆ ವಿಚ್ಛೇಧನ ನೀಡಿದ್ದ ಮಹಿಳೆ ಇಬ್ಬರು, ಮಕ್ಕಳೊಂದಿಗೆ ಇಂದಿರಾನಗರದಲ್ಲಿ ಪ್ರತ್ಯೇಕ ವಾಸವಾಗಿದ್ದಾರೆ. ಜೀವನ ನಿರ್ವಹಣೆಗಾಗಿ ಆ ಮಹಿಳೆ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. …
Read More »ಎಂದೂ ಇಲ್ಲದ ಹಿಜಾಬ್ ವಿವಾದ ಇವತ್ತೇಕೆ ಸೃಷ್ಟಿ?: ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯದಲ್ಲಿ ಬುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಎಂದೂ ಇಲ್ಲದ ಹಿಜಾಬ್ ವಿವಾದ ಇವತ್ತೇಕೆ ಸೃಷ್ಟಿಯಾಗಿದೆ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಧರ್ಮಗಳ ಆಚಾರ ವಿಚಾರಕ್ಕೆ ಸಂವಿಧಾನದಲ್ಲೇ ಅವಕಾಶ ನೀಡಲಾಗಿದೆ. ನಮಗೆ ಯಾವ ಬಟ್ಟೆ ಬೇಕೋ, ಅದನ್ನು ತೊಡಬಹುದು. ಇಷ್ಟವಾದ ಆಹಾರ ಸೇವಿಸಬಹುದು. ಪ್ರತಿಯೊಂದಕ್ಕೂ ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಹಿಜಾಬ್ …
Read More »ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಆಡಿಯೋ ವೈರಲ್
ತುಮಕೂರು: ಆರ್ಕೆಸ್ಟ್ರಾ ಕಲಾವಿದೆಯರನ್ನ ವೇಶ್ಯಾವಾಟಿಕೆಗೆ ಬರುವಂತೆ ಹಣದ ಆಮಿಷವೊಡ್ಡಿದ ಆರೋಪ ಆರ್ಕೆಸ್ಟ್ರಾ ಮಾಲೀಕ ವಿರದ್ಧವೇ ಕೇಳಿಬಂದಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಏನೂ ತೊಂದರೆ ಆಗಲ್ಲ, ನಾನೂ ಜತೆಯಲ್ಲೇ ಇರ್ತೀನಿ… ಎಂದು ಮಹಿಳಾ ಕಲಾವಿದೆಯೊಬ್ಬರ ಜತೆ ಸಂಭಾಷಣೆ ನಡೆಸಿದ ಆಡಿಯೋ ವೈರಲ್ ಆಗಿದೆ. ತುಮಕೂರಿನ ಸಂಜಯ್ ಮೆಲೋಡಿಸ್ ಆರ್ಕೆಸ್ಟ್ರಾ ಮಾಲೀಕ ನಾಣಿ ಹಂದ್ರಾಳ್ ಆರೋಪಿ. ಮಹಿಳಾ ಕಲಾವಿದೆಯರಿಗೆ ಕರೆ ಮಾಡಿ ನಾಣಿ ಹಂದ್ರಾಳ್ ಹಣದ ಆಮಿಷವೊಡ್ಡಿದ ಆಡಿಯೋ ವೈರಲ್ ಆಗಿದೆ. …
Read More »ಅಕ್ರಮ ಆರೋಪ: ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಸ್ಥಗಿತ
ಬೆಂಗಳೂರು: ‘545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದಿದೆ’ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ಸೋಮವಾರ ತುರ್ತು ಸಂದೇಶ ಕಳುಹಿಸಿದ್ದಾರೆ. ‘ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು, ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ …
Read More »ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ : ಇಲ್ಲಿದೆ ಮೋದಿ ಮಾತಿನ ಹೈಲೈಟ್ಸ್
ದೆಹಲಿ : ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ ಸಂಸತ್ತನ್ನುದ್ದೇಶಿಸಿ ಮಾತನಾಡಿದರು. ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2022ರ ಮಂಡನೆಯ ನಂತ್ರ ಪ್ರಧಾನಿ ಮೋದಿ ಅವ್ರು ರಾಷ್ಟ್ರಪತಿ ಕೋವಿಂದ್ ಭಾಷಣವನ್ನ ಶ್ಲಾಘಿಸಿದ್ದರು. ಸಂಸತ್ತಿನ ಪ್ರಸ್ತುತ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಯಿತು. ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ಫೆಬ್ರವರಿ 2ರಂದು ಪ್ರಾರಂಭವಾಯಿತು. ಬಜೆಟ್ ಅಧಿವೇಶನದ …
Read More »
Laxmi News 24×7