ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »Daily Archives: ಮಾರ್ಚ್ 5, 2022
ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ
ಗೋಕಾಕ : ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ನಗರಸಭೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತ ಎಮ್.ಎಚ್.ಗಜಾಕೋಶ ಹೇಳಿದರು. ಶುಕ್ರವಾರದಂದು ಇಲ್ಲಿಯ ವಾರ್ಡ ನಂ. 29 ರ ಸೋಮವಾರ ಪೇಟೆಯಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ನಗರಸಭೆ ಹಾಗೂ ನಮ್ಮಭಿಮಾನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡ “ಜನ ಜಾಗೃತಿ ಅಭಿಯಾನ” ಪಾಲ್ಗೊಂಡು ಮಾತನಾಡುತ್ತಿದ್ದರು. ನಗರಸಭೆಯವರು ನಗರದ …
Read More »ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಆದೇಶ
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ …
Read More »ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಭೀಕರ ಯುದ್ಧ ನಡೆಸುತ್ತಿದ್ದು, ಅಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಭಾರತ ಅವರೆಲ್ಲರನ್ನೂ ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದರೂ ಹಲವರು ಇನ್ನೂ ಯುದ್ಧದ ಪರಿಸ್ಥಿತಿಯಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ ಹಾಗೂ ಉಕ್ರೇನ್‌ಗೆ ಭಾರತ ಮನವಿ ಮಾಡಿದೆ. ಉಕ್ರೇನ್‌ನಲ್ಲಿ ಫಿರಂಗಿ ದಾಳಿ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಅಪಾಯಕಾರಿಯಾಗಿದ್ದು, ಇಂತಹ ಸನ್ನಿವೇಶದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಯಾಣಿಸುವುದು ನಮಗೆ ಇಷ್ಟವಿಲ್ಲ. …
Read More »ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಕೈ ಬಿಡಲಾಗಿದೆ: ಉಮೇಶ್ ಕತ್ತಿ
ಚಿಕ್ಕೋಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ಕೈ ಬಿಟ್ಟಿದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲಿ ಈ ಯೋಜನೆಯನ್ನು ಕೈ ಬಿಡಲಾಗಿದೆ. ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು …
Read More »ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಬೊಮ್ಮಾಯಿ
ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್‍ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ …
Read More »ಮೀನು ವ್ಯಾಪಾರಿಗೆ ತಲವಾರು ತೋರಿಸಿ 2 ಲಕ್ಷ ರೂ. ದೋಚಿ ಪರಾರಿಯಾದ ಮೂವರು
ಉಳ್ಳಾಲ: ಟೆಂಪೋ ಅಡ್ಡಗಟ್ಟಿ ಮೀನು ವ್ಯಾಪಾರಿಯೊಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ 2 ಲಕ್ಷ ರೂ. ನಗದು ದೋಚಿಕೊಂಡು ಮೂವರು ಮುಸುಕುಧಾರಿಗಳು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ಹಲ್ಲೆಗೊಳಗಾದವರು. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ಕಾರಿನಲ್ಲಿ …
Read More »ಮುಸುಕುಧಾರಿಗಳ ಗುಂಪೊಂದು ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ
ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಪರಾರಿ ಆಗಿದೆ.ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಜಯಂತ್ ಅವರನ್ನು ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಖಾನಾಪುರ – ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುದಾರಿಗಳು ಕಾರು ತಡೆದು ಕಬ್ಬಿಣದ ರಾಡ್ಗಳಿಂದ ಥಳಿಸಿದ್ದಾರೆ. ಈ ವೇಳೆ, …
Read More »ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!
ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭವ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಭವ್ಯಾಳನ್ನು ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್ ಮಾಡಲಾಗಿತ್ತು. ಇದರಿಂದ ಮನನೊಂದು ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ, ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ. ಹೀಗಾಗಿ, ತಾನು ಬದುಕುವುದಿಲ್ಲ ಎಂದು ಲೇಡಿಸ್ ಪಿಜಿ ಕಟ್ಟಡದ …
Read More »ನವವಧು ಮೇಲೆ ಪತಿ ಸಹೋದರನಿಂದಲೇ ಅತ್ಯಾಚಾರ
ಆಕೆಗೆ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು. ಹೊಸ ಜೀವನದ ಹೊಸ್ತಿಲಿಗೆ ಆಸೆಗಣ್ಣುಗಳಿಂದಲೇ ಗಂಡನ ಮನೆಗೆ ಹೆಜ್ಜೆ ಇಟ್ಟಿದ್ದ ಆಕೆಗೆ, ತಿಂಗಳು ಕಳೆಯುವ ಮುನ್ನವೇ ನರಕ ದರ್ಶನವಾಗಿದೆ. ತನ್ನ ಗಂಡನ ಸಹೋದರನೆ ಇಪ್ಪತ್ತು ವರ್ಷದ ನವವಧುವಿನ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ್ದಾನೆ. ಈ ಅಮಾನವೀಯ, ಅನಾಗರಿಕ ಘಟನೆ ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ, ಡಾಂಕುರ್ ಪ್ರದೇಶದಲ್ಲಿ ಗುರುವಾರದಂದು ನಡೆದಿದೆ. ಹೀನ ಕೃತ್ಯ ಎಸಗಿದ ಪಾಪಿ ತಲೆಮರೆಸಿಕೊಂಡಿದ್ದು, ಪೊಲೀಸರ ವಿಶೇಷ ತಂಡವೊಂದು ಆತನನ್ನು ಹುಡುಕಲು …
Read More »
Laxmi News 24×7