Breaking News

Daily Archives: ಮಾರ್ಚ್ 14, 2022

ಅರುಣ್ ಶಹಾಪುರ ವಿರುದ್ಧ ಅಸಮಾಧಾನ ಸ್ಪೋಟ…! ಬಂಡಾಯ ಅಭ್ಯರ್ಥಿಯಾಗಿ ಕೋರೆ ಪುತ್ರಿ ಕಣಕ್ಕೆ!?

ಬೆಳಗಾವಿ: ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದಿರುವುದ್ದಕ್ಕೆ ಆಕ್ರೋಶ ಭುಗಿಲೆದ್ದಿದ್ದು, ಈ ನಡುವೆ ಹಾಲಿ ಎಂಎಲ್‍ಸಿ ಅರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಬೆಳಗಾವಿಯಲ್ಲಿ ಸಭೆ ಸೇರಿದ ಎರಡು ಸಾವಿರಕ್ಕೂ ಹೆಚ್ಚು ಶಿಕ್ಷಕರು, ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದಿಂದ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲೆಯವರಿಗೇ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಯಿತು. ಈಗಾಗಲೇ ಘೋಷಣೆ ಮಾಡಿದ …

Read More »

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನಕೊಲೆ

ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನನ್ನು ಕ್ರೂರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದ ಆರ್‌ಟಿಓ ಕಛೇರಿ ಮುಂಭಾಗದಲ್ಲಿ ನಡೆದಿದೆ. ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ಧಾರೂಢ ಶಿರಗುಪ್ಪಿ(25) ಕೊಲೆಯಾದ ವ್ಯಕ್ತಿ. ಸಿದ್ಧಾರೂಢ ಶಿರಗುಪ್ಪಿ ಕಳೆದ 2 ವರ್ಷಗಳಿಂದ ಮಾಜಿ ಡಿಸಿಎಂ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸವದಿಯ ಕಾರು ಚಾಲನಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ರಾತ್ರಿ ಪರಪ್ಪ …

Read More »

ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲೆ ಸಾವು – ತಂದೆ ಸ್ಥಿತಿ ಚಿಂತಾಜನಕ!

ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನ್ನೊವಾ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತ ಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೆ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದು, ತಂದೆಯ ಸ್ಥಿತಿ …

Read More »

ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಹೀಗಾಗಿಯೇ ಕಾಶ್ಮೀರದಲ್ಲಿ 370ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿದರು. ಇದಕ್ಕಾಗಿ …

Read More »

ಪಿಕ್‍ಪಾಕೆಟ್ ಪ್ರಕರಣದಲ್ಲಿ ನಟಿ ಅರೆಸ್ಟ್

ಕೋಲ್ಕತ್ತಾ: ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ, ಪಿಕ್‍ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ. ನಡೆದಿದ್ದೇನು?: ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್‍ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರು ನೋಡಿದ ನಂತರ ಶನಿವಾರ ಅವರನ್ನು ಬಂಧಿಸಲಾಗಿದೆ ಎಂದು ಬಿದಾನ್ ನಗರ್ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಂಧನದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧನೆ ವೇಳೆ ಆಕೆಯ ಬ್ಯಾಗ್‍ನಿಂದ …

Read More »

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. 

Read More »