ಬೆಳಗಾವಿ : ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು. ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮದ ಹಿರಿಯರು ಅಲಂಕೃತ ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು. ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಜಿಲ್ಲಾಧಿಕಾರಿಯನ್ನು ಕರೆದೊಯ್ದರು. ಗ್ರಾಮದ …
Read More »Daily Archives: ಮಾರ್ಚ್ 19, 2022
IPL 2022 :ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ
ಐಪಿಎಲ್ ಸೀಸನ್ 15 ಗಾಗಿ ಎಲ್ಲಾ ತಂಡಗಳ ಜೆರ್ಸಿ ಅನಾವರಣಗೊಂಡಿದೆ. ಈ ಬಾರಿ ಕೆಲ ತಂಡಗಳು ಕಳೆದ ಸೀಸನ್ನಲ್ಲಿ ಕಣಕ್ಕಿಳಿದ ಮಾದರಿಯ ಜೆರ್ಸಿಯಲ್ಲೇ ಕಾಣಿಸಿಕೊಳ್ಳಲಿದ್ದು, ಇನ್ನು ಕೆಲ ತಂಡಗಳ ಜೆರ್ಸಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಿವೆ. ಹಾಗೆಯೇ ಹೊಸ ಎರಡು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಹೊಸ ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಹಾಗಿದ್ರೆ 10 ತಂಡಗಳ ಜೆರ್ಸಿ ಹೇಗಿದೆ ನೋಡೋಣ…
Read More »ವೃದ್ಧಾಶ್ರಮಗಳಲ್ಲಿ ಅನ್ನದಾನ ನಡೆಸಿ ಪುನೀತ್ಗೆ ಅರ್ಥಪೂರ್ಣ ನಮನ ಸಲ್ಲಿಸಿದ ವಿಶಾಲ್
ಪುನೀತ್ ರಾಜ್‍ಕುಮಾರ್ ಸ್ನೇಹಿತ, ತಮಿಳು ನಟ ವಿಶಾಲ್ ನೆಚ್ಚಿನ ಗೆಳೆಯನ ಜನ್ಮದಿನವನ್ನು ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋಗಳನ್ನು ನಟ ಹಂಚಿಕೊಂಡಿದ್ದಾರೆ.ಮಾರ್ಚ್ 17ರಂದು ಪುನೀತ್ ರಾಜ್‍ಕುಮಾರ್ ಜನ್ಮದಿನವನ್ನು (Puneeth Rajkumar Birth Anniversary) ಅವರಿಲ್ಲ ಎಂಬ ಕೊರಗಿನ ನಡುವೆಯೂ ಸಾರ್ಥಕವಾಗಿ ಆಚರಿಸಲಾಯಿತು. ಕರ್ನಾಟಕದಲ್ಲಿ ಅವರ ಅಭಿಮಾನಿ ಸಂಘಟನೆಗಳು ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಾದರಿಯಾದರು. ರಕ್ತದಾನ ಸೇರಿದಂತೆ ಹಲವು ಶಿಬಿರಗಳನ್ನು ಆಯೋಜಿಸಲಾಗಿತ್ತು. ‘ಜೇಮ್ಸ್’ (James) ವೀಕ್ಷಿಸಿದ ನಂತರ ನೇತ್ರದಾನ ಹಾಗೂ ದೇಹದಾನಕ್ಕೆ …
Read More »ಪ್ರಾಥಮಿಕ ತರಗತಿ ಪುಸ್ತಕದಲ್ಲಿ ದೊಡ್ಮನೆ ಹುಡುಗನ ಯಶೋಗಾಥೆ!
ಬೆಂಗಳೂರು: ಜಾತಿ, ಜನಾಂಗ, ಧರ್ಮ, ಭಾಷೆ ಹೀಗೆ ಎಲ್ಲವನ್ನೂ ಮೀರಿ ಎಲ್ಲರಿಂದಲೂ ಹುಟ್ಟುಹಬ್ಬದ ಶುಭಾಶಯಗಳನ್ನ ಪಡೆದುಕೊಂಡ ಅಪೂರಪದ ವ್ಯಕ್ತಿ ಅಂದರೆ ಅದು ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್. ಯುವರತ್ನ ಅಪ್ಪುವಿನ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸುವ ಸಾಧ್ಯತೆಯಿದೆ. ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದು ಕನ್ನಡಿಗರ ಕಣ್ಮಣಿಯಾಗಿ ರಾರಾಜಿಸಿ ಇತ್ತೀಚೆಗಷ್ಟೆ ನಿಧನ ಹೊಂದಿರುವ ಪುನೀತ್ ರಾಜ್‍ಕುಮಾರ್ ಅವರ ಜೀವನ ಗಾಥೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ ಪಠ್ಯವನ್ನಾಗಿ ಮಾಡುವಂತೆ ಹಲವಾರು ಸಂಘ-ಸಂಸ್ಥೆಗಳಿಂದ …
Read More »ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ :ಪ್ರಕಾಶ್ ಬೆಳವಾಡಿ
ಮೈಸೂರು, ಮಾರ್ಚ್ 18: ಪ್ರಧಾನಿ ನರೇಂದ್ರ ಮೋದಿಯವರು ಒಳ್ಳೆಯ ಕೆಲಸ ಮಾಡಿದಾಗ ನಾನು ಅವರನ್ನು ಬೆಂಬಲಿಸಿರುವುದು ನಿಜ. ಹಾಗಾಗಿ, ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಂದ ಬಳಿಕವೂ ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ ಎಂದು ನಟ ಕಂ ನಿರ್ದೇಶಕ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ವಿವಿಧ ಕ್ಷೇತ್ರದ ಪ್ರಮುಖರ ಜತೆ ಆಯೋಜಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ …
Read More »ರಾಜ್ಯ ಸರ್ಕಾರಿ ನೌಕರರ ವೇತನದ ವಿಚಾರದಲ್ಲಿ ಸರ್ಕಾರ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದ್ದು, ಕರ್ನಾಟಕದ ಲಕ್ಷಾಂತರ ನೌಕರರಿಗೆ ಸಂತೋಷವನ್ನು ಉಂಟುಮಾಡಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನದ ವಿಚಾರದಲ್ಲಿ ಸರ್ಕಾರ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದ್ದು, ಕರ್ನಾಟಕದ ಲಕ್ಷಾಂತರ ನೌಕರರಿಗೆ ಸಂತೋಷವನ್ನು ಉಂಟುಮಾಡಿದೆ. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾಂತರವಾಗಿ ವೇತನ ಪರಿಷ್ಕರಿಸಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆ ನಿಟ್ಟಿನಲ್ಲಿ ಆಯೋಗವೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತ ಮುಖ್ಯಮಂತ್ರಿಯವರು ಈ ಘೋಷಣೆಯನ್ನು ಮಾಡಿದ್ದು, ಬೊಮ್ಮಾಯಿಯವರ ಈ ನಿರ್ಧಾರಕ್ಕೆ ಕರ್ನಾಟಕ …
Read More »20 ವರ್ಷಗಳಿಂದ ಸಿಗದ ಪರಿಹಾರ; ಡಿ.ಸಿ ಬರದಂತೆ ರಸ್ತೆ ಅಗೆದ ರೈತರು
ಭೀಮಳ್ಳಿ (ಕಲಬುರಗಿ ತಾ.): ರಸ್ತೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ 20 ವರ್ಷವಾದರೂ ಪರಿಹಾರ ನೀಡದ ಕಾರಣ, ರೋಸಿಹೋದ ಕೆಲ ರೈತರು ರಸ್ತೆ ಅಗೆದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ವಿರೋಧಿಸಿದರು. ಭೀಮಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದನ್ನು ತಿಳಿದು ಭೂಮಿ ಕಳೆದುಕೊಂಡ ರೈತರು, ಜಿಲ್ಲಾಧಿಕಾರಿ ಬರುವ ಮುನ್ನವೇ ಬುಲ್ಡೋಜರ್ ನೆರವಿನಿಂದ ಗ್ರಾಮದ ಮುಖ್ಯರಸ್ತೆ ಅಗೆದು ಗ್ರಾಮ ವಾಸ್ತವ್ಯ ಧಿಕ್ಕರಿಸಿದರು. ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್, ಕಂದಾಯ ಅಧಿಕಾರಿಗಳು, …
Read More »ಬೇಜವಾಬ್ದಾರಿಯಿಂದಾಗಿ ಪರಿಹಾರ ಸಿಗದೆ ಕಳೆದ ಮೂರು ವರ್ಷಗಳಿಂದ ನೆರೆ ಸಂತ್ರಸ್ತರು ಬಯಲಲ್ಲೇ ವಾಸಿಸುವಂತಾಗಿದೆ..
ಅಥಣಿ : 2019ರಲ್ಲಿ ಕೃಷ್ಣಾ ನದಿಯಲ್ಲಾದ ಪ್ರವಾಹದಿಂದ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆದೇಶ ಮಾಡಿತ್ತು. ಆದರೆ, ಜಿಲ್ಲಾಡಳಿತದ ಬೇಜವಾಬ್ದಾರಿಯಿಂದಾಗಿ ಪರಿಹಾರ ಸಿಗದೆ ಕಳೆದ ಮೂರು ವರ್ಷಗಳಿಂದ ನೆರೆ ಸಂತ್ರಸ್ತರು ಬಯಲಲ್ಲೇ ವಾಸಿಸುವಂತಾಗಿದೆ. ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮಕ್ಕೆ ಬಂದು ನೆರೆ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ವೆಚ್ಚದ ಮನೆ ಮಂಜೂರಾತಿ ಪತ್ರವನ್ನು …
Read More »ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ
ಬೆಂಗಳೂರು: ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆಯಷ್ಟೇ ಮನೆಯವರನ್ನು ಒಪ್ಪಿಸಿ ರಾಕೇಶ್ ಜೊತೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದ ಮಹಿಳೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ನೋಟ್ ಬರೆದಿಟ್ಟು ನೇಣಿಗೆ …
Read More »ಭಗವದ್ಗೀತೆ ಪಾಠ ಮಾಡಿದ್ರೆ ಹೊಟ್ಟೆ ತುಂಬಲಿದೆಯೇ!?.H.D.K.
ರಾಮನಗರ : ಸರ್ಕಾರದ ಮುಂದೆ ಟನ್‌ಗಟ್ಟಲೇ ಸಮಸ್ಯೆಗಳ ಸರಮಾಲೆಯೇ ಇದೆ. ಮೊದಲು ಅವುಗಳನ್ನ ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದೆಯೇ ಎಂದು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಮುಂದೆ ರಾಜ್ಯದಲ್ಲಿ ಬಗೆಹರಿಸುವ ಸಮಸ್ಯೆಗಳೇ ಸಾವಿರ ಸಂಖ್ಯೆಯಲ್ಲಿ ಇದ್ದಾವೆ. ಮೊದಲಿಗೆ ಆ ಸಮಸ್ಯೆಗಳನ್ನು ಬಗೆಹರಿಸುವ ಕಡೆ ಹೆಚ್ಚು ಗಮನ ಹರಿಸಬೇಕಿದೆ. ಭಗವದ್ಗೀತೆ ಪಾಠ …
Read More »
Laxmi News 24×7