ಇಂದು ಮುಂಬೈ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ 4ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಮೊದಲು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಹೀಗಾಗಿ ಕೆ.ಎಲ್ ರಾಹುಲ್ ಪಡೆ ಬ್ಯಾಟಿಂಗ್ . ಗುಜರಾತ್ ಟೈಟಾನ್ಸ್ ತಂಡ ಶುಭ್‌ಮನ್ ಗಿಲ್, ಮ್ಯಾಥ್ಯೂ ವೇಡ್ (ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, …
Read More »Daily Archives: ಮಾರ್ಚ್ 28, 2022
ಪರೀಕ್ಷೆ ಬರೆಯುತ್ತಿದ್ದಾಗ ಹಠಾತ್ ಹೃದಯಾಘಾತ; SSLC ವಿದ್ಯಾರ್ಥಿನಿ ಸಾವು
ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ.
Read More »ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹೂ ನೀಡಿ ಸ್ವಾಗತಿಸಿದ :ಶಾಸಕ ಅನಿಲ್ ಬೆನಕೆ!
ಬೆಳಗಾವಿ: ಶಾಲಾ- ಕಾಲೇಜುಗಳಲ್ಲಿ ‘ಧರ್ಮವಸ್ತ್ರ’ ಧರಿಸಿ ಬರಕೂಡದು ಎಂಬ ಹೈಕೋರ್ಟ್ ಆದೇಶದ ಮಧ್ಯೆಯೇ, ಇಂದಿನಿಂದ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಲೆಯೊಂದರಲ್ಲಿ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ. ನಗರದ ಸರ್ದಾರ್ ಹೈಸ್ಕೂಲ್ನಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದಾಗ, ಉಪಸ್ಥಿತರಿದ್ದ ಶಾಸಕ ಅನಿಲ ಬೆನಕೆ ಅವರು, ಮಕ್ಕಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದ್ದಾರೆ. ಇದೇ ವೇಳೆ ಹಿಜಾಬ್ ಧರಿಸಿ …
Read More »ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್! ಕಬ್ಬಿನ ಗದ್ದೆಗೆ ಅಧಿಕಾರಿಗಳನ್ನ ಆಹ್ವಾನಿಸಿದ ರೇವಣ್ಣ
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. …
Read More »ಒಬಿಸಿ ಮೀಸಲಾತಿ ಅಂತಿಮಗೊಳಿಸಿಯೇ ಜಿಪಂ, ತಾಪಂ ಚುನಾವಣೆ ನಡೆಸುತ್ತೇವೆ : ಸಚಿವ ಈಶ್ವರಪ್ಪ
ಬೆಂಗಳೂರು : ರಾಜ್ಯದಲ್ಲಿ ಒಬಿಸಿಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮಾಡುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಶಾಸನ ರಚನೆ ಕಲಾಪದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2022 ಅನ್ನು ಸಚಿವ ಈಶ್ವರಪ್ಪ ಮಂಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದ …
Read More »ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಅಧಿಕಾರ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ ಸರ್ಕಾರಿ ಜಮೀನು ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಗೆ ದೂರು ನೀಡಿದೆ. ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ …
Read More »ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ ಕಡಾಡಿ
ಬೆಳಗಾವಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೋಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಮಾ-27 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ದೇಶಾದ್ಯಂತ 100 ಹೊಸ ಸೈನಿಕ …
Read More »ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ …
Read More »ವಿವಾಹವಾದ 10 ದಿನದಲ್ಲೇ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಬೆಂಗಳೂರು: ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಂಪಾಪುರ ನಿವಾಸಿ ನಿಖೀಲಾ(37) ಮೃತ ಟೆಕಿ.ನಿಖೀಲಾ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಪತಿ ಅರ್ಜುನ್ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಬುಧವಾರ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ …
Read More »ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನಂತರ ಹತಾಶರಾಗುತ್ತಾರೆ ಎಂದುಕೊಂಡಿದ್ದೆವು. ಮುಖ್ಯಮಂತ್ರಿಯಾದವರು ಸ್ವಾಮೀಜಿಗಳ ಕುರಿತು ಹೇಳಿರುವ ಹೇಳಿಕೆ ಸರಿಯಲ್ಲ. ಚುನಾವಣೆಗೂ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ.ಎಲ್ಲವನ್ನು ತ್ಯಾಗ ಮಾಡಿ ಸಮಾಜ ಸೇವೆ ಮಾಡುವ ಸ್ವಾಮೀಜಿಗಳ ಬಗ್ಗೆ ಅವರು ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಸ್ವಾಮೀಜಿಗಳ ಕ್ಷಮೆಯನ್ನು ಸಿದ್ದರಾಮಯ್ಯ ಯಾಚಿಸಬೇಕು. ವೋಟ್ …
Read More »
Laxmi News 24×7