ಬೆಂಗಳೂರು: ಮೂರು ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ. ಒಂದು ಗಣಿಗಾರಿಕೆ, ಎರಡನೇಯದ್ದು ರಿಯಲ್ ಎಸ್ಟೇಟ್, ಮೂರನೇಯದ್ದು ಜಾತಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವ್ಯಾಖ್ಯಾನಿಸಿದರು. ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ರಾಜ್ಯದ ರಾಜಕೀಯ ವ್ಯವಸ್ಥೆ ಹಾಳಾಗಿರುವುದು ಗಣಿಗಾರಿಕೆಯಿಂದ. ಗಣಿ ಉದ್ಯಮಿಗಳು ಒಮ್ಮಿಂದೊಮ್ಮೆಲೆ ಎದ್ದು ಬಂದರು. ಸಾಮೂಹಿಕ ವಿವಾಹ ಕಾರ್ಯಕ್ರಮಗಳು, ಬಡ ವಿದ್ಯಾರ್ಥಿಗಳಿಗೆ ಪಾಸ್ ಹಂಚುವ ಕಾರ್ಯಕ್ರಮ ತರಲಾಯಿತು. ಇದರಿಂದಲೂ ರಾಜ್ಯದ ವ್ಯವಸ್ಥೆ ಹಾಳಾಯಿತು …
Read More »Daily Archives: ಮಾರ್ಚ್ 30, 2022
2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ
ಬೆಂಗಳೂರು : 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಇಲಾಖೆಯಲ್ಲಿ ದಕ್ಷತೆ, ಕಾರ್ಯಕ್ಷಮತೆ ಆಧಾರದಲ್ಲಿ 135 ವಿವಿಧ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಪದಕ ಪ್ರಕಟಿಸಿದೆ.ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು …
Read More »ಒಂದು ಅಂಕ ವ್ಯತ್ಯಾಸ ಇದ್ದರೂ ಅಂಕಪಟ್ಟಿ ಬದಲು?
ಬೆಂಗಳೂರು: ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ನು ಮುಂದೆ ಒಂದು ಅಂಕದ ವ್ಯತ್ಯಾಸ ಇದ್ದರೂ ಅಂಕ ಪಟ್ಟಿ ಬದಲಿಸಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಹಾಲಿ ನಿಯಮದ ಪ್ರಕಾರ ಮರು ಮೌಲ್ಯಮಾಪನದ ವೇಳೆ ಆರು ಅಂಕಗಳಿಗಿಂತ ಹೆಚ್ಚು ಅಂಕಗಳ ವ್ಯತ್ಯಾಸ ಇದ್ದರೆ ಮಾತ್ರ …
Read More »ವೈದ್ಯರಿಂದ ಗರ್ಭಕೋಶ ತೆಗೆಯುವ ದಂಧೆ: ಕೆ.ಜಿ.ನಾಗಲಕ್ಷ್ಮಿ ಬಾಯಿ ಆರೋಪ
ಬೆಂಗಳೂರು: ‘ಹೊಟ್ಟೆನೋವು ಎಂದು ಆಸ್ಪತ್ರೆಗಳಿಗೆ ಬರುವ ಹೆಣ್ಣುಮಕ್ಕಳಿಗೆ ಗರ್ಭಕೋಶ ಸಮಸ್ಯೆ ಇದೆ ಎಂದು ಹೆದರಿಸಿ, ಗರ್ಭಕೋಶ ತೆಗೆಸುವ ದಂಧೆ ವೈದ್ಯರಿಂದಲೇ ನಡೆಯುತ್ತಿದೆ’ ಎಂದು ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಕೆ.ಜಿ.ನಾಗಲಕ್ಷ್ಮಿಬಾಯಿ ಮಂಗಳವಾರ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ‘ಹಣದ ಆಸೆಗಾಗಿ ವೈದ್ಯರೇ ಈ ಕೃತ್ಯ ಎಸಗಿದ್ದಾರೆ. ಕಲಬುರಗಿ, ಹಾವೇರಿ, ಬೀದರ್, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿಗೆ ಗರ್ಭಕೋಶ ತೆಗೆಯಲಾಗಿದೆ’ ಎಂದು ದೂರಿದರು. …
Read More »ಟಿಪ್ಪು’ ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟೀಕೆ
ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಎಂದು ರಾಜ್ಯ ಬಿಜೆಪಿ ಘಟಕವು ಟೀಕಿಸಿದೆ. ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ ರಾಜಸತ್ತೆಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?’ ಎಂದು ಪ್ರಶ್ನಿಸಿದೆ. ‘ಟಿಪ್ಪು ಸುಲ್ತಾನ್ ಈ ದೇಶದ …
Read More »ನಿಗದಿತ ದಿನ ಬಾರದ ಕಸ ಸಂಗ್ರಹ ವಾಹನ
ತೀರ್ಥಹಳ್ಳಿ: ‘ತಾಲ್ಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕಸ ಸಂಗ್ರಹಣೆ ವಾಹನ ಆರಂಭದಲ್ಲೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮಸ್ಥರು, ಜನಪ್ರತಿನಿಧಿಗಳು ಗೋಗರೆದರೂ ಕಸ ವಿಲೇವಾರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ’ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬಂದಿದೆ. ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ವಾಣಿಜ್ಯ ಮಳಿಗೆ, ದಿನಂಪ್ರತಿ ಸಭೆ-ಸಮಾರಂಭಗಳು ನಡೆಯುವುದರಿಂದ ಹೆಚ್ಚು ಕಸ …
Read More »ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ
ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ . ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ …
Read More »ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಗ್ಯಾಂಗ್ ರೇಪ್:
ಆರೋಪಿಗಳ ಪೈಕಿ ರಜತ್ ಡೇಟಿಂಗ್ ಆಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಸಲುಗೆ ಹೆಚ್ಚಾದ ಹಿನ್ನೆಲೆ ಇದೇ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದ. ಈ ವೇಳೆ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ತಿಳಿದುಬಂದಿದೆ. ಬೆಂಗಳೂರು: ರಾಜಧಾನಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ …
Read More »ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಮುಖ್ಯ ಅಧೀಕ್ಷಕ ಸೇರಿ 7 ಶಿಕ್ಷಕರು ಸಸ್ಪೆಂಡ್
ಗದಗದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು. ಗದಗ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ. ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು
Read More »
Laxmi News 24×7