Breaking News

Daily Archives: ಮಾರ್ಚ್ 31, 2022

ದೆಹಲಿ ಸಿಎಂ ಕ್ಷಮೆ ಕೇಳಬೇಕು:ತೇಜಸ್ವಿ ಸೂರ್ಯ

ಬೆಂಗಳೂರು: ‘ದಿ ಕಾಶ್ಮೀರ ಫೈಲ್ಸ್’ ಮತ್ತು ಕಾಶ್ಮೀರಿ ಪಂಡಿತರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳುವವರೆಗೆ ಪ್ರತಿಭಟನೆಗಳು ಮುಂದುವರೆಯುತ್ತವೆ ಎಂದು ತೇಜಸ್ವಿ ಸೂರ್ಯ ಎಚ್ಚರಿಕೆ ನೀಡಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ …

Read More »

ತೈಲ ಬೆಲೆ ಏರಿಕೆಯಿಂದಾಗಿ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಗಳಿಸುತ್ತಿದೆ.: ರಾಹುಲ್‌ ಗಾಂಧಿ

ನವದೆಹಲಿ: ಹಣದುಬ್ಬರ ಹಾಗೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯ ವಿಜಯ್ ಚೌಕ್‌ನಲ್ಲಿ ಕಾಂಗ್ರೆಸ್ ಸಂಸದರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ, ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ 10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂಬತ್ತು ಬಾರಿ ಏರಿಕೆಯಾಗಿದ್ದು, ಇದರಿಂದ ಸಾಮಾನ್ಯ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. …

Read More »

ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ 72 ಸಂಸದರಿಗೆ ಬೀಳ್ಕೊಡುಗೆ; ಫೋಟೋಗೆ ಫೋಸ್‌

ನವದೆಹಲಿ: ರಾಜ್ಯಸಭೆಯ 72 ನಿವೃತ್ತ ಸದಸ್ಯರಿಗೆ ಇಂದು ಬೀಳ್ಕೊಡುಗೆ ನೀಡಲಾಗಿದ್ದು, ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು, ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರಧಾನಿ ಮೋದಿ ಹಾಗೂ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ ಗ್ರೂಪ್‌ ಫೋಟೋ ತೆಗೆಸಿಕೊಂಡರು. ಮೇಲ್ಮನೆಯ ಕೆಲ ಸದಸ್ಯರು ಈ ತಿಂಗಳು ನಿವೃತ್ತಿಯಾಗುತ್ತಿದ್ದು, ಇನ್ನು ಕೆಲವರು ಸ್ವಲ್ಪ ಸಮಯದ ನಂತರ ನಿವೃತ್ತರಾಗುತ್ತಿದ್ದಾರೆ. ಸಂಸತ್ತಿನ ಸಂಪ್ರದಾಯಕ್ಕೆ ಅನುಗುಣವಾಗಿ ಫೋಟೋ ಸೆಷನ್ ನಡೆಸಲಾಯಿತು. ರಾಜ್ಯಸಭೆಯು ನಿವೃತ್ತಿಯಾಗುವ ಸದಸ್ಯರಿಗೆ ಬೀಳ್ಕೊಡುಗೆ …

Read More »

ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಿದರೆ ಒಬಿಸಿ ಸಮುದಾಯಕ್ಕೆ ಅನ್ಯಾಯ : ಸಿದ್ದರಾಮಯ್ಯ

ಬೆಂಗಳೂರು : ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ.   ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ (Siddaramaiah) ಮಾತನಾಡಿದರು. ಆದೇಶದ …

Read More »

ಬಾರದ ಪ್ರಶ್ನೆ ಪತ್ರಿಕೆ, ಪರೀಕ್ಷೆ ರದ್ದು -ಪ್ರತಿಭಟನೆ

ಮಹಾಲಿಂಗಪುರ: ಪದವಿ ಪರೀಕ್ಷೆಗಳು ಮಾ.22ರಿಂದ ಪ್ರಾರಂಭವಾಗಿವೆ. ಬುಧವಾರ ನಡೆಯಬೇಕಿದ್ದ ಪದವಿ ಮೂರನೇ ಸೆಮಿಸ್ಟರ್‌ನ ಪತ್ರಿಕೋದ್ಯಮ ವಿಭಾಗದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮಗಳು ವಿಷಯದ ಪಶ್ನೆ ಪತ್ರಿಕೆ ಬಾರದೇ ಪರೀಕ್ಷೆ ರದ್ದಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು.   ಬುಧವಾರ ಪದವಿ ಇತರ ವಿಷಯದ ಪರೀಕ್ಷೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಆವರಣದ ಹೊರಗೆ ಪ್ರತಿಭಟನೆ ನಡೆಸಿದರು. …

Read More »

ಪ್ರತಿ ವರ್ಷ ಏಪ್ರಿಲ್ 1 ಅನ್ನು ಪ್ರಪಂಚದಾದ್ಯಂತ ʻಏಪ್ರಿಲ್ ಮೂರ್ಖರ ದಿನ(April Fools Day)ʼವನ್ನಾಗಿ ಆಚರಿಸಲಾಗುತ್ತದೆ.

ಪ್ರತಿ ವರ್ಷ ಏಪ್ರಿಲ್ 1 ಅನ್ನು ಪ್ರಪಂಚದಾದ್ಯಂತ ʻಏಪ್ರಿಲ್ ಮೂರ್ಖರ ದಿನ(April Fools Day)ʼವನ್ನಾಗಿ ಆಚರಿಸಲಾಗುತ್ತದೆ. ಇದು ಅನಿಯಮಿತ ನಗು, ಹಾಸ್ಯ ಮತ್ತು ಸಂತೋಷಕ್ಕೆ ಮೀಸಲಾದ ದಿನವಾಗಿದೆ. ಈ ವರ್ಷ ʻಏಪ್ರಿಲ್ ಮೂರ್ಖರ ದಿನʼವನ್ನು ಶುಕ್ರವಾರ(ನಾಳೆ) ಆಚರಿಸಲಾಗುತ್ತದೆ.   ಸಾಮಾನ್ಯವಾಗಿ ಜನರು ಈ ದಿನ ತಮಾಷೆಗಾಗಿ ಬೇರೊಬ್ಬರ ಕಾಲೆಳೆಯುತ್ತಾರೆ. ಈ ಸಂದರ್ಭದಲ್ಲಿ, ಜನರು ತಮ್ಮ ಪ್ರೀತಿಪಾತ್ರರನ್ನು ಅಥವಾ ಸ್ನೇಹಿತರನ್ನು ಅಚ್ಚರಿಗೊಳಿಸಲು ಉಲ್ಲಾಸದ ಆಲೋಚನೆಗನ್ನು ಮಾಡುತ್ತಾರೆ. ಇದು ಕೊನೆಯಲ್ಲಿ ನಕಲಿ ಎಂದು ಬಹಿರಂಗಪಡಿಸಿ …

Read More »

ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ “ಪರೀಕ್ಷಾ ಪೇ ಚರ್ಚಾ” 5ನೇ ಆವೃತ್ತಿ ಸಂವಾದ ಕಾರ್ಯಕ್ರಮಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 5ನೇ ಸಂವಾದ ಕಾರ್ಯಕ್ರಮದಲ್ಲಿ ಭಾರತ ಮತ್ತು ಹೊರದೇಶಗಳಿಂದ ಕೋಟ್ಯಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ವರ್ಚುಯಲ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ …

Read More »

ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾ

ಗಣೇಶ್ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮತ್ತೊಂದು ಹೊಸ ಸಿನಿಮಾ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಬ್ರೇಕ್ ಮಾಡಿತ್ತು. ಇದೀಗ ಆ ಸಿನಿಮಾದ ಟೈಟಲ್ ಲಾಂಚ್ ಗೆ ಸಿದ್ಧತೆ ನಡೆದಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ತಮ್ಮ ಹೊಸ ಸಿನಿಮಾದ ಶೀರ್ಷಿಕೆ ರಿವಿಲ್ ಮಾಡುವುದಾಗಿ ಸ್ವತಃ ಗಣೇಶ್ ಅವರೇ ಟ್ವಿಟ್ ಮಾಡಿದ್ದಾರೆ. ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು, ಪ್ರೀತಮ್ ಗುಬ್ಬಿ ಮುಂಗಾರು …

Read More »

ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

ಅಲಹಾಬಾದ್: ಟಿ20 ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ವರದಿಯಾಗಿದೆ. ಆಗ್ರಾ ಜಿಲ್ಲಾ ವಕೀಲರ ಸಂಘವು ವಿದ್ಯಾರ್ಥಿಗಳ ಪರವಾಗಿ ವಾದ ಮಂಡಿಸುವುದರ ವಿರುದ್ಧ ನಿರ್ಣಯ ಅಂಗೀಕರಿಸಿದ ಬಳಿಕ ಆರೋಪಿತ ವಿದ್ಯಾರ್ಥಿಗಳು 2021ರ ಡಿಸೆಂಬರ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗ್ರಾದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಅರ್ಷೀದ್ ಯೂಸುಫ್, ಇನಾಯತ್ ಅಲ್ತಾಫ್ …

Read More »

ಚುನಾವಣೆಗೆ ವರ್ಷವಿರುವಾಗಲೇ ಸಿದ್ದರಾಮಯ್ಯ ಸೋಲು ಒಪ್ಪಿಕೊಂಡಿದ್ದಾರೆ: ಬಿಜೆಪಿ Public TV03/31/2022

ಬೆಂಗಳೂರು: ಸಿದ್ದರಾಮಯ್ಯ ಅವರು ಚುನಾವಣೆಗೆ ವರ್ಷವಿರುವಾಗಲೇ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾಲೆಳಿದಿದೆ. ಟ್ವೀಟ್‍ನಲ್ಲಿ ಏನಿದೆ?: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿದ್ದಾಗಲೇ ಸೋತ ಭಯ, ಇಂದು ವಿಪಕ್ಷ ನಾಯಕನಾಗಿರುವಾಗಲೂ ಕಾಡುತ್ತಿದೆ. ಚುನಾವಣೆಗೆ ವರ್ಷವಿರುವಾಗಲೇ ಸೋಲು ಒಪ್ಪಿಕೊಂಡು ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಜನರು ತಿರಸ್ಕರಿಸುವ ಭಯವನ್ನು ಮತಯಂತ್ರದ ಮೇಲೆ ಹಾಕುವುದೇಕೆ? ಎಂದು ಟೀಕಿಸಿದೆ.ಬುಧವಾರ ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆಯಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ …

Read More »