ಬೆಂಗಳೂರು: ಆನೆ ಹಾವಳಿ ನಿಯಂತ್ರಣಕ್ಕಾಗಿ ಕಾರಿಡಾರ್ ನಿರ್ಮಿಸಲು ಬೇಕಾಗುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೂಡಿ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರಲ್ಲಿ ಮನವಿ ಮಾಡಲಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಸಭೆಯಲ್ಲಿ ನಿಯಮ 69ರಡಿ ಕಾಡಾನೆಗಳು ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ, ಪರಿಹಾರೋಪಾಯ ಬಗ್ಗೆ ಚರ್ಚೆಗೆ ಅವರು ಉತ್ತರ ನೀಡಿದರು. ಈಗಾಗಲೇ ಕಾರಿಡಾರ್ ಕಟ್ಟುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ …
Read More »Monthly Archives: ಮಾರ್ಚ್ 2022
ಬಾಲ್ಯ ವಿವಾಹದಲ್ಲಿ ಕರ್ನಾಟಕಕ್ಕೆ ನಂಬರ್-1 ಸ್ಥಾನ:
ಬೆಂಗಳೂರು: ಬಾಲ್ಯವಿವಾಹಗಳಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 2020-21ರಲ್ಲಿ 296 ಬಾಲ್ಯವಿವಾಹ ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಬಾಲ್ಯ ವಿವಾಹ ತಡೆಯುವ ಪ್ರಕರಣ ತಡೆಯಲು ಎಲ್ಲ ರೀತಿಯ ಪ್ರಯತ್ನ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೆ. ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಮಿನಿಸ್ತ್ರಿ ಅಫ್ ಹೋಮ್ ಅಫೇರ್ಸ್ …
Read More »ಆಚಾರ್ಯ ತಾಂತ್ರಿಕ ಕಾಲೇಜಿನ ವೈಮಾನಿಕ, ಬಾಹ್ಯಾಕಾಶ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ವಾಸ್ತವವಾಗಿ ಹಾರುವ ಅನುಭವ ನೀಡುವಂತಹ ವಿಮಾನವನ್ನು ನಿರ್ಮಿಸಿದ್ದಾರೆ
ಬೆಂಗಳೂರು: ವಿಮಾನದಲ್ಲಿ ಪೈಲೆಟ್ಗಳು ಕಾರ್ಯ ನಿರ್ವಹಿಸುವ ರೀತಿಯಲ್ಲಿ ನೀವೂ ಸಹ ಪೈಲಟ್ ಸೀಟಲ್ಲಿ ಕುಳಿತು ಕೆಲ ಹೊತ್ತು ಪೈಲಟ್ ಅಗಬಹುದಾಗಿದೆ. ಏರೋಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಂತೂ ಇದೊಂದು ನೈಜ ಅನುಭವ. ರಾಜಧಾನಿಯ ಚಿಕ್ಕಬಾಣಾವರ ಸಮೀಪದ ಆಚಾರ್ಯ ಶಿಕ್ಷಣ ಸಂಸ್ಥೆ ಆವರಣಕ್ಕೆ ಭೇಟಿ ನೀಡಿದರೆ ಈ ಎಲ್ಲ ವಿಶೇಷತೆ ಕಂಡುಬರುತ್ತದೆ. ಆಚಾರ್ಯ ತಾಂತ್ರಿಕ ಕಾಲೇಜಿನ ವೈಮಾನಿಕ, ಬಾಹ್ಯಾಕಾಶ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ವಾಸ್ತವವಾಗಿ ಹಾರುವ ಅನುಭವ ನೀಡುವಂತಹ ವಿಮಾನವನ್ನು ನಿರ್ಮಿಸಿದ್ದಾರೆ. ವಿಮಾನದ ಮುಖ್ಯ ವಿಭಾಗವಾದ …
Read More »ವ್ಯಕ್ತಿಯ ಕೊಲೆ ಮಾಡಿ ಕಾರಿಗೆ ಬೆಂಕಿಯಿಟ್ಟ ಪ್ರಕರಣ: ಮೂವರು ಆರೋಪಿಗಳ ಬಂಧನ!
ಅರಕಲಗೂಡು (ಹಾಸನ): ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಮಾ.15ರಂದು ಕಾರಿನ ಸಮೇತ ವ್ಯಕ್ತಿ ಸುಟ್ಟು ಹಾಕಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳವಾಡಿಯ ಹಿರಿಕೆರೆ ಏರಿಯ ಮೇಲೆ ಕಾರೊಂದು ಸುಟ್ಟು ಕರಕಲಾಗಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ವ್ಯಕ್ತಿಯ ಶವ ದೊರಕಿತ್ತು.ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದ ಕೊಣನೂರು ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲ ನಗರ ತಾಲೂಕಿನ ಗೊಂದಿಬಸವನಹಳ್ಳಿ ಗ್ರಾಮದ ಚಾಲಕರುಗಳಾದ ಶಶಿಕುಮಾರ್ …
Read More »ದಲಿತ ಯುವಕನ ಮೇಲೆ ಹಲ್ಲೆ: ಆ್ಯಸಿಡ್ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ
ಸಹರಾನ್ಪುರ (ಉತ್ತರಪ್ರದೇಶ): ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲ ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಹರಾನ್ಪುರ್ ಜಿಲ್ಲೆಯ ಆದೇಶ್ ಎಂಬ ದಲಿತ ಯುವಕನಿಗೆ ಹೋಳಿ ಹಬ್ಬದ ದಿನ ವಿಶಾಲ್ ರಾಣಾ ಎಂಬ ಮೇಲ್ಜಾತಿ ವ್ಯಕ್ತಿ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »ಚೆಕ್ ಬೌನ್ಸ್ ಕೇಸ್’ನಲ್ಲಿ ಮಧ್ಯಂತರ ಪರಿಹಾರ ಕಡ್ಡಾಯವಲ್ಲ – ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ ಎಂಬುದಾಗಿ ಹೈಕೋರ್ಟ್ ( Karnataka High Court ) ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಹೊರಡಿಸಿದ್ದಂತ ಆದೇಶ ರದ್ದುಪಡಿಸುವಂತೆ ಕೋರಿ, ಕೊಪ್ಪಳದ ನಿವಾಸಿಯೊಬ್ಬರು ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ಚೆಕ್ ಬೌನ್ಸ್ ಪ್ರಕರಣದಲ್ಲಿ ದೂರುದಾರರಿಗೆ ಮಧ್ಯಂತರ ಪರಿಹಾರ ಪಾವತಿಸುವಂತೆ …
Read More »ಬೆಳಗಾವಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಬೆಲೆ ಇಲ್ಲ: ರಾಜ್‍ಕುಮಾರ್ ಟೋಪಣ್ಣವರ
ಬೆಳಗಾವಿಯಲ್ಲಿ ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಕುಮಾರ ಟೋಪಣ್ಣವರ ಬಿಜೆಪಿ ಶಿಸ್ತಿನ ಸಿಪಾಯಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ದೀಪಕ ಜಮಖಂಡಿ ಹಾಗೂ ಬುಡಾ ಮಾಜಿ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರು ಲಿಂಗಾಯತ ಸಮುದಾಯದ ವ್ಯಕ್ತಿಗಳೆಂದು ಅವರನ್ನು …
Read More »ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್: ಮೂವರು ಸೇರಿ ಹಲವರ ಬಂಧನ
ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಿದ್ದ ಗ್ರಾಮೀಣ ಪೊಲೀಸರು ಇಂದು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಬೆಳಗಾವಿ ತಾಲೂಕಿನ ಹಲಗಾ ಬಸ್ತವಾಡ ಗ್ರಾಮದ ಸಧ್ಯ ಭವಾನಿ ನಗರದ ಸಂಸ್ಕøತಿ ಫಾಮ್ರ್ಸನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡ ಬೊಮ್ಮನ್ನವರನನ್ನು ಮಾರ್ಚ 15ರಂದು ಬೆಳ್ಳಂ ಬೆಳಿಗ್ಗೆ ಹತ್ಯೆ ಮಾಡಲಾಗಿತ್ತು. ಆರೋಪಿಗಳಿಗೆ …
Read More »ರಮೇಶ ಜಾರಕಿಹೊಳಿ ಮತ್ತೆ ತಮ್ಮ ಕಸರತ್ತು ಮುಂದುವರಿಸಿದ್ದಾರೆ. ದಿಢೀರ್ ಅಂತಾ ದೆಹಲಿಗೆ ಪ್ರಯಾಣ
ರಾಜ್ಯದಲ್ಲಿ ಯುಗಾದಿ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಗುಲ್ಲು ಎದ್ದಿದೆ. ಹೀಗಾಗಿ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವ ರಮೇಶ ಜಾರಕಿಹೊಳಿ ಮತ್ತೆ ತಮ್ಮ ಕಸರತ್ತು ಮುಂದುವರಿಸಿದ್ದಾರೆ. ದಿಢೀರ್ ಅಂತಾ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೌದು ಬೆಳಗಾವಿಯ ಸಾಂಬ್ರಾ ಏರ್‍ಪೆÇೀರ್ಟ್‍ನಿಂದ ಇಂದು ಬೆಳಗ್ಗೆ 9.55ರ ಫ್ಲೈಟ್‍ನಲ್ಲಿ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಿಡಿ ಕೇಸ್‍ನಿಂದ ಮಂತ್ರಿ ಸ್ಥಾನ ಕಳೆದುಕೊಂಡು ಕಂಗಾಲಾಗಿರುವ …
Read More »
Laxmi News 24×7