ಬೆಂಗಳೂರು: ‘ಐಐಟಿ ಕಾನ್ಪುರ ತಂಡದ ಅಧ್ಯಯನ ಪ್ರಕಾರ ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಬರುವ ಸಾಧ್ಯತೆ ಇದೆ. ಆದರೆ, ದೇಶದಲ್ಲಿ ಲಸಿಕಾ ಅಭಿಯಾನ ವ್ಯಾಪಕವಾಗಿ ಕೈಗೊಂಡಿರುವುದರಿಂದ ಆತಂಕ ಪಡುವ ಅಗತ್ಯ ಇಲ್ಲ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಶಶಿಲ್ ಜಿ. ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಹೊಸ ತಳಿ ಬಿಎ2 ಫಿಲಿಪ್ಪೀನ್ಸ್‌ನಲ್ಲಿ ಕಾಣಿಸಿಕೊಂಡಿದ್ದು, 40 ದೇಶಗಳಲ್ಲಿ ಹಬ್ಬಿದೆ. ಹೀಗಾಗಿ, ಎಚ್ಚರಿಕೆ …
Read More »Monthly Archives: ಮಾರ್ಚ್ 2022
ಪುನೀತ್ ಅಭಿಮಾನ: ಕ್ರೇನಿಗೆ ಬೆನ್ನಿನ ಮೂಲಕ ಕಬ್ಬಿಣದ ಕೊಂಡಿ ಕಟ್ಟಿಕೊಂಡು ನೇತಾಡುತ್ತಿದ್ದ ಭಕ್ತ
ಭದ್ರಾವತಿ: ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಶುಕ್ರವಾರ ವೈಭವದಿಂದ ನಡೆಯಿತು. ಭಕ್ತರು ದೇಹದಂಡನೆಯೊಂದಿಗೆ ಭಕ್ತಿಯ ಪರಾಕಾಷ್ಠೆ ಮೆರೆದರು. 350ಕ್ಕೂ ಹೆಚ್ಚು ಮಾಲಾಧಾರಿ ಭಕ್ತರು ತಮ್ಮ ಹರಕೆಗೆ ತಕ್ಕಂತೆ ದೇಹದಂಡನೆ ಮಾಡಿಕೊಂಡು ಸ್ವಾಮಿಯ ದರ್ಶನ ಪಡೆದರು. ಭಕ್ತರು ಆಟಗೇರಿ ಕ್ಯಾಂಪ್ ಬಳಿಯ ಚಾನಲ್ ಬಳಿಯಲ್ಲಿ ದೇಹದಂಡನೆ ಮಾಡಿಕೊಂಡು ಅಲ್ಲಿಂದ ಕೊಂಬು, ಕಹಳೆ, ವಾದ್ಯ, ಡೊಳ್ಳು, ನಗಾರಿ ಮೊದಲಾದ ವಾದ್ಯಮೇಳದೊಂದಿಗೆ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಬಂದರು. ಕೆನ್ನೆಯ ಎರಡೂ ಬದಿಗಳಲ್ಲಿ ತ್ರಿಶೂಲ, ನಾಲಿಗೆಗೆ ತ್ರಿಶೂಲ, ಕಲ್ಲಿನ …
Read More »ಹುಬ್ಬಳ್ಳಿ-ಧಾರವಾಡ: ದ್ವೇಷದ ಅಮಲಿಗೆ 188 ಮಂದಿ ಹತ್ಯೆ
ಹುಬ್ಬಳ್ಳಿ: ಬಡ್ಡಿಗೆ ಪಡೆದ ಹಣ ಮರಳಿ ನೀಡದ, ಕೌಟುಂಬಿಕ ಕಲಹ, ಪ್ರೀತಿ ನಿರಾಕರಣೆ, ಮದ್ಯದ ನಶೆ, ಅನೈತಿಕ ಸಂಬಂಧ… ಹೀಗೆ ಹುಬ್ಬಳ್ಳಿ ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 188 ಮಂದಿ ಹತ್ಯೆಯಾಗಿದ್ದಾರೆ. ಹು-ಧಾ ಪೊಲೀಸ್ ಕಮಿಷನರೇಟ್‌ನಲ್ಲಿ 88 ಮಂದಿ, ಧಾರವಾಡ ಜಿಲ್ಲೆಯ ವಿವಿಧೆಡೆ 100 ಮಂದಿ ಹತರಾಗಿದ್ದಾರೆ. ಬಹುತೇಕ ಕೊಲೆಗಳಿಗೆ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಕಾರಣವಾಗಿದ್ದರೆ, ಕೆಲವು ಕೊಲೆಗಳು ವರದಕ್ಷಿಣೆ, ಕೌಟುಂಬಿಕ …
Read More »ದಾವಣೆಗೆರೆಯ ಎಸ್ ಎಸ್ ಆಸ್ಪತ್ರೆಗೆ ವಿದ್ಯಾರ್ಥಿ ನವೀನ್ ದೇಹದಾನ.. ಕರುಳ ಕುಡಿಗೆ ಕೊನೆಯ ಮುತ್ತಿಟ್ಟ ಅಮ್ಮ..
ಹಾವೇರಿ/ದಾವಣಗೆರೆ: ಶೆಲ್ ದಾಳಿಗೆ ಉಕ್ರೇನ್ ನಲ್ಲಿ ಬಲಿಯಾದ ವೈದ್ಯಕೀಯ ವಿದ್ಯಾರ್ಥಿ ನವೀನ್‌ಗೆ ಅವರ ಕುಟುಂಬ ಕಣ್ಣೀರಿನ ಅಂತಿಮ ವಿದಾಯ ಹೇಳಿದೆ. ಸಹೋದರ ಹರ್ಷ ಅವರು ತನ್ನ ತಮ್ಮನ ಮೃತದೇಹಕ್ಕೆ ಅಪ್ಪುಗೆ ಮಾಡಿ ಅಧಿಕೃತವಾಗಿ ಆಸ್ಪತ್ರೆಯ ನಿಬಂಧನೆಗಳಿಗೆ ಸಹಿ ಹಾಕುವ ಮೂಲಕ ನವೀನ್ ಮೃತದೇಹವನ್ನು ಆಸ್ಪತ್ರೆಗೆ ಹಸ್ತಾಂತರಿಸಿದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಿಂದ ನವೀನ್ ಮೃತದೇಹ ಹೊತ್ತ ಆ್ಯಂಬುಲೆನ್ಸ್ ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ಆಗಮಿಸಿತು. ಈ ವೇಳೆ ಮೃತದೇಹ ಹಸ್ತಾಂತರ …
Read More »ವಾಹನ ಮಾರಾಟ ಮೇಳದ ಫೋಟೋ ಒಎಲ್ಎಕ್ಸ್ನಲ್ಲಿ ಹಾಕಿ ಗ್ರಾಹಕರ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್
ಬೆಳಗಾವಿ : ಮೇಳದಲ್ಲಿ ಮಾರಾಟಕ್ಕಿಟ್ಟ ವಾಹನಗಳ ಫೋಟೋ ತೆಗೆದು ಅದನ್ನು ಒಎಲ್ಎಕ್ಸ್ನಲ್ಲಿ ಹಾಕಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುವುದು ಎಂದು ನಂಬಿಸಿ ಮೋಸ ಮಾಡುತ್ತಿದ್ದ ಗ್ಯಾಂಗ್‌ನ ಬೆಳಗಾವಿ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಧಾರವಾಡ ಮೂಲದ ಆರೋಪಿ ಶಿವಾನಂದ ಧೂಪದಾಳ, ಬೆಳಗಾವಿಯ ಅಬ್ದುಲ್ ಮತ್ತು ಜುಬೇರ್ ಬಂಧಿತ ಆರೋಪಿಗಳು. ಮೂವರು ಆರೋಪಿಗಳನ್ನು ವಂಚನೆ ಕೇಸ್ ಅಡಿ ಹಿಂಡಲಗಾ ಜೈಲಿಗೆ ಅಟ್ಟಲಾಗಿದೆ. ವಂಚನೆ ಹೇಗೆ?: ವಾಹನ ಮೇಳದಲ್ಲಿ ಪ್ರದರ್ಶಿಸಲಾಗುವ ಮಿನಿ ಲಾರಿಗಳು, ಟಾಟಾ ಏಸ್ಗಳು, …
Read More »15 ದಿನ,700 ಕಿ.ಮೀ.. ಮರಗಾಲು ಕಟ್ಟಿಕೊಂಡು ಶ್ರೀಶೈಲಕ್ಕೆ ಪಾದಯಾತ್ರೆ ಹೊರಟ ಭಕ್ತ..
ಅಥಣಿ : ದೇವಸ್ಥಾನ, ಪುಣ್ಯ ಕ್ಷೇತ್ರಗಳಿಗೆ ಕೆಲವರು ಪಾದಯಾತ್ರೆ ಮುಖಾಂತರ ಹೋಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ಭಕ್ತ ಮರಗಾಲು ಕಟ್ಟಿಕೊಂಡು ದೂರದ ಆಂಧ್ರಪ್ರದೇಶದ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದವರು ಪಾದಯಾತ್ರೆ ಮುಖಾಂತರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೊರಟಿದ್ದಾರೆ. ಇದರಲ್ಲಿ ಓರ್ವ ಯುವಕ ದಶರಥ್ ನಾಯ್ಕ್ ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಮುಖಾಂತರ ತಮ್ಮ ಭಕ್ತಿ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದಿಂದ ಶ್ರೀಶೈಲ ಮಲ್ಲಿಕಾರ್ಜುನ …
Read More »ಪ್ರತಿಯೊಬ್ಬ ಭಾರತೀಯರೂ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ: ಅಮೀರ್ ಖಾನ್
ಮಾರ್ಚ್ 11 ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್ ಗಳಿಗೆ ಲಗ್ಗೆ ಇಡುತ್ತಿದ್ದಾರೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಿತ್ರವನ್ನು ಶ್ಲಾಘಿಸಿದ್ದು, ಸಿನಿಮಾ ನೋಡಲು ಪ್ರೇಕ್ಷಕರಿಗೆ ಸಲಹೆ ನೀಡಿದ್ದಾರೆ. ಈಗ ನಟ ಅಮೀರ್ ಖಾನ್ ಕೂಡ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸುವಂತೆ ತಿಳಿಸಿದ್ದಾರೆ. ಮಾಧ್ಯಮ ಸಂವಾದದ ವೇಳೆ ಅಮೀರ್, ಪ್ರತಿಯೊಬ್ಬ ಭಾರತೀಯನೂ ಕಾಶ್ಮೀರ ಫೈಲ್ಸ್ ನೋಡಲೇಬೇಕು ಎಂದು …
Read More »ಭಾರತೀಯ ಸೇನೆ ಸೇರಲು ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ 10 ಕಿ.ಮೀ ಓಡುವ ಹುಡುಗ!
ಬೆವೆತು ಮೈಯೆಲ್ಲಾ ಒದ್ದೆಯಾಗಿದ್ದರೂ, ಒಂದಿನಿತೂ ವಿಶ್ರಮಿಸದೆ ಮಧ್ಯರಾತ್ರಿ ನೋಯ್ಡಾದ ರಸ್ತೆಯೊಂದರಲ್ಲಿ ಓಡುತ್ತಿದ್ದ ಯುವಕನೊಬ್ಬನ ವಿಡಿಯೋ ಸಿಕ್ಕಾಪಟ್ಟೆ ವೈರಲ್ (Vedio Viral) ಆಗಿದೆ. ಚಿತ್ರ ನಿರ್ಮಾಪಕ ಮತ್ತು ಬರಹಗಾರ ವಿನೋದ್ ಕಾಪ್ರಿ (Vinod Kapri) ಅವರು ಆತನಿಗೆ ಮನೆವರೆಗೆ ಡ್ರಾಪ್ ಕೊಡುವೆ ಎಂದು ಹೇಳಿದರೂ, ಅವರ ಮಾತನ್ನು ತಲೆಗೆ ತೆಗೆದುಕೊಳ್ಳದೆ ಮತ್ತು ಕ್ಷಣ ಮಾತ್ರವೂ ನಿಲ್ಲದೇ ಓಡುತ್ತಿರುವ ಆ ಯುವಕನ ವಿಡಿಯೋ, ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ (Social Media) ಸೋಜಿಗ ಹುಟ್ಟಿಸಿದೆ. …
Read More »‘ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಇನ್ಯಾರಿಗೂ ಜವಾಬ್ದಾರಿ ಇಲ್ಲ’ : ಸಿದ್ದು
ಬೆಂಗಳೂರು: ವಿಧಾನಸಭೆಯಲ್ಲಿ (Assembly) ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಇವತ್ತು ಹಲವು ಸಚಿವರು ಗೈರಾಗಿದ್ದಕ್ಕೆ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಕೆಂಡಾಮಂಡಲರಾದ್ರು. ಬಿಜೆಪಿಯಲ್ಲಿ ಯಡಿಯೂರಪ್ಪ (Yediyurappa) ಬಿಟ್ರೆ ಇನ್ಯಾರಿಗೂ ಜವಾಬ್ದಾರಿ (Responsibility) ಅನ್ನೋದೇ ಇಲ್ಲ ಅಂತ ಕಿಡಿ ಕಾರಿದ್ದಾರೆ. ಸದನದಲ್ಲಿ ಚರ್ಚೆ ಮಾಡುವಾಗ ಸಚಿವರು (Ministers) ಹಾಜರಾಗಿರಬೇಕು. ಸಚಿವರೇ ಇಲ್ಲದಿದ್ರೆ ಹೇಗೆ? ಆ ಇಲಾಖೆ ಸಚಿವರಿಲ್ಲದಾಗ ಬೇರೆ ಸಚಿವರು ಚರ್ಚೆ ವಿಷಯವನ್ನು ಬರೆದುಕೊಳ್ಳಬೇಕು ಇಲ್ಲವಾದ್ರೆ ನಮ್ಮ ಪ್ರಶ್ನೆಗಳಿಗೆ ಅವ್ರು ಉತ್ತರಿಸೋದಾದ್ರು ಹೇಗೆ …
Read More »ಉಡುಪಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಇಬ್ಬರು ಸಾವು
ಉಡುಪಿ: ಕಾಪು ತಾಲ್ಲೂಕಿನ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ …
Read More »
Laxmi News 24×7