Breaking News

Monthly Archives: ಮಾರ್ಚ್ 2022

ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ-ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾಡಿರುವ ಟ್ವಿಟ್ ವಾಪಸ್ಸು ಅವರ ಬುಡಕ್ಕೆ ಬಂದಿದೆ. ನಿರ್ದೇಶಕ ರಾಜಮೌಳಿ ಅವರನ್ನು ಕಾಲೆಳೆಯಲು ಹೋಗಿ, ಅಭಿಮಾನಿಗಳಿಂದ ತಾವೇ ಕಾಲೆಳಿಸಿಕೊಂಡಿದ್ದಾರೆ ವರ್ಮಾ.ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಮೂವರು ಇರುವ ಫೋಟೋವೊಂದನ್ನು ಹಾಕಿ, ‘ರಾಜಮೌಳಿ ಸರ್, ನಿಮ್ಮೊಂದಿಗೆ ಇಬ್ಬರು ಡೇಂಜರ್ಸ ಗಂಡಸರಿದ್ದರೆ, ನನ್ನ ಹತ್ತಿರ ಡೇಂಜರ್ಸ್ ಹುಡುಗಿಯರು ಇದ್ದಾರೆ’ ಎಂದು ಬರೆದು ಟ್ವಿಟ್ ಮಾಡಿದ್ದಾರೆ. ಆ ಹುಡುಗಿಯರು ಯಾರು ಎನ್ನುವುದನ್ನೂ ಬಹಿರಂಗ …

Read More »

ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ. H.D.K.

ರಾಮನಗರ: ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಹಲಾಲ್ – ಜಟ್ಕಾ ಕಟ್ …

Read More »

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಸಿ.ಎಂ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ಈಚೆಗಷ್ಟೇ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ …

Read More »

ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ

ಬೆಂಗಳೂರು: ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ. ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ನಾಯಕರುಗಳು ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಾಗ್ದಾಳಿ ನಡೆಸಿದ ಡಿಕೆಶಿ, ಬೆಲೆ …

Read More »

ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಇ – ಸ್ವತ್ತು ಮೂಲಕ ಫಲಾನುಭವಿಗೆ ಖಾತೆ

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ 94c ಮತ್ತು 94cc ಅಡಿಯಲ್ಲಿ ನೀಡಿದ ಹಕ್ಕುಪತ್ರಗಳ ನೋಂದಣಿಯ ನಂತರ ಇ – ಸ್ವತ್ತು ಅಥವಾ ಇ -ಖಾತಾ ವ್ಯವಸ್ಥೆಯ ಮೂಲಕ ಖಾತೆ ಚೆಕ್ಕುಬಂದಿ ಮಾಡಿಕೊಡಲು …

Read More »

ಉಚಿತ ಎಲ್‍ಪಿಜಿ ಸಿಲಿಂಡರ್ ನೀಡಲು ಹಣ ಮಂಜೂರು: ಪ್ರಮೋದ್ ಸಾವಂತ್

ಪಣಜಿ: ರಾಜ್ಯದ ಜನರಿಗೆ ಮೂರು ಎಲ್‍ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು. ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‍ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್‍ನ್ನು ಮಂಡಿಸಿದ್ದಾರೆ. ಗೋವಾ ಜನತೆಗೆ, ರಾಜ್ಯದ …

Read More »

10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್‌ಗೆ 6.40ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. …

Read More »

ಸಿಕ್ಸ್‌, ಫೋರ್‌ ಸಿಡಿಸಿ ಮ್ಯಾಚ್‌ ಫಿನಿಶ್‌ ಮಾಡಿದ ಕಾರ್ತಿಕ್

ಮುಂಬೈ: ಬೆಂಗಳೂರು ಮತ್ತು ಕೋಲ್ಕತ್ತಾ ನಡುವಿನ ಕೊನೆಯ ಓವರ್ ವರೆಗೂ ರೋಚಕವಾಗಿ ಕೂಡಿದ ಪಂದ್ಯದಲ್ಲಿ ಬ್ಯಾಟ್ಸ್‌ಮ್ಯಾನ್‌ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಮಾಡುವ ಮೂಲಕ ಆರ್​ಸಿಬಿಗೆ 3 ವಿಕೆಟ್‍ಗಳ ಗೆಲುವು ತಂದುಕೊಟ್ಟರು. ಆರ್​ಸಿಬಿಗೆ ಗೆಲ್ಲಲು ಕೊನೆಯ 6 ಎಸೆತಗಳಲ್ಲಿ 7 ರನ್‍ಗಳ ಅವಶ್ಯಕತೆ ಇತ್ತು. ರಸೆಲ್ ಎಸೆದ ಮೊದಲ ಎಸೆತವನ್ನೆ ದಿನೇಶ್ ಕಾರ್ತಿಕ್ ಸಿಕ್ಸರ್‌ಗಟ್ಟಿದರೆ, ಎರಡನೇ ಎಸೆತವನ್ನು ಬೌಂಡರಿಗಟ್ಟಿ ಆರ್​ಸಿಬಿ ತಂಡವನ್ನು ಗೆಲ್ಲಿಸಿದರು. ಅಲ್ಪ ಮೊತ್ತದ ಗುರಿ ಪಡೆದ ಆರ್​ಸಿಬಿ ಕೂಡ …

Read More »

ಬಿಜೆಪಿ ಶಾಸಕ ರೇಣುಕಾಚಾರ್ಯಗೆ ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಬೆದರಿಕೆ ,

ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್‌ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, …

Read More »

ಏ.1 ರಂದು ನಡೆದಾಡೋ ದೇವರ ಜನ್ಮ ದಿನಾಚರಣೆ-

ತುಮಕೂರು: ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ. ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ. ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾರೂ ಇತ್ತ …

Read More »