Breaking News

Monthly Archives: ಮಾರ್ಚ್ 2022

ಮತ್ತೆ ಬೆಲೆ ಏರಿಕೆಯ ಬರೆ: ದಿನಬಳಕೆ ಗ್ರಾಹಕ ಉತ್ಪನ್ನಗಳು ಶೇ.10 ತುಟ್ಟಿ ಸಾಧ್ಯತೆ

ನವದೆಹಲಿ: ಬೆಲೆ ಏರಿಕೆ ಆಘಾತದಿಂದ ಈಗಾಗಲೇ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಮತ್ತೊಂದು ಸುತ್ತಿನ ದುಬಾರಿ ಬರೆ ಬೀಳುವುದು ಖಚಿತವಾಗಿದೆ. ಸಗಟು ಮತ್ತು ಚಿಲ್ಲರೆ ಮಾರಾಟ ಹಣದುಬ್ಬರದ ದರ ಏರಿಕೆಯಾದ ಬೆನ್ನಲ್ಲೇ ದಿನಬಳಕೆಯ ಶೀಘ್ರ ಬಿಕರಿಯಾಗುವ ಗ್ರಾಹಕ ಸರಕುಗಳ (ಎಫ್​ಎಂಸಿಜಿ) ಬೆಲೆಯನ್ನು ಶೇ.10 ಹೆಚ್ಚಿಸಲು ತಯಾರಿಕಾ ಕಂಪನಿಗಳು ಮುಂದಾಗಿವೆ. ಕೆಲವು ಕಂಪನಿಗಳು ಈಗಾಗಲೇ ಏರಿಕೆ ಮಾಡಿಯೂ ಆಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳದ ಕಾರಣ ಕಳೆದ ಜನವರಿಯಲ್ಲಿ ಎಫ್​ಎಂಸಿಜಿ …

Read More »

ಕೋ-ಜನರೇಷನ್​ಗೆ ಬೇಕಿದೆ ನವೀಕರಣ; 62 ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಂಕಷ್ಟ!

ಬೆಳಗಾವಿ :ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 72 ಸಕ್ಕರೆ ಕಾರ್ಖಾನೆಗಳ ಪೈಕಿ 60 ಸಕ್ಕರೆ ಕಾರ್ಖಾನೆಗಳು ಕೋಜನರೇಷನ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದರೂ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ನೆರೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ಯುನಿಟ್​ಗೆ 5.80 ರೂ. ವಿದ್ಯುತ್ ದರ ನೀಡುತ್ತಲಿದೆ. ಆದರೆ ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಕೋ-ಜನರೇಷನ್ ವಿದ್ಯುತ್ ಉತ್ಪಾದನೆಯ …

Read More »

ನಾಲ್ಕನೇ ಅಲೆಯಿಂದ ಭಾರತದಲ್ಲಿ ಗಂಭೀರ ಪರಿಣಾಮ ಇಲ್ಲ: ಕಡ್ಡಾಯ ಮಾಸ್ಕ್ ನಿಯಮ ತೆರವಿಗೆ ಸಲಹೆ

ನವದೆಹಲಿ: ಆಗ್ನೇಯ ಏಷ್ಯಾ ಮತ್ತು ಯುರೋಪ್​ನ ಕೆಲ ಭಾಗಗಳಲ್ಲಿ ಕೋವಿಡ್ ಸೋಂಕು ಮತ್ತೆ ಅಬ್ಬರಿಸುತ್ತಿದ್ದು ಕಳವಳ ಸೃಷ್ಟಿಸಿರುವುದರ ನಡುವೆ ಭಾರತದಲ್ಲಿ ಹೊಸ ಅಲೆ ಅಪ್ಪಳಿಸಿದರೂ ಗಂಭೀರ ಪರಿಣಾಮ ಬೀರದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕಡ್ಡಾಯ ಮಾಸ್ಕ್ ಧಾರಣೆ ನಿಯಮವನ್ನು ಸಡಿಲಿಸಲೂ ಕೆಲವರು ಸಲಹೆ ಮಾಡಿದ್ದಾರೆ. ನೈಸರ್ಗಿಕ ಸೋಂಕಿನ ಕಾರಣದಿಂದ ರೋಗನಿರೋಧಕತೆ (ಇಮ್ಯುನಿಟಿ) ಹೆಚ್ಚಳ ಮತ್ತು ಅಧಿಕ ಲಸಿಕೆ ನೀಡಿಕೆಯಿಂದಾಗಿ ದೇಶದಲ್ಲಿ ಮುಂದೆ ಕರೊನಾ ಅಲೆ ಅಪ್ಪಳಿಸಿದರೂ ಅದು ದೊಡ್ಡ ರೀತಿಯಲ್ಲಿ …

Read More »

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು..! ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು ಬಿಟ್ಟಿದೆ. ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ, ಅಪಾಯ ಇದೆ. 10 ಕಿಲೋ ಮೀಟರ್ ಉದ್ದದ ಫ್ಲೈಓವರ್ ಇದಾಗಿದೆ. ಫ್ಲೈಓರ್ ನ ಮಧ್ಯ ಭಾಗ ಲೇಬೈ ಬಳಿ ಬಿರುಕು ಬಿಟ್ಟಿದೆ. ಕೆಲ ತಿಂಗಳ ಹಿಂದೆ ಇದೇ ಲೇಬೈ ಬಳಿ ಅಪಘಾತವಾಗಿತ್ತು. ಇತ್ತೀಚೆಗೆ ಅಪಘಾತದಲ್ಲಿ ತಡೆಗೋಡೆ ಬಿರುಕುಬಿಟ್ಟಿತ್ತು. ಆದರೆ ತಡೆಗೋಡೆ ದುರಸ್ತಿ ಮಾಡದೆ, ಬಿಇಪಿಟಿಎಲ್ ಸಂಸ್ಥೆ ಹಾಗೆಯೇ ಬಿಟ್ಟಿದೆ. ಗೋಡೆ ಬದಲಿಗೆ ಬ್ಯಾರಿಕೇಡ್ …

Read More »

ಹಿಜಾಬ್ ತೀರ್ಪು ನೀಡಿದ ಮೂವರು ನ್ಯಾಯಾಧೀಶರಿಗೆ ‘Y’ ಶ್ರೇಣಿಯ ಭದ್ರತೆ: ಸಿಎಂ

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಿದ್ದು, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರ ಮೇಲೆ ಬೆದರಿಕೆ …

Read More »

ಪೊಲೀಸ್‌ ಪೇದೆಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ.!

ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸಪ್ಪನಿಗೆ ಮಹಿಳೆ ಚಪ್ಪಲಿ ಸೇವೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಹಾಗೂ ಒಬ್ಬ ವ್ಯಕ್ತಿ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆ ತನ್ನ ಚಪ್ಪಲಿಯಿಂದ ಪೊಲೀಸಪ್ಪನಿಗೆ ಹೊಡೆದಿದ್ದಾರೆ. ಪೊಲೀಸ್ ಮಹಿಳೆಯನ್ನು ದೂರ ತಳ್ಳುವುದು ಮತ್ತು ವ್ಯಕ್ತಿಯನ್ನು ಲಾಠಿಯಿಂದ ಥಳಿಸುವುದು ಕೂಡ ವಿಡಿಯೋದಲ್ಲಿ ಕಾಣಿಸಿದೆ. ಮಹಿಳಾ ಸಿಬ್ಬಂದಿ …

Read More »

ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. …

Read More »

ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ:ಜೋಶಿ

ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ ನೋಡುವುದಿಲ್ಲ. ಬೇರೆ ಸಿನಿಮಾ ನೋಡಲು ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ …

Read More »

ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು ʼಹುಷಾರ್ʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ ʼನೀ ನೋಡೊಕೆ ಸಿಕ್ಸಟಿನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿʼ ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ.ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು.  …

Read More »

40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮದ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಕಿರಣಗಿ ಗ್ರಾಮದ ರೈತರಾದ ಬಸಪ್ಪ ಅವರ ಹೋರಿ ಕಾಲುಜಾರಿ ಬಾವಿಗೆ ಬಿದ್ದಿತ್ತು. ತಕ್ಷಣವೇ ಗ್ರಾಮಸ್ಥರು ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಠಾಣಾಧಿಕಾರಿ ರಾಜು ತಳವಾರ ತಂಡ ಸತತ ಮೂರು ಗಂಟೆಗಳ ಕಾಲ …

Read More »