Breaking News

Monthly Archives: ಮಾರ್ಚ್ 2022

ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಅಪಾರ ಚಿನ್ನ-ಬೆಳ್ಳಿ, ಶ್ರೀಗಂಧ ಪತ್ತೆ- ಸಂಪೂರ್ಣ ವಿವರ ಇಲ್ಲಿದೆ..

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಇಂದು ಬೆಳಗ್ಗೆ ರಾಜ್ಯದ ವಿವಿಧೆಡೆ 18 ಮಂದಿ ಸರ್ಕಾರಿ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 77 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ಮನೆಗಳಲ್ಲಿ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗು ಶ್ರೀಗಂಧದ ತುಂಡುಗಳು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪತ್ರಗಳು ದೊರೆತಿವೆ. 1. ಗೋಪಿನಾಥ್ …

Read More »

ಕುದುರೆ ವ್ಯಾಪಾರದಿಂದ ಬಿಜೆಪಿಗೆ ಅಧಿಕಾರ : ತಿಮ್ಮಾಪೂರ್ ಟೀಕೆ

ಬೆಂಗಳೂರು : ಬಿಜೆಪಿ ಸರ್ಕಾರಕ್ಕೆ ಜನತೆ ಒಮ್ಮೆಯೂ ಬಹುಮತದಿಂದ ಅಧಿಕಾರ ನೀಡಲಿಲ್ಲ. ಕುದುರೆ, ವ್ಯಾಪಾರದಿಂದ ಆಡಳಿತಕ್ಕೆ‌ ಬಂದಿದ್ದಾರೆ. ಮುಖ್ಯಮಂತ್ರಿ ಆಗಬೇಕು, ಮಂತ್ರಿ ಆಗಬೇಕು ಎನ್ನುವ ಕಾರಣದಿಂದ ಅಧಿಕಾರಕ್ಕೆ ಬಂದವರಿಂದ ಶೇ.40 ಪರ್ಸಂಟೇಜ್ ಹೊರತುಪಡಿಸಿ, ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೆಸ್ ಸದಸ್ಯ ಆರ್‌ ಬಿ ತಿಮ್ಮಾಪೂರ್ ಬಿಜೆಪಿ ಸರ್ಕಾರವನ್ನು ಟೀಕಿಸಿದರು. ಜನತೆ ಬಿಜೆಪಿಗೆ ಸ್ವತಂತ್ರ್ಯವಾಗಿ ಅಧಿಕಾರ ನೀಡಿಲ್ಲ: ವಿಧಾನಪರಿಷತ್​ನಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಒಮ್ಮೆಯೂ ಬಿಜೆಪಿಗೆ ಸ್ವತಂತ್ರ್ಯವಾಗಿ …

Read More »

ಪೊಲೀಸರ ಗುಂಡಿಗೆ ಇಬ್ಬರು ಅತ್ಯಾಚಾರ ಆರೋಪಿಗಳು ಬಲಿ​

ಗುವಾಹಟಿ(ಅಸ್ಸೋಂ): ಕೇವಲ 24 ಗಂಟೆಯೊಳಗೆ ಎರಡು ಎನ್​ಕೌಂಟರ್​ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್​ಕೌಂಟರ್​ ಮಾಡಿದ್ದಾರೆ. ಮೊದಲನೇ ಎನ್​ಕೌಂಟರ್​​ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್​​ 10ರಂದು ರಾಜೇಶ್ ಎಂಬ ವ್ಯಕ್ತಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಮರುದಿನ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಆತನನ್ನ …

Read More »

ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ: H.D.D.

ನವದೆಹಲಿ: ಪ್ರಾರಂಭದಲ್ಲಿ ಒಂದು ಸಣ್ಣ ಕಿಡಿ ಕರಾವಳಿಯಲ್ಲಿ ಶುರುವಾಯಿತು. ಈ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಉಗ್ರವಾಗಿ ಹೋರಾಟ ಮಾಡಿವೆ. ಹಿಜಬ್ ಪ್ರಕರಣ ಸಣ್ಣದಾಗಿದ್ದಾಗಲೇ ಚಿವುಟಿ ಹಾಕಬಹುದಿತ್ತು. ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್‍.ಡಿ ದೇವೇಗೌಡ ಹೇಳಿಕೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ತೀರ್ಪು ಒಪ್ಪ ಬೇಕೆಂಬುದು ನಮ್ಮ ಪಕ್ಷದ ನಿಲುವು ಇದೇ ಆಗಿತ್ತು. ಈ ವಿಷಯದಲ್ಲಿ ರಾಜಕೀಯ ಲಾಭ-ನಷ್ಟದ ಬಗ್ಗೆ ಇಲ್ಲ. ವಿದ್ಯಾರ್ಥಿಗಳ …

Read More »

ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್

ಟಗರು ಸಿನಿಮಾದ ನಂತರ ಮತ್ತೆ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಎದುರಾಗಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಬೈರಾಗಿ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಮತ್ತು ಡಾಲಿ ಸೆಣಸಲಿದ್ದಾರೆ. ಇಂದು ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವುದನ್ನು ಟ್ರೇಲರ್ ಖಚಿತ ಪಡಿಸುತ್ತದೆ. ಶಿವರಾಜ್ ಕುಮಾರ್ ಇಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ಹುಲಿಬಣ್ಣದ ಮುಖಹೊತ್ತು ರೌಡಿಗಳನ್ನು ಸೆರೆ ಬಡಿಯುವಂತಹ ದೃಶ್ಯಗಳು ಟ್ರೇಲರ್ ನಲ್ಲಿ ಹೇರಳವಾಗಿವೆ. ಡಾಲಿ …

Read More »

ಅತಂತ್ರ ಸ್ಥಿತಿಯಲ್ಲಿರೋ ಉಕ್ರೇನ್ ರಿಟರ್ನ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ..?

ಬೆಂಗಳೂರು: ಸದ್ಯ ಯುದ್ಧಪೀಡಿತ ಉಕ್ರೇನ್‍ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕೆಂದರೆ ಏನೇ ನಿರ್ಧಾರ ಕೈಗೊಳ್ಳಬೇಕಾದ್ರು, ರಾಜ್ಯಕ್ಕೆ ಕೇಂದ್ರ ಅನುಮತಿ ಬೇಕಾಗುತ್ತದೆ. ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಗಳು: ಉಕ್ರೇನ್ ನಿಂದ ಬಂದಿರೋ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರಕ್ಕೂ ಸದ್ಯ ಯಾವುದೇ ಮಾರ್ಗಗಳು ಇಲ್ಲ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ಅವಕಾಶ ಕೊಡಲು ಅಧಿಕಾರ ಇಲ್ಲ. ರಾಜ್ಯ ಸರ್ಕಾರ …

Read More »

ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ: ಗೋವಿಂದ ಕಾರಜೋಳ

ಬಾಗಲಕೋಟೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕಾಂಗ್ರೆಸ್​ ನಾಯಕರು ವಿಶೇಷ ಫ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ್​ಗೆ ಹೋಗಿದ್ದರು. ಬಾಡಿಗೆ ಕೊಟ್ಟು ವಾಪಸ್ ಬಂದಿದ್ದಾರೆ. ಕಾಂಗ್ರೆಸ್​ ಪರಿಸ್ಥಿತಿ ಇನ್ನೂ ಹೀನಾಯವಾಗುತ್ತದೆ. ಇಲ್ಲವಾದಲ್ಲಿ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ ಎಂದು‌ ಟಾಂಗ್ ನೀಡಿದರು. ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಐದು …

Read More »

ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಾಟ್ಕರ್ ಕಲಾನ್‍ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಪ್ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ರಾಜಧಾನಿಯ ಹೊರಗೆ ಪ್ರಮಾಣ ವಚನ ನಡೀತಿರೋದು ವಿಶೇಷವಾಗಿದ್ದು, ಸಿಎಂ ಜೊತೆ 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ಲಕ್ಷ …

Read More »

ಮೂವರ ಸಾವಿಗೆ ಕಾರಣವಾಯ್ತು ಕಾಡುಹಂದಿ..!

ಚಿತ್ರದುರ್ಗ: ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ ದಾವಣಗೆರೆ, ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರವಿಚಂದ್ರ, ವಿಜಯ್ ಕುಮಾರ್ ಇಬ್ಬರ …

Read More »

15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚಿ: ಹೈಕೋರ್ಟ್

ಬೆಂಗಳೂರು: ರಸ್ತೆ ಗುಂಡಿ ವಿಚಾರದಲ್ಲಿ ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಮುಂದಿನ 15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಡೆಡ್‍ಲೈನ್ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಎಂಎಸ್ ಪಾಳ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ಅಶ್ವಿನ್ ಪ್ರಕರಣವನ್ನು ಪ್ರಸ್ತಾಪಿಸಿತು. ರಸ್ತೆಗುಂಡಿಯಿಂದ ಆಗುವ ಪ್ರತಿಯೊಂದು ಸಾವು ನಮ್ಮಲ್ಲಿ ಅಪರಾಧಿ ಪ್ರಜ್ಞೆ ಮೂಡಿಸುತ್ತಿದೆ ಎಂದು ಬೇಸರ ಹೊರಹಾಕಿತು …

Read More »