ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್‍ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ …
Read More »Monthly Archives: ಮಾರ್ಚ್ 2022
ಮೀನು ವ್ಯಾಪಾರಿಗೆ ತಲವಾರು ತೋರಿಸಿ 2 ಲಕ್ಷ ರೂ. ದೋಚಿ ಪರಾರಿಯಾದ ಮೂವರು
ಉಳ್ಳಾಲ: ಟೆಂಪೋ ಅಡ್ಡಗಟ್ಟಿ ಮೀನು ವ್ಯಾಪಾರಿಯೊಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ 2 ಲಕ್ಷ ರೂ. ನಗದು ದೋಚಿಕೊಂಡು ಮೂವರು ಮುಸುಕುಧಾರಿಗಳು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ಹಲ್ಲೆಗೊಳಗಾದವರು. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ಕಾರಿನಲ್ಲಿ …
Read More »ಮುಸುಕುಧಾರಿಗಳ ಗುಂಪೊಂದು ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ
ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಪರಾರಿ ಆಗಿದೆ.ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಜಯಂತ್ ಅವರನ್ನು ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಖಾನಾಪುರ – ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುದಾರಿಗಳು ಕಾರು ತಡೆದು ಕಬ್ಬಿಣದ ರಾಡ್ಗಳಿಂದ ಥಳಿಸಿದ್ದಾರೆ. ಈ ವೇಳೆ, …
Read More »ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!
ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭವ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಭವ್ಯಾಳನ್ನು ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್ ಮಾಡಲಾಗಿತ್ತು. ಇದರಿಂದ ಮನನೊಂದು ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ, ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ. ಹೀಗಾಗಿ, ತಾನು ಬದುಕುವುದಿಲ್ಲ ಎಂದು ಲೇಡಿಸ್ ಪಿಜಿ ಕಟ್ಟಡದ …
Read More »ನವವಧು ಮೇಲೆ ಪತಿ ಸಹೋದರನಿಂದಲೇ ಅತ್ಯಾಚಾರ
ಆಕೆಗೆ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು. ಹೊಸ ಜೀವನದ ಹೊಸ್ತಿಲಿಗೆ ಆಸೆಗಣ್ಣುಗಳಿಂದಲೇ ಗಂಡನ ಮನೆಗೆ ಹೆಜ್ಜೆ ಇಟ್ಟಿದ್ದ ಆಕೆಗೆ, ತಿಂಗಳು ಕಳೆಯುವ ಮುನ್ನವೇ ನರಕ ದರ್ಶನವಾಗಿದೆ. ತನ್ನ ಗಂಡನ ಸಹೋದರನೆ ಇಪ್ಪತ್ತು ವರ್ಷದ ನವವಧುವಿನ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ್ದಾನೆ. ಈ ಅಮಾನವೀಯ, ಅನಾಗರಿಕ ಘಟನೆ ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ, ಡಾಂಕುರ್ ಪ್ರದೇಶದಲ್ಲಿ ಗುರುವಾರದಂದು ನಡೆದಿದೆ. ಹೀನ ಕೃತ್ಯ ಎಸಗಿದ ಪಾಪಿ ತಲೆಮರೆಸಿಕೊಂಡಿದ್ದು, ಪೊಲೀಸರ ವಿಶೇಷ ತಂಡವೊಂದು ಆತನನ್ನು ಹುಡುಕಲು …
Read More »ಬೊಮ್ಮಾಯಿ ಬಜೆಟ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದಿಂದ ಖಂಡನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಾರಿ ಮಂಡಿಸಿರುವ 2022-23 ರ ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಖಂಡಿಸಿದ್ದಾರೆ. ರಾಜಸ್ಥಾನ ಸರ್ಕಾರ ತನ್ನ ಈ ಬಾರಿಯ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ ( NPS ) ಯನ್ನು ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ …
Read More »ಬಿಜೆಪಿ ಬೆಂಬಲಿಸಿದ ಮನಮೋಹನ್ ಸಿಂಗ್, ಮುಲಾಯಂ ಸಿಂಗ್… ಆದರೆ!
ಅಂಬೇಡ್ಕರ್ ನಗರ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮನಮೋಹನ್ ಸಿಂಗ್, ಮುಲಾಯಂ ಸಿಂಗ್ ಹಾಗೂ ಮತ್ತಿತರರು ಬಿಜೆಪಿಯನ್ನು ಬೆಂಬಲಿಸಿ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಮತ್ತು ವಿದೇಶಾಂಗ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದರು. ಇದೀಗ ಬಿಜೆಪಿಯನ್ನು ಬೆಂಬಲಿಸಿದ್ದಾರೆಯೇ? ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿದು, ಮುಖ್ಯಮಂತ್ರಿ ಗಾದಿಗೇರುವ ಹುಮ್ಮಸ್ಸಿನಲ್ಲಿರುವ ಅಖಿಲೇಶ್ ಯಾದವ್ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಯೋಗಿ …
Read More »ಬೆಳಗುಂದಿ ಗ್ರಾಮದ ಗಜಾನನ ಬಾಳಾರಾಮ್ ನಾಯ್ಕ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿ
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗಜಾನನ ಬಾಳಾರಾಮ್ ನಾಯ್ಕ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗುಂದಿ ಗ್ರಾಮದ ವಿದ್ಯಾ ಪಾಟೀಲ್, ಆಕೆಯ ಮಗ ರಿತಿಕ್ ಪಾಟೀಲ್ ಹಾಗೂ ಆತನ ಸ್ನೇಹಿತ ಪರುಶರಾಮ್ ಗೋಂಧಳಿ ಬಂಧಿತ ಆರೋಪಿಗಳು. ಕೊಲೆಯಾದ ಗಜಾನನ ನಾಯ್ಕ ಆರೋಪಿ ವಿದ್ಯಾ ಜೊತೆ ಅನೈತಿಕ ಸಂಬಂಧ ಹೊಂದಿದ್ದಲ್ಲದೇ, ಆಕೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಮೂವರು …
Read More »ವ್ಯಾಸಂಗ ಮುಂದುವರೆಸಲು ಭಾರತದಲ್ಲಿ ಅವಕಾಶ ಕೊಡಿ’
ಬೆಳಗಾವಿ: ಯುದ್ಧಪೀಡಿತ ಉಕ್ರೇನಿನಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ.ಬೈಲಹೊಂಗಲ ಪಟ್ಟಣದ ಪ್ರಜ್ವಲ್ ತಿಪ್ಪಣ್ಣವರ ಉಕ್ರೇನಿನ ಟೆರ್ನೋಪಿಲ್ ನ್ಯಾಶನಲ್ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಟೆರ್ನೋಪಿಲ್ನಿಂದ ಮುಂಬೈ ಮಾರ್ಗವಾಗಿ ಪ್ರಜ್ವಲ್ ಬೆಳಗಾವಿಗೆ ಆಗಮಿಸಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಜ್ವಲ್ ತಿಪ್ಪಣ್ಣವರ, ಬೆಳಗಾವಿ ಜಿಲ್ಲೆಯ 19 ವಿದ್ಯಾರ್ಥಿಗಳು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲರಿಗೂ ಇಲ್ಲೇ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಬೇಕು. ಉಕ್ರೇನ್ನಲ್ಲಿ ಶಿಕ್ಷಣಕ್ಕೆ ನೀಡುತ್ತಿದ್ದ ಶುಲ್ಕವನ್ನೇ ಸರ್ಕಾರ …
Read More »ಯುಪಿ ಚುನಾವಣೆ: ಸ್ಟ್ರಾಂಗ್ ರೂಮ್ ಹಿಂಬದಿ ವಿವಿಪ್ಯಾಟ್ ಚೀಟಿಗಳು ಪತ್ತೆ
ಲಖನೌ: ಉತ್ತರ ಪ್ರದೇಶದಲ್ಲಿ ನಿನ್ನೆಯಷ್ಟೇ 6ನೇ ಹಂತದ ಮತದಾನ ಮುಗಿದಿದ್ದು, ಮಾರ್ಚ್ 7ಕ್ಕೆ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಇದೇ 10 ರಂದು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಈ ನಡುವೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮಂಡಿಯ ಸ್ಟ್ರಾಂಗ್ ರೂಂ ಪಕ್ಕದಲ್ಲಿ ವಿವಿಪ್ಯಾಟ್‌ನ ಸ್ಲಿಪ್‌ಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದು ಚುನಾವಣಾ ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡಿದ್ದು, ಸುದ್ದಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ …
Read More »
Laxmi News 24×7