Breaking News

Monthly Archives: ಮಾರ್ಚ್ 2022

ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್

ಚಿಕ್ಕೋಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ‌ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ಪ್ರತಿದಿನ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಗಲಾಟೆ …

Read More »

ಉಕ್ರೇನ್​ನಲ್ಲಿ ರಷ್ಯಾ ದಾಳಿಗೆ ಕರುನಾಡ ವಿದ್ಯಾರ್ಥಿ ಬಲಿ…

ಹಾವೇರಿ: ಉಕ್ರೇನ್​ನ ಖಾರ್ಕೀವ್​ನಲ್ಲಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್​ ಅಸುನೀಗಿದ್ದು, ಅವರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಈ ಸಂಬಂಧ ಮೃತ ನವೀನ್ ಮನೆಗೆ ದೌಡಾಯಿಸಿದ ನೂರಾರು ಜನರು ಹಾಗೂ ಸಂಬಂಧಿಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ರಷ್ಯಾ ಆಕ್ರಮಣಕ್ಕೆ ಭಾರಿ ಆಕ್ರೋಶ ವ್ಯಕ್ತಪಡಿಸಿದ ಜನರು, ವಿದೇಶಾಂಗ ಇಲಾಖೆ ವಿಫಲವಾಗಿದೆ. ನಮ್ಮ ಮಕ್ಕಳನ್ನು ಕರೆಸಿಕೊಳ್ಳಲು ಅವರು ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ. ಈಗ ನಮ್ಮ ಮಗ ಬಾರದಲೋಕಕ್ಕೆ ತೆರಳಿದ, …

Read More »

ಆಂಜನೇಯನ ಜನ್ಮಭೂಮಿ ಹೈಜಾಕ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಕಿಡಿ

ದಾವಣಗೆರೆ: ಆಂಜನೇಯನ ಜನ್ಮಭೂಮಿ ಹೈಜಾಕ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಕಿಡಿಕಾರಿದರು. ಶ್ರೀ ಆಂಜನೇಯ ಜನ್ಮಭೂಮಿ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗಾವತಿಯ ಕಿಷ್ಕಿಂದೆ ಆಂಜನಾದ್ರಿ ಬೆಟ್ಟವೇ ಹನುಮನ ನಿಜವಾದ ಜನ್ಮಭೂಮಿ. ತಿರುಪತಿಯಲ್ಲಿ ವಿನಾಕರಣ ವಿವಾದ ಸೃಷ್ಠಿ ಮಾಡಲಾಗುತ್ತಿದೆ. ಆಂಜನೇಯನ ಜನ್ಮಭೂಮಿಯನ್ನೆ ಹೈಜಾಕ್ ಮಾಡಲಾಗುತ್ತಿದೆ. ಕೋಟ್ಯಂತರ ಭಕ್ತರ ಭಾವನೆಯ ಪ್ರಶ್ನೆ ಇದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಅವರ ಶ್ರೀಮತಿಯವರು ಸಹ ಇಲ್ಲಿಗೆ ಭೇಟಿ ನೀಡಿದ್ದಾರೆ. ರಾಮ …

Read More »

ಬೆಂಗಳೂರಿಗೆ ನೀರು ಒದಗಿಸಲು ಬಿಜೆಪಿ ಸರ್ಕಾರಕ್ಕೆ ಮಾತ್ರ ಸಾಧ್ಯ: ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ನೀರು ಕೊಡುವ ವ್ಯವಸ್ಥೆ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ ಎನ್ನುವ ವಿಶ್ವಾಸ ಬೆಂಗಳೂರಿನ ಜನತೆಗೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಎತ್ತಿನಹೊಳೆ ಯೋಜನೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರನ್ನು ಒದಗಿಸಲು ಡಿಪಿಆರ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ .ಉತ್ತರ ಭಾಗದ ನೀರಿನ ಸಮಸ್ಯೆಯನ್ನು ಇದರಿಂದ ಬಗೆಹರಿಸಲು ಸಾಧ್ಯ. ನಾನು ನೀರಾವರಿ ಸಚಿವನಿದ್ದಾಗ ಮೇಕೆದಾಟು ಯೋಜನೆ 1996 ರಲ್ಲಿ ಪ್ರಾರಂಭವಾಯಿತು. ಈಗ …

Read More »

ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್

ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ  ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ. ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ …

Read More »

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್‌ಡಿಕೆ

ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್‌ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು …

Read More »

ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ ಸಂಸದ: ಸಿ.ಎಂ.ಇಬ್ರಾಹಿಂ ಆಕ್ರೋಶ

ಮಡಿಕೇರೀ: ಕೊಡಗು ದೇಶದ ರಕ್ಷಣೆಗೆ ಮುಡಿಪಾಗಿಟ್ಟಿರುವ ನಾಡು ಈ ಜಿಲ್ಲೆಯಿಂದ ಬಹಳಷ್ಟು ಮಂದಿ ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಈ ಸಂದರ್ಭ ಸಿ.ಎಂ.ಇಬ್ರಾಹಿಂ ಹೇಳಿದರು. ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ …

Read More »

ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ..; ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ ಶಿವಕುಮಾರ್

ಬೆಂಗಳೂರು: ಯಾರಿಗೂ ಅಧಿಕಾರ ಶಾಶ್ವತವಲ್ಲ. ಎಲ್ಲರಿಗೂ ಇದು ನೆನಪಿರಲಿ. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಸರ್ಕಾರ ಬದಲಾವಣೆಯಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.   ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸರ ವಿರುದ್ಧ ಕಿಡಿಕಾರಿದರು. ಪೊಲೀಸರು ಅವರ ಬಟ್ಟೆ ಬಿಚ್ಚಿ ಬಿಜೆಪಿ ಬಟ್ಟೆ ಹಾಕಿಕೊಳ್ಳಲಿ. ಯಾವ್ಯಾವ ಪೊಲೀಸ್ ಅಧಿಕಾರಿಗಳು ಏನೇನು ಮಾಡುತ್ತಿದ್ದಾರೆಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನನ್ನ ಬಳಿ …

Read More »

ಶಿವಮೊಗ್ಗ: ಹತ್ಯೆಯಾಗಿರುವ ಹರ್ಷ ಮನೆಗೆ ಸಿಟಿ ರವಿ ಭೇಟಿ, ಸಾಂತ್ವನ

ಶಿವಮೊಗ್ಗ : ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 24 ಗಂಟೆ ಒಳಗೆ ಹತ್ತು ಜನ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಕುಮ್ಮಕ್ಕು ನೀಡಿದವರು ಯಾರು, ಯಾವ ಸಂಘಟನೆ ಈ ಘಟನೆ ಹಿಂದೆ ಇದೆ ಎಂದು ಮೂಲಕ್ಕೆ ಕೈಹಾಕಿ ಪೊಲೀಸರು ತನಿಖೆ ನಡೆಸುತಿದ್ದಾರೆ. ಹರ್ಷ ಕೊಲೆ ಆರೋಪಿಗಳಿಗೆ ಕಠಿಣ …

Read More »

ಉಕ್ರೇನ್​​ನಿಂದ ಬೆಂಗಳೂರಿಗೆ‌ ಆಗಮಿಸಿದ ಐವರು ವಿದ್ಯಾರ್ಥಿಗಳು.. ಸರ್ಕಾರಕ್ಕೆ ಥ್ಯಾಂಕ್ಸ್​ ಹೇಳಿದ ಸ್ಟುಡೆಂಟ್ಸ್​​

ದೇವನಹಳ್ಳಿ(ಬೆಂಗಳೂರು): ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದೆ. ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್​ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್​​ ನಾಯಕ್, ನಿಹಾರಿಕಾ, ಆಶಾ …

Read More »