Breaking News

Daily Archives: ಏಪ್ರಿಲ್ 2, 2022

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.ದೆಹಲಿ: ಅರವಿಂದ್​ ಕೇಜ್ರಿವಾಲ್(Arvind Kejriwal)​ಅವರ ಆಮ್​ ಆದ್ಮಿ ಪಕ್ಷ(Aam Aadmy Party)ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು …

Read More »

ನಕ್ಸಲ್ ನಾಯಕಿ ಸಾವಿತ್ರಿಯನ್ನು ಶೃಂಗೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಚಿಕ್ಕಮಗಳೂರು: ಮಲೆನಾಡಿನ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದು, ಸುಮಾರು 1 ದಶಕದಿಂದ ಭೂಗತರಾಗಿ ಇತ್ತೀಚೆಗೆ ಕೇರಳದಲ್ಲಿ ಬಂಧಿತರಾಗಿರುವ ಸಾವಿತ್ರಿ(37) ಅವರನ್ನು ಶುಕ್ರವಾರ ಶೃಂಗೇರಿಯ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಶುಕ್ರವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಸಾವಿತ್ರಿ ಅವರನ್ನು ಶೃಂಗೇರಿ ಪಟ್ಟಣದ ನ್ಯಾಯಾಲಯದ ಆವರಣಕ್ಕೆ ಕರೆ ತಂದ ಪೊಲೀಸರು ಕೆಲ ಹೊತ್ತಿನ ಬಳಿಕ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಸಚಿನ್ ಅವರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಧೀಶರು ಆರೋಪಿ ಸಾವಿತ್ರಿ ಅವರನ್ನು ಎ.8ರವರೆಗೆ …

Read More »

ಶಾಂತಿ ಕದಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

ಚಾಮರಾಜನಗರ: ಹಿಜಾಬ್‌, ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ, ಹಲಾಲ್‌ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ವತಿಯಿಂದ ನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಯಿತು.   ಡೀವಿಯೇಷನ್‌ ರಸ್ತೆಯಲ್ಲಿರುವ ಲಾರಿ ನಿಲ್ದಾಣದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಸಮಾಜದಲ್ಲಿ ಜಾತಿ, ಧರ್ಮ ನಡುವೆ ಧ್ವೇಷವನ್ನು ಬಿತ್ತಿ ಶತ …

Read More »

ಉತ್ತರ ಕೊಡಿ: ಅಮಿತ್‌ ಶಾಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ರಾಜ್ಯ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೋಟು ರದ್ದು, ಕೃಷಿ ಕಾಯ್ದೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ.   ‘ಆನ್ಸರ್‌ ಮಾಡಿ ಅಮಿತ್‌ ಶಾ’ ಹೆಸರಿನಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಸಹಕಾರ ಸಮ್ಮೇಳನಲ್ಲಿ ಭಾಷಣ ಆರಂಭಿಸುವ ಮುನ್ನ ಈ ಪ್ರಶ್ನೆಗಳಿಗೆ ಉತ್ತರಿಸಿ’ ಎಂದು ಕೇಳಿದ್ದಾರೆ. ‘ಸಹಕಾರ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡುತ್ತಿದ್ದೀರಿ. ಈ …

Read More »

ಶಿಕ್ಷಕಿ ಬಾತ್​ರೂಂಗೆ ಹೋಗಿದ್ದ ವೇಳೆ ಆ ದೃಶ್ಯವನ್ನು ಅಪ್ರಾಪ್ತ ವಿದ್ಯಾರ್ಥಿ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

ಪುಣೆ : ಪುಣೆಯ ಅಲಂಕಾರ್ ಪೊಲೀಸ್ ಠಾಣೆಯ ಆವರಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿಗೆ ಪಾಠ ಹೇಳಲು ಮನೆಗೆ ಬಂದ ಶಿಕ್ಷಕಿ ಬಾತ್​ರೂಂಗೆ ಹೋಗಿದ್ದ ವೇಳೆ ಆ ದೃಶ್ಯವನ್ನು ಅಪ್ರಾಪ್ತ ವಿದ್ಯಾರ್ಥಿ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. 16ರ ಹರೆಯದ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ಅನ್ನು ವಾಶ್ ರೂಂನಲ್ಲಿ ಮರೆಮಾಡಿಟ್ಟಿದ್ದಾನೆ. ಇದರ ಅರಿವಿಲ್ಲದ ಶಿಕ್ಷಕಿ ಬಾತ್​ರೂಂ ಬಳಕೆ ಮಾಡಿ ಹೊರ ಬಂದಿದ್ದಾರೆ. ಆದರೆ, ಶಿಕ್ಷಕಿಯ ಎಲ್ಲಾ ಖಾಸಗಿ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. …

Read More »

ಯುಗಾದಿ ಹೊತ್ತಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಯುಗಾದಿ ಹೊತ್ತಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ‘ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ‘6,406 ಹುದ್ದೆ’ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ ( ಗ್ರೇಡ್ 2) ಹುದ್ದೆಗೆ ಪದವಿ ಪೂರ್ವ ಶಿಕ್ಷಣದಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರತಕ್ಕದ್ದು, ಮತ್ತು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ. ಹಾಗೂ ಹಿಂದಿನ ಮಂಡಲ ಪಂಚಾಯತ್ ಅಥವಾ ಗ್ರಾಮ ಪಂಚಾಯತ್ ಗಳಲ್ಲಿ ಬಿಲ್ ಕಲೆಕ್ಟರ್ ಗಳು/ಗುಮಾಸ್ತರು/ಬೆರಳಚ್ಚುಗಾರರು/ಗುಮಾಸ್ತ ಕಮ್ ಡೇಟಾ …

Read More »

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ!

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ! ಈ ರಾಶಿಯ ಉದ್ಯೋಗಿಗಳಿಗೆ ಮುಂಬಡ್ತಿ,ವರ್ಗಾವಣೆ,ಮನೆ ಕಟ್ಟಡ ಇತ್ಯಾದಿ ಯಶಸ್ವಿ ಕಾರ್ಯ ಪ್ರಾರಂಭ! ಶನಿವಾರ ರಾಶಿ ಭವಿಷ್ಯ-ಏಪ್ರಿಲ್-2,2022 ಯುಗಾದಿ,ಚೈತ್ರ ನವರಾತ್ರಿ ಸೂರ್ಯೋದಯ: 06:10am, ಸೂರ್ಯಸ್ತ: 06:29pm ಶುಭಕೃತ್ ನಾಮ ಸಂವತ್ಸರ ಶಾಲಿವಾಹನ ಶಕೆ1944, ಸಂವತ್ 2078 ಚೈತ್ರ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಪಾಡ್ಯ 11:58am ವರೆಗೂ, ನಂತರ ಬಿದಿಗೆ ನಕ್ಷತ್ರ: ರೇವತಿ 11:21am ವರೆಗೂ , ಅಶ್ವಿನಿ ಯೋಗ: …

Read More »