ಹೆಂಡತಿಗೆ ಹೇಳದೆ ರಹಸ್ಯವಾಗಿ ವೀರ್ಯಾಣು ದಾನ ಮಾಡುವ ವಿಕ್ಕಿ ಡೋನರ್ ಸಿನೆಮಾ ನೆನಪಿದೆಯಾ ? ಇಂಥದ್ದೇ ನೈಜ ಘಟನೆಯೊಂದು ನಡೆದಿದೆ. ಪತ್ನಿಗೆ ತಿಳಿಸದೇ ವೀರ್ಯಾಣು ದಾನ ಮಾಡಿದ ವ್ಯಕ್ತಿ ಈಗ ತೊಂದರೆಗೆ ಸಿಲುಕಿಕೊಂಡಿದ್ದಾನೆ. ಈ ಬಗ್ಗೆ ಖುದ್ದು ಆ ವ್ಯಕ್ತಿಯೇ ರೆಡಿಟ್ ನಲ್ಲಿ ಬರೆದುಕೊಂಡಿದ್ದಾನೆ. ಹೆಚ್ಚುವರಿ ಹಣ ಗಳಿಸಲು ಆತ ಈ ಮಾರ್ಗವನ್ನು ಆಯ್ದುಕೊಂಡಿದ್ದ. ಪತಿ ವೀರ್ಯ ದಾನ ಮಾಡ್ತಿರೋ ವಿಷಯ ತಿಳಿದ ಪತ್ನಿ ಆಘಾತಗೊಂಡಿದ್ದಳು. ಆತ ತನಗೆ ಮೋಸ …
Read More »Daily Archives: ಏಪ್ರಿಲ್ 7, 2022
ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್
ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು ನಿವಾರಣೆ ಮಾಡಿ ಭೂ ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕಗೊಳಿಸಿ ರೈತರ ರಕ್ಷಣೆಗಾಗಿ ಕಾನೂನಿಗೆ ತಿದ್ದುಪಡಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಸಾಗುವಳಿದಾರರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕ ಮಾಡಲಾಗುವುದು. ಜೀವನ ನಡೆಸಲು ಒತ್ತುವರಿ ಮಾಡಿಕೊಂಡಿರುವ …
Read More »ಪರೋಕ್ಷವಾಗಿ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಬಾಗಲಕೋಟೆ: ಬಾದಾಮಿ ಮತ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಗರು ಕೆಲಸ ಮಾಡದಿದ್ರೆ ನಾನೇ ಬಂದು ಕೆಲಸ ಮಾಡಿ ಕೊಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇನೆಂದು ಪರೋಕ್ಷವಾಗಿ ಹೇಳಿದರು. ಆಲೂರ ಎಸ್.ಕೆ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ …
Read More »ವಿಕ್ರಾಂತ್ ಹಡಗು ಹಗರಣ: ಬಿಜೆಪಿ ನಾಯಕ ಮತ್ತು ಅವರ ಮಗನ ವಿರುದ್ಧ ಮಾಜಿ ಸೈನಿಕರಿಂದ ದೂರು
ಮುಂಬೈ(ಮಹಾರಾಷ್ಟ್ರ): ಐಎನ್‌ಎಸ್ ವಿಕ್ರಾಂತ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕಿರೀತ್ ಸೋಮಯ್ಯ ಮತ್ತು ಅವರ ಮಗ ನೀಲ್ ಸೇರಿದಂತೆ ಇತರರ ವಿರುದ್ಧ ಮಾಜಿ ಯೋಧರೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಂಚನೆ ದೂರಿನ ಮೇರೆಗೆ ಸೋಮಯ್ಯ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ವಿಕ್ರಾಂತ್ ಹಡಗಿನ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಆರೋಪಿಸಿದ್ದರು. ಮಾಜಿ ಸೈನಿಕ ಬಾಬನ್ …
Read More »ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತ, ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆ
ಬೆಂಗಳೂರು, ಏ. 07: ಜಾರಕಿಹೊಳಿಯೂ ಸಂಪುಟಕ್ಕೆ?: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬೆಳಗಾವಿ ಭಾಗದ ಪ್ರಭಾವಿ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ. ಜಾರಕಿಹೊಳಿ ಅವರಿಗೆ ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಸದ್ಯ ಆರ್‌ಡಿಪಿಆರ್ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ತೊಡಗಿಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವರ ಅವರ ತಲೆದಂಡವಾಗುವ ಸಾಧ್ಯತೆ …
Read More »ಆಮ್ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಂತೆ, ರಾಜ್ಯದಲ್ಲಿ ಆ ಪಕ್ಷದ ಮರು ಪ್ರವೇಶದ ಸೂಚನೆ ನೀಡಿದೆ. ಕೇಜ್ರಿವಾಲ್ ಪಕ್ಷಕ್ಕೆ ಕರ್ನಾಟಕ ಹೊಸದೇನಲ್ಲ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ರಾಜ್ಯದ ಜನರಿಗೆ ತನ್ನ ಪರಿಚಯ ಮಾಡಿಕೊಂಡಿತ್ತು. ಆದರೆ, ಬೇರು ಗಟ್ಟಿಮಾಡಿಕೊಳ್ಳಲು ಪ್ರಯತ್ನಿಸಿ ಸೋತಿತ್ತು. ಆದರೀಗ ದೊಡ್ಡ ಉದ್ದೇಶ ಇಟ್ಟುಕೊಂಡಂತೆ ಪ್ರವೇಶ ಮಾಡುವ ಸುಳಿವು ನೀಡಿದೆ. ಮುಂಬರುವ …
Read More »ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ:ಡಿ.ಕೆ. ಶಿ.
ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. …
Read More »ಮೋದಿ ತಮ್ಮ ಮನೆಗೆ ಕೆಲಸ ಮಾಡ್ತೀಲ್ಲ, ದೇಶದ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ:ಶಶಿಕಲಾ ಜೊಲ್ಲೆ
ಕೊಪ್ಪಳ: ಮಸೀದಿ, ಮಂದಿರಗಳಲ್ಲಿ ಧ್ವನಿ ವರ್ಧಕ ಬಳಕೆ ವಿಚಾರ, ಇದು ಇವತ್ತಿನ ವಿಷಯ ಅಲ್ಲ. ಬಹಳ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶ ಇದೆ. ಇಷ್ಟೇ ಪ್ರಮಾಣದ ಧ್ವನಿ ವರ್ದಕ ಬಳಸಲು ಆದೇಶವಿದೆ. ಆದರೆ ಅದು ಸರಿಯಾಗಿ ಫಾಲೋ ಆಪ್ ಆಗುತ್ತಿಲ್ಲ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಕೊಪ್ಪಳದಲ್ಲಿ ಬಿಜೆಪಿ 42 ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲ ಧಾರ್ಮಿಕ ಸಂಸ್ಥೆಗಳಿಗೆ ನಿಯಮಗಳಿವೆ. …
Read More »ಕಳೆದಿದ್ದ ಚಿನ್ನಾಭರಣಗಳ ಸೂಟ್ ಕೇಸ್ ವಾರಸುದಾರರಿಗೆ ತಲುಪಿಸಿದ ಹೋಮ್ ಗಾರ್ಡ್..
ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ. ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. …
Read More »ಸರ್ಕಾರಿ ಶಾಲೆ ಎದುರು ವಾಮಾಚಾರ ಮಾಡಿರುವ ಕುರಿತು ಗ್ರಾಮಸ್ಥರ ಆತಂಕ
ಬಾಗಲಕೋಟೆ: ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಮಾಚಾರ ಮಾಡಿರುವ ಘಟನೆ ಇಳಕಲ್ ತಾಲೂಕಿನ ಗೋನಾಳ ಎಸ್ಬಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಮಕ್ಕಳು, ಗ್ರಾಮಸ್ಥರು ಭಯಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗೇಟ್ ಎದುರು ಎರಡು ಗೊಂಬೆ ಇರಿಸಿ, ಕುಂಕುಮ ಎರಚಿ, ನಿಂಬೆ ಹಣ್ಣುಗಳನ್ನಿಟ್ಟು ವಾಮಾಚಾರ ಮಾಡಲಾಗಿದೆ. ಈ ಬಗ್ಗೆ ಬೆಳಗಿನ ಜಾವ ಗ್ರಾಮದ ಜನತೆ ನೋಡಿ ಆತಂಕ ವ್ಯಕ್ತಪಡಿಸಿ, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದಿದ್ದಾರೆ.ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು …
Read More »
Laxmi News 24×7