ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ್ ಪಾಟೀಲ್ ದೇಹ ಉಡುಪಿಯ ಲಾಡ್ಜ್ ನಲ್ಲಿ ಪತ್ತೆಯಾಗಿದೆ. ಖುದ್ದು ಎಸ್.ಪಿ ಸ್ಥಳಕ್ಕೆ ಹೋಗಿದ್ದಾರೆ ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಪ್ರಾಥಮಿಕ …
Read More »Daily Archives: ಏಪ್ರಿಲ್ 13, 2022
ಸಂತೋಷ್ ಯಾರೆಂದೇ ನನಗೆ ಗೊತ್ತಿಲ್ಲ, : ಸಚಿವ ಈಶ್ವರಪ್ಪ
ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್ ಯಾರು ಎಂದೇ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ’ ಎಂದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ …
Read More »ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ,: ಈಶ್ವರ್ ಖಂಡ್ರೆ
ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ : ಉಡುಪಿಗೆ ಆಗಮಿಸಿದ ಕುಟುಂಬಿಕರು
ಉಡುಪಿ: ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಿಕರು ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದರು. ಬೆಂಗಳೂರಿಂದ ಮತ್ತು ಬೆಳಗಾವಿಯಿಂದ ಬಂದಿರುವ ಸಹೋದರರು ಸೇರಿದಂತೆ ಎಂಟು ಮಂದಿ ಕುಟುಂಬಿಕರು ಘಟನೆ ನಡೆದ ಖಾಸಗಿ ಲಾಡ್ಜ್ ಗೆ ಆಗಮಿಸಿ ನೇರವಾಗಿ ಆತ್ಮಹತ್ಯೆ ಮಾಡಿಕೊಂಡ ರೂಮ್ ನಂಬರ್ 207 ತೆರಳಿದರು. ನಾವು ಬಾರದೆ ಯಾವುದೇ ತನಿಖೆ ಮುಂದುವರೆಸಬೇಡಿ …
Read More »ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. 2021ರ ಸೆ.17ರಿಂದ 21ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಇಒ ಅವರ ಇ-ಸ್ವತ್ತು ಲಾಗಿನ್ ಐಡಿಯನ್ನು ಹ್ಯಾಕ್ ಮಾಡಿ 36 ಕಂದಾಯ ಸೈಟುಗಳಿಗೆ ಇ-ಖಾತಾ ವಿತರಿಸಲಾಗಿತ್ತು.
Read More »
Laxmi News 24×7