Breaking News

Daily Archives: ಏಪ್ರಿಲ್ 15, 2022

ರೈತನಿಗೆ ಸಿಡಿಲು ಬಡಿದು ಆ ರೈತ ಮತ್ತು ಎಮ್ಮೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ನಡೆದಿದೆ.

ಎಮ್ಮೆ ಮೇಯಿಸಲು ಹೋಗಿದ್ದ ರೈತನಿಗೆ ಸಿಡಿಲು ಬಡಿದು ಆ ರೈತ ಮತ್ತು ಎಮ್ಮೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ನಡೆದಿದೆ.   ತುಮ್ಮರಗುದ್ದಿ ಗ್ರಾಮದ 25 ವರ್ಷದ ಭೀಮಪ್ಪ ಅಡಿವೆಪ್ಪ ಬಸರಿಮರದ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿ. ಸಿಡಿಲಿನ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಎಮ್ಮೆ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಕಾಕತಿ ಪೊಲೀಸ್ …

Read More »

ಮಿನಿ ಬಸ್​ವೊಂದು ನಿಯಂತ್ರಣ ತಪ್ಪಿ ಪಲ್ಟಿ

ಕೊಡಗು: ಜಿಲ್ಲೆಯಾದ್ಯಂತ ಭಾರೀ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ಮಿನಿ ಬಸ್​ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 275 ಮಡಿಕೇರಿ ಸಮೀಪದ ಬೋಯಿಕೇರಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಸದ್ಯ ಯಾವುದೇ ರೀತಿಯ ಸಾವು, ನೋವುಗಳು ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರಾಗಿದ್ದಾರೆ. ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More »

ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಕ್ಷದ ಒತ್ತಡ ಇತ್ತು: ಸತೀಶ್‌ ಜಾರಕಿಹೊಳಿ

ಘಟಪ್ರಭ: ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಕ್ಷದ ಒತ್ತಡ ಇತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಪ್ರತಿಭಟನೆ ಮುಂದೆವರಿಸುತ್ತಿತ್ತು. ಈಗ ಅವರು ರಾಜೀನಾಮೆ ನೀಡಿರುವುದು ಒಳ್ಳೆಯದು, ಮೊದಲೇ ರಾಜೀನಾಮೆ ನೀಡಬೇಕಾಗಿತ್ತು. ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಮುಖಂಡರು …

Read More »