Breaking News

Daily Archives: ಏಪ್ರಿಲ್ 18, 2022

ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ.   ಪ್ರತಿ ಅರ್ಜಿ ಫಾರ್ಮ್​ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, …

Read More »

ವಿಡಿಯೋ ಕಾಲ್​ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿ ಮುಂಡಿಯಿಸಿದ್ದ ಯುವತಿ

ಶಿರಸಿ: ಯುವತಿಯೊಬ್ಬಳು ಫೆಸ್​​ಬುಕ್​ನಲ್ಲಿ ಯುವಕನೋರ್ವನಿಗೆ ವಿಡಿಯೋ ಕಾಲ್​ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿ ಮುಂಡಿಯಿಸಿದ್ದಾಳೆ. ಈ ಘಟನೆ ಶಿರಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಡದಿದ್ದು, ನಗರದ ಟಿ.ಎಸ್. ಎಸ್​.ಗೆ ಅಡಿಕೆ ವ್ಯಾಪಾರ ಮಾಡಿದ ಹಣವನ್ನೆಲ್ಲ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಯುವತಿಯೋರ್ವಳು ಫೇಸ್​ಬುಕ್​ನಲ್ಲಿ ಶಿರಸಿಯ ಯುವಕನಿಗೆ ಪರಿಚಯವಾಗಿದ್ದಾಳೆ, ನಂತರ ದಿನನಿತ್ಯ ಇಬ್ಬರು ಚಾಟಿಂಗ್ ಮಾಡಿದ್ದಾರೆ. ಈ ಯುವಕನಿಗೆ 35 ವರ್ಷ ವಯಸ್ಸಾಗಿದ್ದು, ಈವರೆಗೂ ಮದುವೆಯಾಗಿಲ್ಲ. ಈ ಹಿನ್ನೆಲೆ ಫೇಸ್​ಬುಕ್​ನಲ್ಲಿ ಚೆಂದವಾಗಿ …

Read More »

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಬೊಮ್ಮಾಯಿ ಸರಕಾರದ ಮತ್ತೆ 2 ವಿಕೆಟ್ ಪತನ?

ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎನ್ನುವ ಆರೋಪ ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಹೋಗಿತ್ತು. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ ದೆಹಲಿಯಲ್ಲಿ ಅವರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅಪಾಯಿಂಟ್ಮೆಂಟ್ ಸಿಗದ ಕಾರಣ, ಗುತ್ತಿಗೆದಾರರ ಸಂಘ ಮುಂದಕ್ಕೆ ಹೆಜ್ಜೆಯನ್ನು …

Read More »

ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರು ಏಪ್ರಿಲ್ 14ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕೋ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣದಲ್ಲಿ ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಗುರುವಾರ (ಏಪ್ರಿಲ್ 14) ಕಾನೂನು ಬಾಹಿರವಾಗಿ ಮುತ್ತಿಗೆ ಹಾಕಲು …

Read More »

ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ.: ಬೊಮ್ಮಾಯಿ‌

ಬೆಂಗಳೂರು: ‘ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ, ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಬೆಳಿಗ್ಗೆ ಅವರು ಮಾತನಾಡಿದರು. ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅಕ್ರಮ ನಡೆದ ಬಗ್ಗೆ ಹಲವು ದೂರುಗಳು ಬಂದಿದ್ದವು. ತಕ್ಷಣ ಗೃಹ ಸಚಿವರು ಸಿಐಡಿಗೆ ತನಿಖೆ …

Read More »

ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ!

ಯಾದಾದ್ರಿ ಭುವನಗಿರಿ: ಜಿಲ್ಲೆಯ ಭುವನಗಿರಿ ನಗರದಲ್ಲಿ ಮರ್ಯಾದ ಹತ್ಯೆ ಸಂಚಲನ ಮೂಡಿಸಿದೆ. ಪಟ್ಟಣದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಎರುಕುಲ ರಾಮಕೃಷ್ಣ (32) ಸಿದ್ದಿಪೇಟ್ ಜಿಲ್ಲೆಯ ಲಕುದರಂ ಉಪನಗರದ ಪದ್ದಮ್ಮತಲ್ಲಿ ದೇವಸ್ಥಾನದ ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ರಾಮಕೃಷ್ಣನನ್ನು ಆಕೆಯ ಚಿಕ್ಕಪ್ಪ ವೆಂಕಟೇಶ್ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪತ್ನಿ ಭಾರ್ಗವಿ ನೀಡಿದ ದೂರಿನ ಮೇರೆಗೆ …

Read More »

ಹುಬ್ಬಳ್ಳಿ ಗಲಭೆ; ದೇವಾಲಯ, ಆಸ್ಪತ್ರೆಗೆ ಸಚಿವರ ಭೇಟಿ

ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇಹುಬ್ಬಳ್ಳಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಯುವಕ ವಾಟ್ಸಪ್‌ನಲ್ಲಿ ಎಡಿಟ್‌ ಮಾಡಿದ ಪ್ರಚೋದನಾಕಾರಿ ಪೋಸ್ಟರ್‌ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು. ಪೊಲೀಸರು, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಪೊಲೀಸರು ಆಸ್ಪತ್ರೆಯಲ್ಲಿ …

Read More »

ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್​ರ ಪತ್ನಿ ರಜನಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮುಂಬೈ: ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್​ರ ಪತ್ನಿ ರಜನಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಂಬೈನ ಕುರ್ಲಾ ಪೂರ್ವದ ನೆಹರು ನಗರದ ಡಿಗ್ನಿಟಿ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿರುವ ಶಾಸಕರ ಫ್ಲಾಟ್‌ನಲ್ಲಿ ಭಾನವಾರ ರಾತ್ರಿ 8.30ರ ಸುಮಾರಿಗೆ ಶಾಸಕರ ಪತ್ನಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾಸಕರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.   ಸ್ಥಳಕ್ಕೆ ಬಂದ ಮುಂಬೈ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. …

Read More »

100ಕ್ಕೂ ಹೆಚ್ಚು ಮಂದಿಯ ಬಂಧನ: ನಮ್ಮ ಮಕ್ಕಳನ್ನು ಬಿಟ್ಟುಬಿಡಿ ಎಂದು ಪೋಷಕರ ಗೋಳಾಟ

ಹುಬ್ಬಳ್ಳಿ (ಏ.17): ಪ್ರಚೋದನಕಾರಿ ಪೋಸ್ಟ್​ (Provocative Post) ​ ವಿರೋಧಿಸಿ ಹುಬ್ಬಳ್ಳಿಯಲ್ಲಿ(Hubballi) ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಒಟ್ಟು 12 ಮಂದಿ ಪೊಲೀಸರು (Police) ಗಾಯಗೊಂಡಿದ್ದು, ಪ್ರಕರಣ ಸಂಬಂಧ 100 ಮಂದಿಯನ್ನು ಪೊಲೀಸರು ವಶಕ್ಕೆ (100 People Arrests) ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರ ಸಂಖ್ಯೆ ನೂರರ ಗಡಿ ದಾಟಿದ್ದು, ಬಂಧಿತರಲ್ಲಿ ಮೂವರು ಬಾಲಾಪರಾಧಿಗಳಿದ್ದಾರೆ. ಈ ಸಂಬಂಧ ಇದುವರೆಗೆ ಒಟ್ಟು 8 ಪ್ರತ್ಯೇಕ FIR ದಾಖಲಾಗಿದೆ. ಬಂಧಿತರನ್ನು ಕಲಬುರಗಿ …

Read More »

‘ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್‌ ನೀಡಬೇಕಿದೆ.

ಬಾಗಲಕೋಟೆ: ‘ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್‌ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ …

Read More »