Breaking News

Daily Archives: ಏಪ್ರಿಲ್ 21, 2022

ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು, 40% ಸರ್ಕಾರ ಹೋಗಬೇಕು – ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಕರೆ

ಬೆಂಗಳೂರು: ದೆಹಲಿ, ಪಂಜಾಬ್ ನಲ್ಲಿ ನಮ್ಮ ಸರ್ಕಾರ ಇದೆ. ಈಗ ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು. ಇಲ್ಲಿ 40% ಸರ್ಕಾರ ಇದೆ. ದೆಹಲಿಯಲ್ಲಿ ೦% ಸರ್ಕಾರ ಇದೆ. ಈ ಸರ್ಕಾರ ಹೋಗಿ, ನಮ್ಮ ಎಎಪಿ ಸರ್ಕಾರ ಬರಬೇಕು ಎಂಬುದಾಗಿ ಎಎಪಿ ಅಧ್ಯಕ್ಷ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.   ಇಂದು ರೈತ ಸಮಾವೇಶದಲ್ಲಿ ಭಾವಹಿಸಿ ಮಾತನಾಡಿದಂತ ಅವರು, ಕೇಂದ್ರ ಸರ್ಕಾರ ಮೂರು‌ ಕೃಷಿ ಕಾಯ್ದೆ ತಂದಿತ್ತು. ಅಹಂಕಾರದಿಂದ …

Read More »

ಕರ್ನಾಟಕದ ಮುಡಿಗೆ ಮತ್ತೊಂದು ಗರಿ : ಸರ್ಕಾರದ ʼಸೇವಾ ಸಿಂಧು ಪೋರ್ಟಲ್‌ʼಗೆ ʼಕೇಂದ್ರ ಪ್ರಶಸ್ತಿʼ

ನವದೆಹಲಿ : ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ. ಹೌದು, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದರು. ಇನ್ನು ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. …

Read More »

ದೆಹಲಿಯ ಖಾಸಗಿ ಶಾಲೆಗಳ 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ: ಕೇಜ್ರಿವಾಲ್

ಬೆಂಗಳೂರು: ದೆಹಲಿಯಲ್ಲಿ ಈ ವರ್ಷ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಹೇಳಿದ್ದಾರೆ. ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಬದಲಾಯಿಸಿದ್ದೇವೆ. ಈ ವರ್ಷ ನಾಲ್ಕು ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ಆಸ್ಪತ್ರೆಗಳ ಪರಿಸ್ಥಿತಿಯೂ …

Read More »

ಗರಿಗೆದರಿದ ಎಂಎಲ್‌ಸಿ ಚುನಾವಣೆ; ಮೂರು ಜಿಲ್ಲೆಗಳಲ್ಲಿ ರಂಗೇರಿದ ರಾಜಕೀಯ ಕಣ

ಬೆಳಗಾವಿ: ವಾಯವ್ಯ ಪದವೀಧರ ವಿಧಾನ ಪರಿಷತ್ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕ ಮತಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೂರು ಜಿಲ್ಲೆಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.   2 ಸ್ಥಾನಗಳಿಗೆ ನಡೆಯಲಿರುವ ಈ ಪರಿಷತ್ ಚುನಾವಣೆ ಟಿಕೆಟ್‌ ಅನ್ನು ಭಾರತೀಯ ಜನತಾ ಪಕ್ಷ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಅಭ್ಯರ್ಥಿಗಳಿಗೆ ನೀಡಿದರೇ, ಕಾಂಗ್ರೆಸ್ ಪಕ್ಷವೂ ಬೆಳಗಾವಿ ಜಿಲ್ಲೆಯ ಎರಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಅಥಣಿಯ ನ್ಯಾಯವಾದಿ ಸುನೀಲ ಅಣ್ಣಪ್ಪ ಸಂಕ ಅವರಿಗೆ …

Read More »

ದಿನದಿಂದ ದಿನಕ್ಕೆ ಬಿಚ್ಚಿಕೊಳ್ಳುತ್ತಿರುವ ದಿವ್ಯಾ ಹಾಗರಗಿ ಲಿಂಕ್: IPS ಅಧಿಕಾರಿ ಜೊತೆ ಫೋಟೊ ವೈರಲ್

ಬೆಂಗಳೂರು, ಏ.21: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಲೆ ಮರೆಸಿಕೊಂಡಿರುವ ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಜತೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಕೂತಿರುವ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ದಿವ್ಯಾ ಹಾಗರಗಿ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಎಂಬುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಇದರ ಬೆನ್ನಲ್ಲೇ ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಜತೆ …

Read More »

BREAKING ಸಿನಿಮೀಯ ರೀತಿಯಲ್ಲಿ ಮೂವರು ವಿಚಾರಣಾಧೀನ ಕೈದಿಗಳು ಎಸ್ಕೇಪ್

ರಾಯಚೂರು: ಮೂವರು ವಿಚಾರಣಾಧೀನ ಕೈದಿಗಳು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ್ ಖನ್ನಾ ಮಯ ಹಾಗೂ ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಕೈದಿಗಳು. ಏನಿದು ಪ್ರಕರಣ..? ಈ ಮೂವರು ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ರಾಬರಿ ಮತ್ತು ಕೊಲೆ ಮಾಡಿರುವ ಆರೋಪ ಇದೆ. ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಇವರನ್ನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ವಿಚಾರಣೆ ಮುಗಿದ ಬಳಿಕ …

Read More »

ಹೊಂಬಾಳೆ ಫಿಲಂಸ್​ನಿಂದ ಬಿಗ್​ ಅನೌನ್ಸ್​ಮೆಂಟ್.. ಮುಂದಿನ ಚಿತ್ರದ ಬಗ್ಗೆ ರಿವೀಲ್..!

ರಾಕಿ ಭಾಯ್​​ ಅಭಿನಯದ ಕೆಜಿಎಫ್​ ಚಾಪ್ಟರ್ 2 ಪ್ಯಾನ್​ ಇಂಡಿಯಾ ಸಿನಿಮಾವನ್ನ ಇಡೀ ವಿಶ್ವ ಸಿನಿಮಾರಂಗ ಮೆಚ್ಚಿಕೊಂಡಿದೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಇಂಡಸ್ಟ್ರೀಯ ಘಟಾನುಘಟಿ ಸಿನಿಮಾ ಮೇಕರ್ಸ್, ನಟ-ನಟಿಯರು ಕೆಜಿಎಫ್​ ಸಿನಿಮಾಗೆ ಫುಲ್ ಮಾರ್ಕ್ಸ್​ ಕೊಟ್ಟಿದ್ದಾರೆ.  ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಇದರ ನಡುವೆ  ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ಈ ಸಂಸ್ಥೆಯ ನಿರ್ಮಾಣದ “ಕೆಜಿಎಫ್ 2” ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ …

Read More »

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …

Read More »

ಹುಬ್ಬಳ್ಳಿ ಕೋಮು ಗಲಭೆ : ಮೌಲ್ವಿಯ ಅಸಲಿ ಬಣ್ಣ ಬಟಾ ಬಯಲು

ಹುಬ್ಬಳ್ಳಿ, ಏ.21- ಶನಿವಾರ ರಾತ್ರಿ ನಡೆದ ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲಾಗಿದೆ. ಆತ ಮೌಲ್ವಿಯೇ ಅಲ್ಲ. ಮೌಲ್ವಿಯ ವೇಷ ಧರಿಸಿ ಬಂದಿದ್ದ ಲಾರಿಚಾಲಕ ಎಂಬುದು ಗೊತ್ತಾಗಿದೆ. ಹುಬ್ಬಳ್ಳಿ ಗಲಾಟೆಯಲ್ಲಿ ಮೌಲ್ವಿ ವೇಷದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಅಸಲಿಗೆ ಮೌಲ್ವಿಯೇ ಅಲ್ಲ. ಆತ ಲಾರಿ ಚಾಲಕ ವಾಸಿಂ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಮೌಲ್ವಿಯಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದ. ಈ ವೇಷ ಹಾಕಿ ತನ್ನದೇ ಆದ ಅಭಿಮಾನಿಗಳನ್ನು …

Read More »

ಮನೆ ಕಟ್ಟೋರಿಗೆ ಬಿಗ್ ಶಾಕ್ : ಶೀಘ್ರವೇ ಸಿಮೆಂಟ್ ಪ್ರತಿ ಚೀಲಕ್ಕೆ 50 ರೂ. ಏರಿಕೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.  ಟಿಪ್ಪು ಸುಲ್ತಾನ್ `ಮೈಸೂರು ಹುಲಿ’ ಬಿರುದು ಕೈಬಿಡಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ದೇಶಿಯ ಸಿಮೆಂಟ್ ಕಂಪನಿಗಳು ಶೀಘ್ರವೇ ಸಿಮೆಂಟ್ ಬೆಲೆಯನ್ನು 25-50 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹಣಕಾಸು ಸೇವಾ ಸಂಸ್ಥೆ ಕ್ರಿಸಿಲ್ …

Read More »