ಶಿವಮೊಗ್ಗ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಮಾತುಗಳನ್ನು ಆಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಯಾವುದೇ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾಯಕತ್ವ ಬದಲಾವಣೆಯ ಯಾವುದೇ ಚರ್ಚೆಯಿಲ್ಲ, ಅಂತಹ ವಿಚಾರವಿದ್ದರೆ ನನಗೆ ಗೊತ್ತಾಗುತ್ತಿತ್ತು. ಈಗಿರುವ ಸಿಎಂ ಬಸವರಾಜ್ …
Read More »Daily Archives: ಮೇ 2, 2022
ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಅರ್ಜಿ ಸಲ್ಲಿಸಿದ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ( Minister R Ashok ), ಬೆಂಗಳೂರಿನ ನಾಗರೀಕರಿಗೆ ವಿವಿಧ ಪಿಂಚಣಿ ಸೌಲಭ್ಯ ತಲುಪಿಸಲು ಇ-ಕಾಮರ್ಸ್ ಮೊರೆ ಹೋಗೋದಕ್ಕೆ ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಸ್ವಿಗ್ಗಿ, ಡಂಜೋ, ಜೊಮ್ಯಾಟೋ ಸಿಬ್ಬಂದಿ …
Read More »ಪಿಎಸ್‌ಐ ಅಕ್ರಮದಲ್ಲಿ ಮಂತ್ರಿಯ ಸಹೋದರ ಶಾಮೀಲು ಆರೋಪ
ಬೆಂಗಳೂರು, ಮೇ. 02: ಮೂವರು ಪಿಎಸ್‌ಐ ಅಭ್ಯರ್ಥಿಗಳ ಅಕ್ರಮ ನೇಮಕದಲ್ಲಿ ಪ್ರಭಾವಿ ಸಚಿವರ ಸಹೋದರ ಕೈವಾಡ ಇರುವ ಅರೋಪ ಕೇಳಿ ಬಂದಿದೆ. ಮಾಗಡಿ ಮೂಲದ ಮೂವರು ಅಭ್ಯರ್ಥಿಗಳು ಪಿಎಸ್‌ಐ ಆಗಿ ನೇಮಕವಾಗಿದ್ದರು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ 172 ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು …
Read More »ನಿನ್ನಿಂದ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು.. ಎಲ್ಲವನ್ನೂ ಟಿವಿಯಲ್ಲಿ ನೋಡಿದೆ. ಮಗನ ಮಾತಿಗೆ ಕಣ್ಣೀರಿಟ್ಟ ದಿವ್ಯಾ
ಕಲಬುರಗಿ: ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ… ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ದಿವ್ಯಾ ಹಾಗರಗಿ ತನ್ನ ಮಕ್ಕಳನ್ನು ನೋಡಿ ಕಣ್ಣೀರಿಟ್ಟಿದ್ದಾಳೆ. ತಾಯಿಯನ್ನು ನೋಡಲು ಭಾನುವಾರ ಸಿಐಡಿ ಕಚೇರಿ ಬಂದ ಇಬ್ಬರು ಮಕ್ಕಳು ಕೂಡ ತಾಯಿಯನ್ನು ನೋಡುತ್ತಿದ್ದಂತೆ ಕಣ್ಣೀರು ಸುರಿಸಿದರು. ಈ ವೇಳೆ ‘ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ …
Read More »ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್
ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ. ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ …
Read More »ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು
ಬೆಂಗಳೂರು,ಮೇ2- ಯಾವುದೇ ಕಾರಣಕ್ಕೂ ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಅವರು ರಾಜಕೀಯ ಉಳಿವಿಗಾಗಿ …
Read More »ಮೇ ತಿಂಗಳಲ್ಲಿ ಮಳೆಯ ದಿನಗಳು ಹೆಚ್ಚಿರಲಿದೆ
ಬೆಂಗಳೂರು: ಮಾರ್ಚ್ ಹಾಗೂ ಎಪ್ರಿಲ್‌ನಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಜಾಸ್ತಿಯಾಗಿದೆ. ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಜನ ತತ್ತರಿಸಿದ್ದಾರೆ. ಅದರ ಪ್ರಭಾವ ರಾಜ್ಯದಲ್ಲೂ ಬೀರಲಿದೆ ಎಂಬ ಆತಂಕ ಮನೆಮಾಡಿತ್ತು. ಆದರೆ, ಇದೇ ಸಮಯದಲ್ಲಿ ವರುಣನ ಆಗಮನ ಹಾಗೂ ಹವಾಮಾನ ತಜ್ಞರ ಮುನ್ಸೂಚನೆಯು ಜನರ ಆತಂಕವನ್ನು ತಕ್ಕಮಟ್ಟಿಗೆ ದೂರ ಮಾಡಿದೆ. ಅದರಂತೆ ರಾಜ್ಯದಲ್ಲಿ “ಬೇಸಗೆಯ ಪೀಕ್’ ಅಂದರೆ ಮೇಯಲ್ಲೂ ಮಳೆಯ ದಿನಗಳು ಹೆಚ್ಚು ಇರಲಿದ್ದು, ಇದರಿಂದ …
Read More »ಸವಾಲಿಗೆ ಜವಾಬ್ ವಾರ್ – ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದಾರಾ?
ಬೆಂಗಳೂರು: ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಈಗ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದು, ತನ್ನ ವಿರುದ್ಧ ತೊಡೆ ತಟ್ಟಿದವರನ್ನು ಎಕ್ಸ್ ಪೋಸ್ ಮಾಡಲು ಡಿಕೆ ಶಿವಕುಮಾರ್ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ಈ ಮೊದಲ ರಾಜಕೀಯವಾಗಿ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ, ವಾಗ್ದಾಳಿ ನಡೆಯುತ್ತಿದ್ದವು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ʼಸವಾಲಿಗೆ ಜವಾಬ್ʼ ಎಂಬ ಪೊಲಿಟಿಕ್ಸ್ ಶುರುವಾಗಿದೆ. ಸವಾಲಿಗೆ ಜವಾಬ್ʼ ಹೋರಾಟದಲ್ಲಿ ಕಾಕತಾಳಿಯವೋ ತಂತ್ರಗಾರಿಕೆಯೋ ಗೊತ್ತಿಲ್ಲ. ಆದರೆ ಡಿಕೆಶಿ …
Read More »ಲಹರಿಗೆ 48 ವರುಷ : ಇಬ್ಬರ ಸಾಧನೆಗೆ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ ಅದ್ಭುತ ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ. ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ …
Read More »ಬದಲಾವಣೆ ಕಾಲ ಪ್ರಾರಂಭವಾಗಿದೆ, ಸಬೂಬುಗಳ ಕಾಲ ಮುಗಿದಿದೆ: ಬೊಮ್ಮಾಯಿ
ಬೆಂಗಳೂರು: ಜನ ಕಲ್ಯಾಣಕ್ಕಾಗಿ ವಿವಿಧ ನಿಗಮಗಳಿಗೆ ನೀಡಲಾಗಿರುವ ಅನುದಾನ ನೇರವಾಗಿ ಫಲಾನುಭವಿಗಳಿಗೆ ಮುಟ್ಟಬೇಕೆನ್ನುವ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿದ್ದು, ಇದನ್ನು ನಾನೇ ಸ್ವತ: ಮೇಲ್ವಿಚಾರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕೊಟ್ಟರು. ಬದಲಾವಣೆಯ ಕಾಲ ಪ್ರಾರಂಭವಾಗಿದ್ದು, ಸಬೂಬುಗಳ ಕಾಲ ಮುಗಿದಿದೆ. ಶಿಕ್ಷಣ, …
Read More »
Laxmi News 24×7