ಬೆಳಗಾವಿ : ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಹೇಳಿದ್ದಾರೆ.ಇನ್ನು ಬಿಜೆಪಿಯ ಮಹಾನ್ ನಾಯಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ …
Read More »Daily Archives: ಮೇ 6, 2022
ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ
ಬೆಂಗಳೂರು: ಚಿತ್ರಕಲಾ ಪರಿಷತ್ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್ ಇಂದಿನಿಂದ ಶುರುವಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ಕೊಟ್ಟರು. ಬಳಿಕ ಮಾತಾನಾಡಿದ ಅವರು, ಕಲಾಕೃತಿಗಳು ಕಣ್ಣಿಗೆ ಹಾಗೂ ಮನಸ್ಸಿಗೆ ನೆಮ್ಮದಿ, ಸಂತೋಷ ಕೊಡುತ್ತವೆ. ನಮ್ಮ ದೇಶದ ಪ್ರಸಿದ್ಧ ಕಲಾವಿದರು, ಹೆಸರು ಮಾಡಿರುವ ಕಲಾವಿದರು ಬಂದಿದ್ದು, ಅವರ ಕಲಾಕೃತಿಗಳ ಪ್ರದರ್ಶನ ನಡೆಯುತ್ತಿದೆ. ಈ ಕಲಾಕೃತಿಗಳನ್ನು ನೋಡಲು ಸಂತೋಷವಾಗ್ತಿದೆ ಎಂದರು. ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ …
Read More »ಮೇ 15 ರಿಂದ ಬದಲಾಗಲಿದೆ ಈ 6 ರಾಶಿಯವರ ಭವಿಷ್ಯ, ಸೂರ್ಯ ಬೆಳಗಲಿದ್ದಾನೆ ಅದೃಷ್ಟ
ಬೆಂಗಳೂರು : Surya Gochar in May 2022: ಸೂರ್ಯನ ರಾಶಿಚಕ್ರ ಬದಲಾವಣೆಯು ಎಲ್ಲಾ ಜನರ ಜೀವನದ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತದೆ. ಏಕೆಂದರೆ ಸೂರ್ಯನು ವ್ಯಕ್ತಿಯ ವೃತ್ತಿ, ಆರೋಗ್ಯ, ಯಶಸ್ಸು ಇತ್ಯಾದಿಗಳ ಮೇಲೆ ಪರಿಣಾಮ ಬೀರುತ್ತಾನೆ. ಸೂರ್ಯನು ಪ್ರತಿ ತಿಂಗಳು ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಮೇ 15 ರಂದು, ಸೂರ್ಯನು ಮೇಷ ರಾಶಿಯನ್ನು ತೊರೆದು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ನಂತರ ಜೂನ್ 15 ರವರೆಗೆ ವೃಷಭ ರಾಶಿಯಲ್ಲಿಯೇ ಇರುತ್ತಾನೆ. ಈ ಸಮಯದಲ್ಲಿ …
Read More »ಗಮನಿಸಿ: ಕರ್ನಾಟಕದಲ್ಲಿ ಈ ವೀಕೆಂಡ್‌ನಲ್ಲಿ ಎಣ್ಣೆ ಸಿಗಲ್ಲ!
ಬೆಂಗಳೂರು, ಮೇ 5: ಸಿಲಿಕಾನ್ ಸಿಟಿಯಲ್ಲಿ ವೀಕೆಂಡ್ ಪಾರ್ಟಿ ಮಾಡಬೇಕು. ಸ್ಯಾಲರಿ ಬಂದಿರುವ ಖುಷಿಯಲ್ಲಿ ಫ್ರೆಂಡ್ಸ್ ಜೊತೆ ಗುಂಡು ಹಾಕಬೇಕು ಎಂದುಕೊಂಡಿರುವ ಮದ್ಯಪ್ರಿಯರಿಗೆಲ್ಲ ಒಂದು ಶಾಕಿಂಗ್ ನ್ಯೂಸ್. ಶುಕ್ರವಾರದಿಂದಲೇ ರಾಜ್ಯದಲ್ಲಿ ಮುಂದಿನ ಮೇ 19ವರೆಗೂ ಎಣ್ಣೆ ಸಿಗುವುದಿಲ್ಲ. ರಾಜ್ಯದಲ್ಲಿ ಮೇ 6 ರಿಂದ 19ರವರೆಗೂ ಮದ್ಯ ಮಾರಾಟಗಾರರು ಮುಷ್ಕರ ನಡೆಸುವುದಕ್ಕೆ ನಿರ್ಧರಿಸಿದ್ದಾರೆ. ಇದರಿಂದ ಮುಂದಿನ 15 ದಿನಗಳವೆರಗೂ ಮದ್ಯಪ್ರಿಯರಿಗೆ ಎಣ್ಣೆ ಸಿಗುವುದೇ ಅನುಮಾನವಾಗಿದೆ. ಉಡುಪಿಯಲ್ಲಿ ಮಾತನಾಡಿದ ರಾಜ್ಯ ಮದ್ಯ …
Read More »ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ, ಇನ್ಸ್ಪೆಕ್ಟರ್ ಸಿಐಡಿ ಬಲೆಗೆ
ಬೆಂಗಳೂರು/ ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ 545 ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಡಿವೈಎಸ್ಪಿ, ಇನ್ಸ್ಪೆಕ್ಟರ್ನನ್ನು ಸಿಐಡಿ ಕೊನೆಗೂ ಬಂಧಿಸಿದೆ. ಈ ಇಬ್ಬರಿಗೂ ಕೋಳ ತೊಡಿಸುವ ಮೂಲಕ ಬಂಧಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಬೆರಳಚ್ಚು ವಿಭಾಗದ ಇನ್ಸ್ಪೆಕ್ಟರ್ ಆನಂದ ಮೇತ್ರೆನನ್ನು ಕಲಬುರಗಿಯಲ್ಲಿ ವಿಚಾರಣೆಗಾಗಿ ಕರೆದು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ರಸ್ತೆ ಕುಂಬಳಗೋಡು ಠಾಣೆ ಕಾನ್ಸ್ಟೇಬಲ್ ಸೋಮನಾಥ್ ಮತ್ತು …
Read More »ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ, ಆಗ ಪ್ರಯತ್ನ ಈಗ ಅನಿವಾರ್ಯತೆ
ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ …’ ಶರಣ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. 2019ರ ಅಕ್ಟೋಬರ್ನಲ್ಲಿ ಅವರ ‘ಅಧ್ಯಕ್ಷ ಇನ್ ಅಮೆರಿಕಾ’ ಬಿಡುಗಡೆಯಾಗಿತ್ತು. ಇಂದು ‘ಅವತಾರ ಪುರುಷ 1′ ಬಿಡುಗಡೆಯಾಗುತ್ತಿದೆ. ಈ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ಜನರ ಅಭಿರುಚಿ, ಮನಸ್ಥಿತಿ, ಚಿತ್ರಗಳ ಶೈಲಿ ಎಲ್ಲವೂ ಬೇರೆಯಾಗಿದೆ. ಹೀಗಿರುವಾಗ, ‘ಅವತಾರ ಪುರುಷ’ ಬಗ್ಗೆ ಏನನ್ನುತ್ತೀರಿ? ಎಂದರೆ, ಸರಿಯಾದ ಸಮಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ ಎಂಬ ಉತ್ತರ ಅವರಿಂದ ಬರುತ್ತದೆ. …
Read More »532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ
ಬೆಂಗಳೂರು, ಮೇ 6: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು …
Read More »ವಿಟ್ಲದಲ್ಲಿ ಅಪ್ರಾಪ್ತೆ ಆತ್ಮಹತ್ಯೆ
ಮಂಗಳೂರು: ರಾಜ್ಯ ಕರಾವಳಿ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಲವ್ ಜಿಹಾದ್ ನಡೆಯುತ್ತಿದೆ ಎನ್ನುವ ಹಿಂದೂಪರ ಸಂಘಟನೆಗಳ ಆರೋಪದ ನಡುವೆಯೇ ಲವ್ ಜಿಹಾದ್‍ಗೆ ಪುಷ್ಟಿ ನೀಡುವ ಹಲವು ಘಟನೆಗಳು ವರದಿಯಾಗುತ್ತಿದೆ. ಇಂಥಹ ಘಟನೆಗಳ ಸಾಲಿಗೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕಣಿಯೂರು ಎಂಬಲ್ಲಿ ನಡೆದ ಘಟನೆಯೂ ಸೇರಿಕೊಂಡಿದೆ. ಕಣಿಯೂರು ಮಸೀದಿಯ ಪಕ್ಕದಲ್ಲೇ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ದಂಪತಿಯ 14 ವರ್ಷದ ಮಗಳು ನೇಣು ಬಿಗಿದ …
Read More »ರಾಜಕಾರಣಿಗಳ ಜತೆ ಸೇರಿ ಮಠಾಧಿಪತಿಗಳು ಹಾಳಾಗ್ತಿದ್ದೇವೆ: ಚಂದ್ರಶೇಖರ ಸ್ವಾಮೀಜಿ
ತುಮಕೂರು: ರಾಜಕಾರಣಿಗಳ ಜತೆ ಸೇರಿ ಮಠಾಧಿಪತಿಗಳು ಹಾಳಾಗುತ್ತಿದ್ದೇವೆ. ಮಠಾಧೀಶರು ಎಚ್ಚರದಿಂದ ದೇಶದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಧರ್ಮದಿಂದ ದೇಶ ಉಳಿಸುವ ಕೆಲಸ ಮಾಡಬೇಕು. ನಮಗೆ ರಾಜಕೀಯ ಬೇಡ ದೇಶ ಬೇಕಿದೆ ಎಂದು ಬೆಟ್ಟದಹಳ್ಳಿ ಗವಿಮಠದ ಅಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ವಿಷಾದಿಸಿದರು. ಗುಬ್ಬಿ ತಾಲೂಕಿನ ಬೆಟ್ಟದಹಳ್ಳಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಮಲ್ಲಿಕಾರ್ಜುನ ಶಿವಯೋಗಿಗಳ ಸಂಸ್ಮರಣೆ, ಗುರುಲಿಂಗ ಜಂಗಮರ ಪೂಜೆ, ಬಸವ ಜಯಂತಿ, ರಾಜ್ಯಮಟ್ಟದ ಭಜನಾ ಮೇಳ ಮತ್ತು ಸಾಮೂಹಿಕ ಲಿಂಗದೀಕ್ಷಾ ಕಾರ್ಯಕ್ರಮದಲ್ಲಿ ಅವರು …
Read More »ಖಾವಿ ಬಟ್ಟೆತೊಟ್ಟು ಗುತ್ತಿಗೆದಾರನಿಂದ ಲಕ್ಷ-ಲಕ್ಷ ಕಿತ್ತ ಸ್ವಾಮೀಜಿಗಳು: ಪ್ರಕರಣ ದಾಖಲು
ನಾವು ಕಲ್ಲೂರು ಮಠದ ಸ್ವಾಮೀಜಿ, ಮಠಕ್ಕೆ ರಾಜಕಾರಣಿಗಳಿಂದ 350 ಕೋಟಿ ಹಣ ಬಂದಿದೆ ಎಂದು ಗುತ್ತಿಗೆದಾರನನ್ನ ನಂಬಿಸಿ 3 ಲಕ್ಷಕ್ಕೆ ಟೋಪಿ ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಮೂಲದ ವಿಜಯ್‌ಕುಮಾರ್ ಅವರೇ ವಂಚನೆಗೆ ಒಳಗಾದವರು. ಮಠಕ್ಕೆ ರಾಜಕಾರಣಿಗಳಿಂದ ಅನುದಾನ ಬಂದಿದ್ದು, ಇದನ್ನು ಸಾಲದ ರೂಪದಲ್ಲಿ ಜನರಿಗೆ ನೀಡುತ್ತಿದ್ದೇವೆ ಎಂದು ನಂಬಿಸಿದ್ದಾರೆ. ಕಾವಿ ಬಟ್ಟೆ ಧರಿಸಿದ ಖದೀಮರು ಶಿವಮೊಗ್ಗದಲ್ಲಿ ವಿಜಯ್‌ಕುಮಾರ್ …
Read More »
Laxmi News 24×7