Breaking News

Daily Archives: ಮೇ 7, 2022

ಪಿಯುಸಿ ಇಂಗ್ಲಿಷ್ ಪರೀಕ್ಷೆ: 2,530 ವಿದ್ಯಾರ್ಥಿಗಳು ಗೈರು

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ವಾರ್ಷಿಕ ಪರೀಕ್ಷೆಗೆ ಒಟ್ಟು 2,530 ಮಂದಿ ಗೈರುಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 21,823 ವಿದ್ಯಾರ್ಥಿಗಳ ಪೈಕಿ 20,652 ಮಂದಿ ಹಾಜರಾದರು. 1,171 ವಿದ್ಯಾರ್ಥಿಗಳು ಗೈರುಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 26,013 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅವರಲ್ಲಿ 24,654 ಮಂದಿ ಹಾಜರಾದರೆ, 1,359 ಮಂದಿ ದೂರ ಉಳಿದರು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

Read More »

ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕು: ರಮೇಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆ): ಸಚಿವ ಸಂಪುಟ ಪುನರ್‌ರಚನೆ ಮಾತುಗಳು ಕೇಳಿಬರುತ್ತಿರುವ ನಡುವೆ, ಆಕಾಂಕ್ಷಿಗಳಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ ಇಲ್ಲಿ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.   ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದು ಪ್ರತಿಕ್ರಿಯಿಸಿದರು. ‘ಅಥಣಿ ಶಾಸಕ ಮಹೇಶ ಕುಮಠಳ್ಳಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮಂತ್ರಿ ಸ್ಥಾನ ಬೇಡ; ಕ್ಷೇತ್ರದಲ್ಲಿ ನೀರಾವರಿ …

Read More »

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ!

ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ (Arrest) ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ …

Read More »

ಅನಾರೋಗ್ಯದಿಂದ ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜಾ ನಿಧನ

ಬೆಂಗಳೂರು: ಅನಾರೋಗ್ಯದಿಂದ ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜಾ ನಿಧನರಾಗಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಶನಿವಾರ ಮೇ 7ರಂದು ವಿಧಿವಶರಾಗಿದ್ದಾರೆ.   ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸು ಗಳಿಸಿದ ಕೆಜಿಎಫ್ ಭಾಗ ಒಂದು ಮತ್ತು ಎರಡು ಚಿತ್ರ ಸೇರಿದಂತೆ ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸ್ಯಾಂಡಲ್ ವುಡ್ ನ ಪ್ರಮುಖ ನಾಯಕ ನಟರ ಜೊತೆ ಹಾಸ್ಯನಟ …

Read More »

ತನಿಖಾಧಿಕಾರಿಗಳನ್ನೇ ಪ್ರಶ್ನಿಸಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಸಚಿವ ಪ್ರಭು ಚೌಹಾಣ್‌ ಹಾಗೂ ಪರಿಷತ್‌ ಸದಸ್ಯ ಸಂಕನೂರು ಪತ್ರಗಳನ್ನು ತನಿಖಾಧಿಕಾರಿಗಳು ಹೇಗೆ ಆಧಾರ ರಹಿತವಾಗಿದೆ ಎಂದು ತೀರ್ಮಾನಿಸಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಾದರೆ ಸಂಪುಟ ಸಚಿವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರಕ್ಕೆ ಯಾವುದೇ ಬೆಲೆ ಇಲ್ಲವೇ? ಈ ದಾಖಲೆಗಳು ಪ್ರಕರಣಕ್ಕೆ ಸಂಬಂಧಿಸುವುದಿಲ್ಲವೇ? ಬಿಜೆಪಿ ಶಾಸಕರು ಹಾಗೂ ಸಚಿವರಿಗೆ ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು …

Read More »

ಬಿಜೆಪಿಗೆ ಯತ್ನಾಳ್​ ಶಾಕ್: ಸಿಎಂ ಪದವಿಗೆ 2500 ಕೋಟಿ , ಪೇಚು ತಂದ ಗಂಭೀರ ಆರೋಪ​

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲೇ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪಕ್ಷದ ವಿರುದ್ಧ ಮಾಡಿರುವ ಗಂಭೀರ ಆರೋಪ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕತ್ವಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಈ ಬೆಳವಣಿಗೆ ಪದ ರಾಜ್ಯ ಟಕದಲ್ಲಿ ಹಿಡಿತವಿಲ್ಲದ ನಾಯಕತ್ವವನ್ನು ಸಾಬೀತುಪಡಿಸುವ ಜತೆಯಲ್ಲೇ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಉಸ್ತುವಾರಿಯಿಂದ ಸಂಟನೆಯಲ್ಲಿ ಶಿಸ್ತು ದೂರಾಗಿ ಪದ ಕಾರ್ಯಕರ್ತರಿಗೂ ಇರುಸುಮುರಿಸು ಉಂಟು ಮಾಡಿದೆ.   ಪ್ರತಿ ನಿತ್ಯ ಒಂದಿಲ್ಲೊಂದು ಹೇಳಿಕೆಗಳಿಂದಲೇ ಸರ್ಕಾರಕ್ಕೆ ಮುಜುಗರ …

Read More »

ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು!

ತೀರ್ಥಹಳ್ಳಿ: ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಗಂಭೀರ ಆರೋಪ ಮಾಡಿದ್ದಾರೆ.   ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ …

Read More »

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.   ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆ.ಜಿ. ಜೋಳ ಮತ್ತು 20 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 2 …

Read More »

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಇಬ್ಬರು ಮಹಿಳಾ ಅಧಿಕಾರಿಗಳು

ಬೆಂಗಳೂರು, ಮೇ 6: ವಾಣಿಜ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಆಯುಕ್ತೆ ಪ್ರಿಯಾಂಕ ಜೆ.ಸಿ. ಹಾಗೂ ಮಂಡ್ಯ ಜಿಲ್ಲೆಯ ಪರಿಸರ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಲತಾ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.   ಪ್ರಿಯಾಂಕ ಅವರು ಮಂಜುನಾಥ್ ಎಂಬ ಎಲೆಕ್ಟ್ರಿಕಲ್ ಹಾಗೂ ಹಾರ್ಡ್‍ವೇರ್ ಉದ್ಯಮಿಗೆ ಜಿಎಸ್‍ಟಿ ಸರ್ಟಿಫಿಕೇಟ್ ನೀಡಲು 10 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟು, 3 ಸಾವಿರ ರೂ.ಗಳನ್ನು ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್ ತೆರೆಯಲು …

Read More »

ಇಬ್ಬರು ಪುಟ್ಟ ಮಕ್ಕಳು ದುರಂತ ಅಂತ್ಯಕಂಡಿದ್ದು. ಈ ದೃಶ್ಯ ನೋಡಿದ್ರೆ ಕರುಳು ಚುರ್​ ಅನ್ನುತ್ತೆ

ಕೊಪ್ಪಳ: ಸಾವು ಯಾವಾಗ? ಹೇಗೆ ಬರುತ್ತೆ? ಎಂದು ಊಹಿಸಲೂ ಸಾಧ್ಯವಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಇಂದು(ಶುಕ್ರವಾರ) ತಾಯಿ ಮತ್ತು ಇಬ್ಬರು ಪುಟ್ಟ ಮಕ್ಕಳು ದುರಂತ ಅಂತ್ಯಕಂಡಿದ್ದು. ಈ ದೃಶ್ಯ ನೋಡಿದ್ರೆ ಕರುಳು ಚುರ್​ ಅನ್ನುತ್ತೆ. ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ? ಎಂದು ಮನದಲ್ಲೇ ಶಪಿಸುತ್ತೀರಿ. ಹೃದಯವಿದ್ರಾವಕ ಘಟನೆ ಕಂಡ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದ ಶೈಲಮ್ಮ(28) ಮತ್ತು ಇವರ ಮಕ್ಕಳಾದ ಸಾನ್ವಿ(4), ಪವನ್ (2) ಮೃತ …

Read More »