Breaking News

Daily Archives: ಮೇ 9, 2022

ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹ: ಆರೋಪಿಗಳನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. , ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.  ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ …

Read More »

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …

Read More »

500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ …

Read More »

ಮೊದಲು ಕರ್ನಾಟಕದಲ್ಲಿ ಮದರಸಾವನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್

ಮೈಸೂರು: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್ ಮಾಡಿ  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ಮುಖಂಡರ ಹತ್ಯೆಯ ಪ್ಲಾನ್ ವಿಚಾರದ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಅಬ್ಬರ ಅಟ್ಟಹಾಸ ಹೆಚ್ಚಾಗತ್ತಿದೆ. ಕೊಲೆ, ಗಲಾಟೆ ಮಾಡುತ್ತಿರುವವರು ಹಿಂದೂಗಳಲ್ಲ.  ಮೈಸೂರಿನ ‘ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಅಂತ ಘೋಷಣೆ ಕೂಗಿದ್ದು, ಹುಬ್ಬಳ್ಳಿಯಲ್ಲಿ ದೇವಾಲಯದ ಮೇಲೆ ಕಲ್ಲೂತೂರಾಟ ನಡೆಸಿ ಹಲ್ಲೆ ನಡೆಸಿದ್ದೂ ಹಿಂದೂಗಳಲ್ಲ. ಹಿಂದೂಗಳಿಂದ …

Read More »

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. …

Read More »

‘ಸುಪ್ರೀಂ ಕೋರ್ಟ್‌ ಆದೇಶ ಎಲ್ಲರಿಗೂ ಅನ್ವಯ’

ಬೆಂಗಳೂರು: ‘ಧ್ವನಿವರ್ಧಕ ಬಳಕೆ ನಿರ್ಬಂಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶ ದೇವಸ್ಥಾನ, ಮಸೀದಿ ಎಲ್ಲವಕ್ಕೂ ಅನ್ವಯವಾಗುತ್ತದೆ. ಈ ವಿಚಾರದಲ್ಲಿ ಸಮಾಜಘಾತುಕ ಶಕ್ತಿಗಳು ರಾಜಕಾರಣ ಮಾಡಲು ಅವಕಾಶ ನೀಡುವುದಿಲ್ಲ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಮಸೀದಿಗಳಲ್ಲಿ ಆಜಾನ್‌ ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳ ಮೂಲಕ ಭಜನೆ ಮೊಳಗಿಸಬೇಕೆಂಬ ಹಿಂದುತ್ವ ಪರ ಸಂಘಟನೆಗಳ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾರೇ ತಪ್ಪು ಮಾಡಿದರೂ ನಾವು ಕ್ರಮ ಜರುಗಿಸುತ್ತೇವೆ. ಅವರು …

Read More »

‘ಗ್ರಾಮ ಒನ್‌’ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿ ಮೇಲೆ ನಿಗಾ ಇರಿಸಬೇಕು.: ಬೊಮ್ಮಾಯಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಹಾನಿಯಾಗುತ್ತದೆ. ಯಾವುದೇ ಸಂದರ್ಭದಲ್ಲೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಭಾನುವಾರ ಎಚ್ಚರಿಕೆ ನೀಡಿದರು.   ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ನಾಲ್ಕು ಗಂಟೆಗಳ ಕಾಲ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಅವರು, ಆಡಳಿತದ ವಿವಿಧ ಹಂತದಲ್ಲಿರುವ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ತಾಕೀತು ಮಾಡಿದರು. ಚುನಾವಣಾ ವರ್ಷವಾಗಿರುವ ಕಾರಣದಿಂದಬಜೆಟ್‌ ಘೋಷಣೆಗಳನ್ನು ಕಾಲಮಿತಿ ಯೊಳಗೆ …

Read More »

‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದ ಆರ್ಷ ವಿದ್ಯಾಶ್ರಮದ ಚಿತ್‌ಪ್ರಕಾಶಾನಂದ ಸ್ವಾಮೀಜಿ

ಬೆಳಗಾವಿ: ‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದು ಆರ್ಷ ವಿದ್ಯಾಶ್ರಮದ ಚಿತ್‌ಪ್ರಕಾಶಾನಂದ ಸ್ವಾಮೀಜಿ ಹೇಳಿದರು. ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ಸಹಯೋಗದಲ್ಲಿ ಕವಿ ಜಿನದತ್ತ ದೇಸಾಯಿ-90ರ ಸಂಭ್ರಮದ ಅಂಗವಾಗಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾವ್ಯಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ‘ಸಂಗೀತದಲ್ಲಿ ದೊಡ್ಡ ಶಕ್ತಿ ಇದ್ದು, ತನ್ನ ಮೋಡಿಯಿಂದ ಎಲ್ಲರನ್ನೂ ತನ್ನತ್ತ ಸೆಳೆಯುತ್ತದೆ’ ಎಂದರು. ಕವಿ …

Read More »

ನನಗಿನ್ನೂ ಸಿಎಂ ಅವಕಾಶವಿದೆ: ಸಚಿವ ಉಮೇಶ್‌ ಕತ್ತಿ

ಬ್ರಹ್ಮಾವರ: ನನಗಿನ್ನೂ 61 ವರ್ಷ. 75 ವರ್ಷದ ತನಕ ಯುವಕನೇ. ದೇವರ ದಯೆ, ರಾಜ್ಯದ ಜನತೆಯ ಆಶೀರ್ವಾದವಿದ್ದರೆ ನಾನು ಸಿಎಂ ಆಗುತ್ತೇನೆ ಎಂದು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್‌ ವಿ. ಕತ್ತಿ ಹೇಳಿದರು.   ಅವರು ನೀಲಾವರದಲ್ಲಿ ಕೀರ್ತಿಶೇಷ ಪೇಜಾವರ ಶ್ರೀಗಳ ಸ್ಮೃತಿ ವನಕ್ಕೆ ಭೂಮಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಸಿಎಂ ಆಗುವ ಅವಸರದಲ್ಲಿಲ್ಲ. ಪದವಿ ಬೇಕು ಎಂದು ಕೇಳುವುದಿಲ್ಲ. ಸಿಎಂ …

Read More »

ಟೊಮೆಟೋ ದರ ಮತ್ತೆ ಏರಿಕೆ;

ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ.   ಕಳೆದ ಡಿಸೆಂಬರ್‌ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ …

Read More »