ಧಾರವಾಡ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿಯ ವಿದ್ಯಾಗಿರಿಯಲ್ಲಿ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಹುಬ್ಬಳ್ಳಿ ಮೂಲದ ವಿದ್ಯಾಧರ ಸಾಕರೆ ಎಂಬುವವರ ಕುಟುಂಬ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಹತ್ತಿದೆ. ತಕ್ಷಣ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆಲ್ಲ ಆವರಿಸಿಕೊಂಡಿದೆ. …
Read More »Daily Archives: ಮೇ 17, 2022
ಸಂಭ್ರಮದ ಫಕೀರೇಶ್ವರ ರಥೋತ್ಸವ
ಗದಗ): ಲಕ್ಷಾಂತರ ಜನರ ಹರ್ಷೋದ್ಘಾರ, ಭಕ್ತರ ಜಯಘೋಷಗಳ ಮಧ್ಯ ನಾಡಿನ ಹಿಂದು-ಮುಸ್ಲಿಂ ಭಾವೈಕತೆಯ ಕೇಂದ್ರ ಶಿರಹಟ್ಟಿ ಆರಾಧ್ಯ ದೈವ ಫಕೀರೇಶ್ವರ ಮಹಾರಥೋತ್ಸವ ಸೋಮವಾರ ಅಪಾರ ಭಕ್ತ ಸಮೂಹದ ನಡುವೆ ಸಂಭ್ರಮ, ಸಡಗರದೊಂದಿಗೆ ನಡೆಯಿತು. `ಫಕೀರೇಶ್ವರ ಮಹರಾಜ ಕಿ ಜೈ, ಧಿನ್ ಫಕೀರೇಶ” ಎಂಬ ಜಯಘೋಷ ಮೊಳಗಿತು. ಬೆಳಗ್ಗೆ ಕರ್ತೃ ಗದ್ದುಗೆಗೆ ಕ್ಷೀರಾಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ಆರಂಭಗೊಂಡಿತು. ಸೋಮವಾರ ಬೆಳಗ್ಗೆ ಪುರ ಪ್ರವೇಶ ಮಾಡಿದ ಫಕೀರ ಸಿದ್ದರಾಮ ಶ್ರೀಗಳು, ಶ್ರೀ ಮಠಕ್ಕೆ …
Read More »ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್‌ಗೆ ಆಹ್ವಾನ
ಬಾಲಿವುಡ್‌ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್‌ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ …
Read More »ನನ್ನ ಗಾಡಿಗೆ ನಾನೇ ಬೆಂಕಿ ಹಚ್ಚುತ್ತೇನೆ- ಅಧಿಕಾರಿಗಳ ಎದುರೇ ಗಾಡಿಗೆ ಬೆಂಕಿ ಹಚ್ಚಿದ ವ್ಯಾಪಾರಿ
ಚಿಕ್ಕಮಗಳೂರು: ನನ್ನ ಗಾಡಿ ಮುಟ್ಟಬೇಡಿ, ನಾನೇ ಬೆಂಕಿ ಹಚ್ಚುತ್ತೇನೆ ಎಂದು ನಗರಸಭೆ ಅಧಿಕಾರಿಗಳ ಎದುರು ವ್ಯಾಪಾರಿ ಗಾಡಿಗೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯ ಬೀದಿಯಲ್ಲಿ ಪ್ರತಿನಿತ್ಯ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು 200-300 ರೂ. ದುಡಿದು ಕಷ್ಟಪಟ್ಟು ಜೀವನ ನಡೆಸುತ್ತಿದ್ದರು. ಆದರೆ ನಗರಸಭೆ ಅಧಿಕಾರಿಗಳು ರಸ್ತೆ ಬದಿ ವ್ಯಾಪಾರ ನಡೆಸಬಾರದು ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದರು. ಈ ರಸ್ತೆಯಲ್ಲೇ ವ್ಯಾಪಾರ ನಡೆಸುತ್ತಿದ್ದವರಲ್ಲಿ ಬಡ ವ್ಯಾಪಾರಿಯೊಬ್ಬ ಹಣ್ಣು …
Read More »ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್
ಬಾಗಲಕೋಟೆ: ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್ ಆಗಿದೆ. ಈ ಹಿಂದೆ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಆದರೆ ಈಗ ಮಹಾಂತೇಶ್ ಚೊಳಚಗುಡ್ಡ ಅವರ ಮೇಲೆ ಸಂಗೀತಾ ಅವರು ಚಪ್ಪಲಿಯಲ್ಲಿ ಹೊಡೆದ ವೀಡಿಯೋ ವೈರಲ್ ಆಗಿದೆ. ನಿಜವಾಗಿ ನಡೆದಿದ್ದೇನು? ಮಹಾಂತೇಶ್ ಚೊಳಚಗುಡ್ಡ …
Read More »ತಾಯಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನು, ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್
ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ. ಬಿಪಿಎಲ್ ತಾಯಿಗೆ ಮಂಜೂರಾದ ಜಮೀನು ಪಕ್ಕದಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಎಸ್.ಎನ್.ಸಿಟಿ ಮಾಡಿಕೊಂಡಿದ್ದಾರೆ. ಆದರೆ ತಾಯಿ ಮುನಿಯಮ್ಮ ಮಾತ್ರ ಈಗಲೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಸರ್ವೇ ನಂ.256 ರಲ್ಲಿ 3 ಎಕರೆ 10 ಗುಂಟೆ ಸರ್ಕಾರಿ …
Read More »ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು
ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಏಕಾಏಕಿ ಸೋಮವಾರ ಸಂಜೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಲವೆಡೆ ಸುರಿದ ಧಾರಾಕಾರ ಮಳೆಗೆ (Rain) ರೈತರು (Farmers) ತತ್ತರಿಸುವಂತೆ ಮಾಡಿದೆ. ಸಿಡಿಲು (Thunderbolt), ಗುಡುಗು ಸಹಿತ ಮಳೆ ಆರ್ಭಟಕ್ಕೆ ರಾಸು ಜಾನುವಾರುಗಳು ನೆಲಕಪ್ಪಳಿಸಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಡವಿಮಲ್ಲಾಪುರ ಗ್ರಾಮದಲ್ಲಿ …
Read More »ಬಿಜೆಪಿ ಸೇರಲು ಹೊರಟಿದ್ದ ಹೊರಟ್ಟಿಗೆ ಎದುರಾಯ್ತು ವಿಘ್ನ
ಬೆಂಗಳೂರು,ಮೇ17-ಬಿಜೆಪಿ ಸೇರುವ ಕಾರಣಕ್ಕಾಗಿಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರಿಗೆ ತಾಂತ್ರಿಕ ವಿಘ್ನ ಎದುರಾಗಿದೆ. ಏಕೆಂದರೆ ವಿಧಾನಪರಿಷತ್ ನಿಯಮಾವಳಿ ಪ್ರಕಾರ ಸಭಾಪತಿಯವರು ತಮ್ಮ ರಾಜೀನಾಮೆ ಪತ್ರವನ್ನು ಹಾಲಿ ವಿಧಾನಪರಿಷತ್‍ನ ಉಪಸಭಾಪತಿಯವರಿಗೆ ಸಲ್ಲಿಸಬೇಕು. ಆದರೆ ಪ್ರಸ್ತುತ ವಿಧಾನಪರಿಷತ್‍ನಲ್ಲಿ ಹಂಗಾಮಿ ಸಭಾಪತಿ ಯಾರೊಬ್ಬರೂ ಇಲ್ಲ. ನಿಯಮಗಳ ಪ್ರಕಾರ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿ ಅವರು ಸ್ವೀಕರಿಸಲು ಅವಕಾಶವಿಲ್ಲ. ಹೀಗಾಗಿ ಅವರು ನೀಡಿರುವ ರಾಜೀನಾಮೆ ಪತ್ರವನ್ನು ಯಾರು ಅಂಗೀಕರಿಸುತ್ತಾರೆ ಎಂಬುದೇ ಯಕ್ಷ …
Read More »ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?
ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್ ತೀರ್ಮಾನ ಸಿದ್ದರಾಮಯ್ಯಗೆ ತೊಡಕಾಗಿದೆ. ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11 ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ …
Read More »ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ; ಹಾಲಿ ಸಂಸದರಿಗೆ ಇಲ್ಲ ಟಿಕೆಟ್; 8 ಕ್ಷೇತ್ರಗಳಲ್ಲಿ ಭಾರಿ ಬದಲಾವಣೆಗೆ ಪ್ಲಾನ್
ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ. 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಲಾ …
Read More »
Laxmi News 24×7