ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ …
Read More »Daily Archives: ಮೇ 17, 2022
ಮೇ. 20 ರಂದು ಗ್ರಾಮ ಪಂಚಾಯಿತಿ ಚುನಾವಣೆ : ನೌಕರರಿಗೆ ವೇತನ ಸಹಿತ ರಜೆ ಘೋಷಿಸಿ ಚುನಾವಣಾ ಆಯೋಗ ಆದೇಶ
ಬೆಂಗಳೂರು : 2022 ರ ಏಪ್ರಿಲ್ ನಿಂದ 2022 ರ ಜುಲೈವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಇರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೇ. 20 ರಂದು ಈ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, …
Read More »ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …
Read More »ವಿವಿಧ ಗ್ರಾಮ ಪಂಚಾಯಿತಿಗಳ 314 ಸ್ಥಾನಗಳಿಗೆ ಚುನಾವಣೆ: ಮೇ 20 ರಂದು ಮತದಾನ
ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ …
Read More »ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಮತ್ತು ಜೆಡಿಎಸ್ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್ ಸದಸ್ಯ ಸ್ಥಾನಕ್ಕೆ ಮತ್ತು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಮಂಗಳವಾರ ಬಿಜೆಪಿಯನ್ನು ಸೇರ್ಪಡೆ ಆಗುತ್ತೇನೆ’ ಎಂದು ತಿಳಿಸಿದರು. ‘ನನ್ನ ಜತೆಗಿರುವ ಕೆಲವು ಕಾರ್ಯಕರ್ತರು ಪಕ್ಷ ಬದಲಿಸುವಂತೆ ಒತ್ತಡ ಹೇರಿದ್ದರು. ಅನಿವಾರ್ಯವಾಗಿ ಬಿಜೆಪಿ ಸೇರುತ್ತಿದ್ದೇನೆ. ಅಮಿತ್ ಶಾ …
Read More »ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಡಿವೈಎಸ್ಪಿ ಆಪ್ತ ‘ಆರ್‌ಪಿಐ’ ಸೇರಿ ಇಬ್ಬರ ಬಂಧನ
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಆಪ್ತ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್‌ಪಿಐ) ಜಿ. ಬಸವರಾಜ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ. ‘ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಬಸವರಾಜ್, ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ವೃತ್ತಿ ಆರಂಭಿಸಿದ್ದರು. ಇನ್ನೊಬ್ಬ ಬಂಧಿತ ಸಿ.ಎಂ. ನಾರಾಯಣ, ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿ. ಇಬ್ಬರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ …
Read More »ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದ M.L.A
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ಶಾಸಕರೊಬ್ಬರು ತಮ್ಮ ಕ್ಷೇತ್ರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಬಿಹಾರದ ಭಾಗಲ್ಪುರ್ ಜಿಲ್ಲೆಯ ಫತೇಪುರ್ ಗ್ರಾಮದಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ, ಜೆಡಿಯು ಶಾಸಕ ಗೋಪಾಲ್ ಮಂಡಲ್ ಅವರು ಬಾಲಿವುಡ್‍ನ ಫೇಮಸ್ ದಿಲ್ಬರ್, ದಿಲ್ಬರ್ ಸಾಂಗ್‍ಗೆ ಧರಿಸಿದ್ದ ಕುರ್ತಾವನ್ನು ಮೇಲಕ್ಕೆ ಎತ್ತಿ ಡ್ಯಾನ್ಸ್ …
Read More »ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು
ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನಿತಾ ಲೋಕೆಶ್ ಲಮಾಣಿ(10) ಮೃತ ದುರ್ದೈವಿಗಳಾಗಿದ್ದಾರೆ. ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ
Read More »ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ
ಶಿವಮೊಗ್ಗ: 2023ರ ಚುನಾವಣೆ ಶಿವಮೊಗ್ಗ ಜಿಲ್ಲೆ ಪಾಲಿಗಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ನಿರ್ಗಮನದಿಂದ ತೆರವಾಗುವ ಕ್ಷೇತ್ರಗಳಿಗೆ ಮುಂದ್ಯಾರು? ಬಣ ರಾಜಕಾರಣದಿಂದ ಕಂಗೆಟ್ಟಿರುವ ಕಾಂಗ್ರೆಸ್ ವರಿಷ್ಠರು ಇದಕ್ಕೆ ಮದ್ದು ಅರೆಯುವರೆ? ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದೇ? ಎಂಬುದೆಲ್ಲ ಚುನಾವಣೆಗೆ ವರ್ಷವಿರುವಾಗಲೇ ಚರ್ಚೆಗೆ ಗ್ರಾಸವಾಗಿದೆ. ಉತ್ತರಾಧಿಕಾರಿ ಯಾರು?: ಶಿಕಾರಿಪುರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪರ್ಧಿಸುವುದಿಲ್ಲ ಎಂಬ ಮಾತು ಪಕ್ಷದೊಳಗೆ ಕೇಳಿ ಬರುತ್ತಿದೆ. ಹಾಗಾದರೆ ಅವರ …
Read More »ಬಂಗಾಳ ಕೊಲ್ಲಿಯಲ್ಲಿವಾಯುಭಾರ ಕುಸಿತ, ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ:
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ …
Read More »
Laxmi News 24×7