Breaking News

Daily Archives: ಮೇ 20, 2022

ರಾಘವೇಂದ್ರ ಚನ್ನಣ್ಣನವರ ವಿರುದ್ಧ ಎಫ್‌ಐಆರ್

ಬೆಂಗಳೂರು : ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದರು. ವರದಕ್ಷಿಣೆ ಕಿರುಕುಳ (ಐಪಿಸಿ …

Read More »

ಪಿಎಸ್‌ಐ ನೇಮಕಾತಿ ಅಕ್ರಮ ಸೂಪರಿಂಟೆಂಡೆಂಟ್‌ ಮಂಜುನಾಥ್ ರನ್ನ ಬಂಧಿಸಿದ C.I.D.

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಕಚೇರಿ ಸೂಪರಿಂಟೆಂಡೆಂಟ್‌ ಮಂಜುನಾಥ್ ಅವರನ್ನು ಸಿಐಡಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮೇ 23ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.   ‘ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯ ವಿಭಾಗವೊಂದರಲ್ಲಿ ಮಂಜುನಾಥ್ ಕೆಲಸ ಮಾಡುತ್ತಿದ್ದ. ಪೊಲೀಸ್ ನೇಮಕಾತಿ ವಿಭಾಗದ ನೌಕರರ ಜೊತೆ ಒಡನಾವಿಟ್ಟುಕೊಂಡು ಅಕ್ರಮದಲ್ಲಿ ಭಾಗಿಯಾಗಿದ್ದ’ ಎಂದು ಸಿಐಡಿ ಮೂಲಗಳು ಹೇಳಿವೆ. ‘ಪಿಎಸ್‌ಐ ಹುದ್ದೆಗೆ ಅಕ್ರಮವಾಗಿ …

Read More »

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು/ ಮೈಸೂರು: ರಾಜ್ಯದ ಹಲವೆಡೆ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ವಿವಿಧೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕೆರೆ ಏರಿಗಳು ಒಡೆದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷಿ ಜಮೀನಿನಲ್ಲಿ ನೀರು ನಿಂತು ಬೆಳೆಗಳು ಕೊಳೆಯಲಾರಂಭಿಸಿವೆ. ಮಡಿಕೇರಿ- ಚಟ್ಟಳ್ಳಿ ರಸ್ತೆ ಬದಿಯ ನಾಲ್ಕು ಸ್ಥಳದಲ್ಲಿ ಮಣ್ಣು ಕುಸಿದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಸಿಡಿಲು ಬಡಿದು ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ರೈತ ಮಹಿಳೆ ವಿದ್ಯಾವತಿ ನರಸಪ್ಪ ಟೊಳ್ಳೆ (52) ಮತ್ತು ಯಾದಗಿರಿ ಜಿಲ್ಲೆಯ …

Read More »

ಸಹಾಯಕ ಪ್ರಾಧ್ಯಾಪಕರ ನೇಮಕ ‘ಒಎಂಆರ್’ ತಿದ್ದಿ ಅಕ್ರಮ ?

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ‘ಒಎಂಆರ್’ ತಿದ್ದಿ ಅಕ್ರಮ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಕೆಲವು ಮಾಹಿತಿ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಿಸಿಬಿ ಪೊಲೀಸರು ಪತ್ರ ಬರೆದಿದ್ದಾರೆ. ಇಬ್ಬರ ಮೇಲೆ ಅನುಮಾನ: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಇರುವ ಮಾಹಿತಿ ಇದೆ. ಆ ಅಭ್ಯರ್ಥಿಗಳ ಒಎಂಆರ್‌ ಪ್ರತಿಗಳನ್ನು ನೀಡುವಂತೆ …

Read More »