ಅದೇ ವೇಳೆ ಚುನಾವಣಾ ಸಮಯದಲ್ಲಿ ಇವಿಎಂ ಬಳಕೆ ಮತ್ತು ಖಾಸಗಿ ವಲಯಗಳಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿಗೆ ಮೀಸಲಾತಿ ವಿಚಾರದ ವಿರುದ್ಧವೂ ಬಿಎಎಂಸಿಇಎಫ್ ಪ್ರತಿಭಟನೆ ನಡೆಸುತ್ತಿದೆ.ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟ (BAMCEF ) ಮೇ 25 ರಂದು ಭಾರತ್ ಬಂದ್‌ಗೆ ( Bharat Bandh ) ಕರೆ ನೀಡಿದೆ. ಇತರೆ ಹಿಂದುಳಿದ ವರ್ಗಗಳ (OBC) ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಸರ್ಕಾರ ನಡೆಸದಿರುವುದನ್ನು ವಿರೋಧಿಸಿ ಫೆಡರೇಶನ್ ಕ್ರಮಕ್ಕೆ ಒತ್ತಾಯಿಸಿದೆ. ಅದೇ ವೇಳೆ ಚುನಾವಣಾ …
Read More »Daily Archives: ಮೇ 24, 2022
ಮಕ್ಕಳ ಅಕ್ರಮ ಸಾಗಾಟ ಪ್ರಕರಣ: ಆರೋಪಿ ಸ್ಟಾಪ್ ನರ್ಸ್ ಅರೆಸ್ಟ್,
ವಿಜಯಪುರ: ಮಕ್ಕಳ ಅಕ್ರಮ ( Illegal ) ಸಾಗಾಟ ( Trafficking ) ಪ್ರಕರಣ ಪತ್ತೆ ಸಂಬಂಧ ಓರ್ವ ಮಹಿಳಾ ಆರೋಗ್ಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಜಯಮಾಲಾ ಬಂಧಿತ ಆರೋಪಿಯಾಗಿದ್ದಾಳೆ. ಈಕೆ ವಿಜಯಪುರ ನಗರದ ಅಥಣಿ ಗಲ್ಲಿ ವಾಸಿಯಾಗಿದ್ದಾಳೆ. ಐದುಮಕ್ಕಳ ಸಾಕಾಣಿಕೆಹಾಗೂ ಸಾಗಾಟ ಮಾಡಿದ್ದ ಆರೋಪದ ಮೇಲೆ ವಿಜಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಾಯಿಯಿಂದ ಪರಿತ್ಯಕವಾದ, …
Read More »ಪಂಜಾಬ್ ಆರೋಗ್ಯ ಸಚಿವ: ಸಂಪುಟದಿಂದ ವಜಾ, ಅರೆಸ್ಟ್!
ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವತ್ ಮನ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ೨ ತಿಂಗಳು ಪೂರೈಸುವ ಮುನ್ನವೇ ಭ್ರಷ್ಟಾಚಾರ ಆರೋಪದಿಂದ ತತ್ತರಿಸಿದ್ದು, ೨ ತಿಂಗಳಲ್ಲೇ ಮೊದಲ ವಿಕೆಟ್ ಪತನಗೊಂಡಂತಾಗಿದೆ. ಗುತ್ತಿಗೆದಾರರಿಂದ ಶೇ.೧ರಷ್ಟು ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು …
Read More »5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾದ ಡಾ.ಶಂಕರೇಗೌಡರಿಗೆ ಹೃದಯಾಘಾತ!?
ಮಂಡ್ಯ: ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಡಾ.ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತೀಚಿಗಿನ ವರದಿ ಪ್ರಕಾರ ಶಂಕರೇಗೌಡರ ಆರೋಗ್ಯ ಸುಧಾರಿಸಿಕೊಳ್ಳುತ್ತಿದೆ. ಅಪೊಲೋದ ತಜ್ಞ ವೈದ್ಯರಿಂದ ಚಿಕಿತ್ಸೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಡಾ. ಶಂಕರೇಗೌಡ ಅವರು ಮಂಡ್ಯದ ಚರ್ಮ ರೋಗ ತಜ್ಞರಾಗಿದ್ದು, ಭಾರೀ ಜನಪ್ರಿಯತೆಯನ್ನ ಗಳಿಸಿದ್ದಾರೆ. ಮಂಡ್ಯದಲ್ಲಿರುವ …
Read More »ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ಸಿಹಿ ಸುದ್ದಿ
ಮನೆ ನಿರ್ಮಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನಿರಂತರ ಬೆಲೆ ಏರಿಕೆಯಿಂದ ಮಾರುಕಟ್ಟೆಯಲ್ಲಿ ಹಣದುಬ್ಬರ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಬ್ಬಿಣ, ಪ್ಲಾಸ್ಟಿಕ್, ಉಕ್ಕು ವಸ್ತುಗಳ ಮೇಲೆ ಆಮದು ಸುಂಕವನ್ನು ಮನ್ನಾ ಮಾಡಿ, ರಫ್ತು ಸುಂಕ ಹೆಚ್ಚಿಸಿದೆ. ಇದರ ಬೆನ್ನಲ್ಲೇ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್ ಕಡಿಮೆ ಮಾಡಿದ್ದು, ಇಂಧನ ದರ ಇಳಿಕೆಯಾಗಿದೆ. ಇದರೊಂದಿಗೆ ಕಚ್ಚಾ ವಸ್ತುಗಳ ದರವೂ ಕೂಡ ಸಹಜವಾಗಿ ಇಳಿಕೆಯಾಗುತ್ತಿದೆ. ಮನೆ ನಿರ್ಮಿಸುವ ಕಟ್ಟಡ ಸಾಮಗ್ರಿಗಳಾದ …
Read More »ನೇಮಕಾತಿಗೆ ಗ್ರಹಣ, ಅಭ್ಯರ್ಥಿಗಳು ಹೈರಾಣ
ಬೆಳಗಾವಿ: ‘ನೇಮಕ ಪ್ರಕ್ರಿಯೆ ಆರಂಭಗೊಂಡು ನಾಲ್ಕು ವರ್ಷ ಕಳೆದರೂ ಮುಗಿಯುವ ಸೂಚನೆಗಳಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ನಿಖರವಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ದಿಕ್ಕೇ ತೋಚದಂತಾಗಿದೆ…’ -ಇದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಲ್ಲಿ (ಕೆಎಸ್‌ಆರ್‌ಟಿಸಿ) ಖಾಲಿ ಇರುವ ತಾಂತ್ರಿಕ ಸಹಾಯಕರು ಹಾಗೂ ಭದ್ರತಾ ರಕ್ಷಕ ಹುದ್ದೆಗಳಿಗೆ ಪರೀಕ್ಷೆ ಬರೆದಿರುವ ಉದ್ಯೋಗ ಆಕಾಂಕ್ಷಿಗಳ ಅಳಲು. ಕೋವಿಡ್-19 ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ …
Read More »ಪರಿಷತ್ ಚುನಾವಣೆ: ಟಿ.ಎ.ಶರವಣ ಜೆಡಿಎಸ್ ಅಭ್ಯರ್ಥಿ
ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಶರವಣ ಅವರು ಎರಡನೇ ಬಾರಿಗೆ ಪರಿಷತ್ ಪ್ರವೇಶಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ …
Read More »ಅದೃಷ್ಟದ ಅಂಬಾಸೆಡರ್‌ನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ
ಧಾರವಾಡ: ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಸವರಾಜ ಹೊರಟ್ಟಿ ಅವರು ತಮ್ಮ ಅದೃಷ್ಟದ ಅಂಬಾಸೆಡರ್ ಕಾರಿನಲ್ಲಿ ಬಂದು ಮಂಗಳವಾರ ನಾಮಪತ್ರ ಸಲ್ಲಿಸಿದರು. 1980ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾಗಲೂ ತಮ್ಮ ನೆಚ್ಚಿನ ‘ಸಿಎನ್‌ಬಿ 5757’ ನೋಂದಣಿ ಸಂಖ್ಯೆಯ ಅಂಬಾಸೆಡರ್ ಕಾರಿನಲ್ಲೇ ಬಂದು ನಾಮಪತ್ರ ಸಲ್ಲಿಸಿದ್ದರು. ಮಂಗಳವಾರವೂ ತಮ್ಮ ಹೇಮಲತಾ ಅವರೊಂದಿಗೆ ಅದೇ ಕಾರಿನಲ್ಲಿ ಬಂದ ಹೊರಟ್ಟಿ ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ …
Read More »ಕಾಂಗ್ರೆಸ್‌ನಿಂದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇದ್ದರು.
Read More »ಮಾಜಿ ಸಚಿವರ ಒಡೆತನದ ಬಸ್ ಅಪಘಾತ: 9 ಜನರು ದಾರುಣ ಸಾವು
ಹುಬ್ಬಳ್ಳಿ: ಕರ್ನಾಟಕದ ಮಾಜಿ ಸಚಿವರೊಬ್ಬರಿಗೆ ಸೇರಿದೆ ಎನ್ನಲಾದ ರಾಷ್ಟ್ರೀಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರಂತ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇದನ್ನು ಓದಿ: ಈಗ ನಿಮ್ಮೊಂದಿಗೆ RC-DL ಒಯ್ಯುವ ಅಗತ್ಯವಿಲ್ಲ- ಎಲ್ಲವನ್ನು ವಾಟ್ಸಾಪ್‌ನಲ್ಲೇ ಡೌನ್‌ಲೋಡ್ ಮಾಡಿ ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. …
Read More »
Laxmi News 24×7