Breaking News

Daily Archives: ಜೂನ್ 8, 2022

ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. ಹೂಡಲು ಬಾರದ ಎತ್ತು ಪ್ರಕಾಶ ಹುಕ್ಕೇರಿ : ಕಾರಜೋಳ

ಹೂಡಲು ಬರೋದಿಲ್ಲ ಎಂದು ಮೈ ತೊಳೆದು ಹೊರಗೆ ಬಿಟ್ಟಿದ್ದ ಎತ್ತನ್ನು ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಬಗ್ಗೆ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್‌ನವರು ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. …

Read More »

ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಕಾಂಗ್ರೆಸ್ ನವರೆ ಹೇಳಿದ್ದಾರೆ: ಲಕ್ಷ್ಮಣ್ ಸವದಿ

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಅವರೇ ಗೆಲ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರೇ ನನ್ನ ಮುಂದೆ ಹೇಳಿದ್ದಾರೆ ಎಂದು ಮಾಜಿ ಡಿಸಿಎಂ, ಎಂಎಲ್‍ಸಿ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ವಾಯವ್ಯ ಕ್ಷೇತ್ರದ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಎಂಎಲ್‍ಸಿ ಲಕ್ಷ್ಮಣ ಸವದಿ ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ …

Read More »

ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ

ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ ನಡೆಯಿತು. ಬುಧವಾರ ಸಂಜೆ ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಸಭಾಸದಸ್ಯರಾದ ರಾಮ್ ಆಪ್ಟೆ, ರಾಜಾಭಾವು ಪಾಟೀಲ, ದಿನೇಶ್ ಓವುಳಕರ, ಸುಜಾತಾ ಸೌನೀಕ್, ಶಿವಾಜೀರಾವ್ ಜಾಧವ, ಸಂತೋಷ ಕಾಕಡೆ ಇನ್ನುಳಿದವರು ಉಪಸ್ಥಿತರಿದ್ಧರು. ಇಂದಿನ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜುಲೈ ೯ ರಂದು ಮುಂದಿನ …

Read More »

ಅತ್ತ ಶಿಕ್ಷಕನೂ ಅಲ್ಲ…ಪದವೀಧರನೂ ಅಲ್ಲ…ಉದ್ಯೋಗವಂತೂ ಬರೋದೆ ಇಲ್ಲ: ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ ಉಮೇಶ್ ಕತ್ತಿ

ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …

Read More »

SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!

ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ   ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …

Read More »

ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ

ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …

Read More »

90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 …

Read More »

ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …

Read More »

ಹೈವೇಯಲ್ಲಿ ಹಾಕಿದ್ದ ಅಂಗಡಿ ತೆಗೆಯಿರಿ ಎಂದಿದ್ದಕ್ಕೆ ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ

ಹಾವೇರಿ: ಜನರ ಓಡಾಟಕ್ಕೆ ಅಡೆತಡೆ ಮಾಡದಂತೆ ಹೇಳಿದ್ದಕ್ಕೆ ಕರ್ತವ್ಯನಿರತ ಇಬ್ಬರು ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ನಡೆದಿದೆ. ಬಂಕಾಪುರ ಪೊಲೀಸ್ ಠಾಣೆಯ ಗಂಗಾಧರ್ ಹರಿಜನ ಮತ್ತು ದುಂಡಪ್ಪ ಸಿಬ್ಬಂದಿ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಹಲ್ಲೆ ಮಾಡಿದ ಆರೋಪಿಗಳನ್ನು ಹಾನಗಲ್ ತಾಲೂಕಿನ ಹರವಿ ಗ್ರಾಮದ ಅರ್ಜುನ್ ಮತ್ತು ಶಿವಕುಮಾರ್ ಎಂದು …

Read More »

ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ. ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ …

Read More »