Breaking News

Daily Archives: ಜೂನ್ 16, 2022

ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.     ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಸಹ ಜೈಲಿಗೆ ಹೋಗುತ್ತಾರೆ. …

Read More »

ಪ್ರಕಾಶ ಹುಕ್ಕೇರಿಗೆ ಭರ್ಜರಿ ಗೆಲುವು: ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರು..

ಪ್ರಕಾಶ ಹುಕ್ಕೇರಿಗೆ ಭರ್ಜರಿ ಗೆಲುವು: ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರು.. ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಜೂನ 13 ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ್ದು. ಇದರಿಂದ ಚಿಕ್ಕೋಡಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದರು. ಪುರಸಭೆ ಸದಸ್ಯ ಸಾಭೀರ ಜಮಾದಾರ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ …

Read More »

ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ

ಕಾರ ಹುಣ್ಣಿಮೆ ಎನ್ನುವುದು ಉತ್ತರ ಕರ್ನಾಟಕದ ರೈತರಿಗೆ ವಿಷೇಶ ಹಬ್ಬವಾಗಿದೆ. ಈ ಹಬ್ಬದಂದು ರೈತರು ತಾವು ಸಾಕಿರುವ ಎತ್ತುಗಳನ್ನು ವಿಶೇಷ ರೀತಿಯಲ್ಲಿ ಬಣ್ಣಗಳಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಿಶೇಷವಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಕಾರು ಹುಣ್ಣಿಮೆ ನಿಮಿತ್ಯ ಗ್ರಾಮದ ಯುವಕ ಪ್ರದೀಪ್ ಖೋತ ಇವರ ಎತ್ತುಗಳ ಮೇಲೆ ದಿವಂಗತ ಪುನೀತ್ ರಾಜಕುಮಾರ್ ಇವರ ಭಾವಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ …

Read More »

ಇಡಿ ವಿಚಾರಣೆ ಮುಗಿಯುತ್ತಿದ್ದಂತೆ ‘ಹನುಮ’ನ ದರ್ಶನಕ್ಕೆ ‘ರಾಹುಲ್‌’ ಆಗಮನ

ಕೊಪ್ಪಳ : ಸಧ್ಯ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ತಮ್ಮ ಸಹೋದರಿ ಪ್ರೀಯಾಂಕ ವಾದ್ರಾ ಜೊತೆಗೆ ಸಧ್ಯದಲ್ಲೇ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಭೇಟಿಗೆ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಕಾತರರಾಗಿದ್ದಾರೆ ಎಂಬ ಚರ್ಚೆ ನಡೆದಿದ್ದು, ಈ ಮೂಲಕ ಸರ್ವ ಧರ್ಮ, ಸಮುದಾಯಗಳನ್ನ ಏಕಭಾವದಿಂದ ಕಾಂಗ್ರೆಸ್ ನೋಡುತ್ತದೆ ಎಂಬ ಸಂದೇಶ ಸಾರಲು‌ ಮುಂದಾಗಿದ್ದಾರೆ …

Read More »

ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಆಪದ್ಬಾಂಧವನಾಗಿ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ. ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ …

Read More »

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆನುಗ್ಗಿದ ನೀರು

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದ್ದು ದೇವಿಯ ದರ್ಶನವನ್ನು ಪಡೆಯಲು ಭಕ್ತರು ಪರದಾಡುವ ಪ್ರಸಂಗ ನಿರ್ಮಾಣವಾಗಿತ್ತು. ಹೌದು ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳಿಯಿಂದಾಗಿ ಸವದತ್ತಿ ಅಧಿದೇವತೆ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದೆ. ಪರಿಣಾಮವಾಗಿ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಪರದಾಡಬೇಕಾಯಿತು. ಏಕಾಏಕಿಯಾಗಿ ಮಳೆ ರಭಸವಾಗಿ ಬೀಳಲಾರಂಭಿಸಿದ್ದರಿಂದ ಭಕ್ತರು ಓಡಿ …

Read More »

ರಾಹುಲ್​ ಪರ ಟ್ವೀಟ್​ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ:

ಬೆಂಗಳೂರು: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತ ಸಂಸದ ರಾಹುಲ್​ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ, ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ರಾಹುಲ್​ ಗಾಂಧಿ ಪರ ಬ್ಯಾಟಿಂಗ್​ ಬೀಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ರಾಹುಲ್​ ಗಾಂಧಿಯವರ ವಿರುದ್ಧ ವಿನಾಕಾರಣ ಸುಳ್ಳು ಆಪಾದನೆ ಹೊರಿಸಲಾಗಿದೆ …

Read More »

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ: ಸಿದ್ದರಾಮಯ್ಯ

ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರು ದೇಶವನ್ನು ಅಧೋಗತಿಗೆ …

Read More »

ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ನ್ಯಾಷನಲ್‌ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ‌ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ …

Read More »

ಕಸ ತೆಗೆಯುವ ವೇಳೆ ಟ್ರಾಕ್ಟರ್ ಗೆ ಸಿಲುಕಿ ರೈತನ ಸಾವು

ತನ್ನ ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ಕುಂಟೆ ಹೊಡೆಸಿ ಹೊಲವನ್ನು ಬಿತ್ತುಣಿಕೆಗೆ ಹದಗೊಳಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಇಂಜೀನ ಹಿಂಬದಿ ಅಳವಡಿಸಿದ್ದ ಕಬ್ಬಿಣದ ಕುಂಟೆ ಬಡಿದು ರೈತ ಮಲ್ಲಣ್ಣ ಎರೆಡ್ಡಿ (48) ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಗುರುವಾರ ಮದ್ಯಾಹ್ನ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಟ್ರ್ಯಾಕ್ಟರ್ ಕಸ ತೆಗೆಯುವ ವೇಳೆ ಮಲ್ಲಣ್ಣ ಹೊಲದ ಒಡ್ಡಿನ ಬಳಿ ನಿಂತಿದ್ದ. ಚಾಲಕ ಟ್ರ್ಯಾಕ್ಟರನ್ನು …

Read More »