ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …
Read More »Monthly Archives: ಜೂನ್ 2022
ನಾನು ಮನಸ್ಸು ಮಾಡಿದ್ರೆ ಮುಂದೊಂದು ದಿನ ಸಿಎಂ ಆಗುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ
ಬಳ್ಳಾರಿ : ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗ್ತಾನೆ. ಮನಸ್ಸು ಮಾಡಿದ್ರೆ ಯಾವಗ ಬೇಕಾದ್ರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರೆಡ್ಡಿ, ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ, ಮಂತ್ರಿ ಆಗಬೇಕು ಎಂಬ ಆಸೆ ಇಲ್ಲ. ನನಗಂತೂ ಯಾರಿಗೂ ಕೊಡಲಾರದ ಕಷ್ಟ ಕೊಟ್ಟಿದ್ದಾರೆ.ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಇಂತಹ …
Read More »ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಒಕ್ಕೂಟ ತನ್ನ ಅಭ್ಯರ್ಥಿಯನ್ನ ಪ್ರಕಟಿಸಿದೆ. ಇಂದು ನಡೆದ ಸಂಸದೀಯ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿಯ ಈ ಘೋಷಣೆ ಬೆನ್ನಲ್ಲೇ ದ್ರೌಪತಿ ಮುರ್ಮು ಯಾರು ಎಂಬ ಚರ್ಚೆಗಳು ಶುರುವಾಗಿವೆ. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ಗವರ್ನರ್ ಎಂಬ …
Read More »ರಾಜ್ಯದಿಂದ ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ 5 ಸಾವಿರ ರೂ.!: ಶಶಿಕಲಾ ಜೊಲ್ಲೆ
ಉಡುಪಿ : ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಡುಪಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬರುವ ಅಗಸ್ಟ್, ಶ್ರಾವಣ ಮಾಸದಲ್ಲಿ ರಾಜ್ಯದ 30,000 ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಕೈಗೊಳ್ಳುವವರ ಬ್ಯಾಂಕ್ ಖಾತೆಗೆ ಸರ್ಕಾರದ ವತಿಯಿಂದ 5000 ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Read More »ತಾಯಿ ಮಗಳನ್ನು ಒಂದು ಮಾಡಿ ಮಾನವೀಯತೆ ಮೆರೆದ ಬೆಂಗಳೂರು ಪೊಲೀಸರು..!
ಬೆಂಗಳೂರು: ಮಗಳನ್ನು ಹುಡುಕಿ ಬೆಂಗಳೂರಿಗೆ ಬಂದಿದ್ದ ವೃದ್ಧೆ ತಾಯಿಗೆ ಮಗಳನ್ನು ಒಪ್ಪಿಸಿ ಪುಲಿಕೇಶಿನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮೊಬೈಲ್ ಅನ್ನು ತಮಿಳುನಾಡಿನಲ್ಲಿಯೇ ಬಿಟ್ಟು ಮಗಳನ್ನ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವೃದ್ದೆಯು, ಮಗಳ ಹೆಸರು ಬಿಟ್ಟು ಬೇರೇನು ಗೊತ್ತಿಲ್ಲದೇ ರಸ್ತೆಯಲ್ಲಿ ಹುಡುಕಾಡುತ್ತಾ ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪುಲಕೇಶಿ ನಗರದ ಹೊಯ್ಸಳ ಸಿಬ್ಬಂದಿಯು, ಪುಲಿಕೇಶಿನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ವೃದ್ದೆಯ ಮಗಳನ್ನ ಸ್ಥಳೀಯರ ಸಹಾಯದಿಂದ ಸಂಪರ್ಕಿಸಿ ತಾಯಿಯನ್ನು ಮಗಳಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ …
Read More »ಸೈನ್ಯ ಸೇರಲು ಬಯಸುವವರು ರೈಲು, ಬಸ್ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ
ಹೊಸಪೇಟೆ (ವಿಜಯನಗರ): ‘ಸೈನ್ಯ ಸೇರಲು ಬಯಸುವವರು ರೈಲು ಗಾಡಿ, ಬಸ್ ಸುಡುತ್ತಾರೆಯೇ?’ ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಗಣಿ ಮತ್ತು ಕಲ್ಲಿದ್ದಲ್ಲು ಖಾತೆ ಸಚಿವ ಪ್ರಹ್ಲಾದ್ ಜೋಶಿ. ಹಂಪಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಎಲ್ಲದಕ್ಕೂ ವಿರೋಧ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಇದರಲ್ಲಿ ಕೆಲವು ಸಮಾಜ ವಿದ್ರೋಹಿ ಶಕ್ತಿಗಳು ಕೂಡಿಕೊಂಡಿವೆ. ಟೂಲ್ ಕಿಟ್ ಬಂದಿದ್ದನ್ನು ಗಮನಿಸಿರಬಹುದು. ಬಿಹಾರದಲ್ಲಿ ಮೊದಲು ಗಲಭೆ ಆರಂಭಗೊಂಡಿತ್ತು. ಅನಂತರ ಉತ್ತರ …
Read More »ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು ಹಾಗೂ ಎಲ್ಲ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭೂ ಸುಧಾರಣಾ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಅದನ್ನು ಹಿಂಪಡೆಯದಿದ್ದರೆ ಉಗ್ರ …
Read More »ಅಂದು ಗೋಕಾಕ್ ಚಳವಳಿ, ಇದು ಕುಪ್ಪಳ್ಳಿ ಕಹಳೆ: ಸಂಗೀತ ನಿರ್ದೇಶಕ ಹಂಸಲೇಖ ಅಭಿಮತ
ಶಿವಮೊಗ್ಗ: ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ. ನಾವು ಭಾಷಾಂಧರೂ ಅಂದರೂ ಸರಿ ಈ ನಡೆಯ ವಿರುದ್ಧ ತಮಿಳರನ್ನು ಅನುಸರಿಸಿ ಹೋರಾಟ ಸಂಘಟಿಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು. ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ ಬುಧವಾರ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಗೆ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಅವರ ಭಾಷೆಗೆ ಕೊಂಚ ಯಡವಟ್ಟಾದರೂ …
Read More »24 ವರ್ಷ ಕಾದ ಬಳಿಕ 57ನೇ ವಯಸ್ಸಿನಲ್ಲಿ ಸಿಕ್ತು ಸರ್ಕಾರಿ ನೌಕರಿ
ಅಮರಾವತಿ: ಸರ್ಕಾರಿ ಶಿಕ್ಷಕನಾಗಬೇಕೆಂದು ಕನಸು ಕಂಡಿದ್ದ ಆಂಧ್ರಪ್ರದೇಶದ ವ್ಯಕ್ತಿ ತನ್ನ 33ನೇ ವಯಸ್ಸಿನಲ್ಲಿ ಪರೀಕ್ಷೆ ಬರೆದು, 24 ವರ್ಷ ಕಾದ ಬಳಿಕ ತನ್ನ 57ನೇ ವಯಸ್ಸಿನಲ್ಲಿ ಉದ್ಯೋಗ ಪಡೆದಿದ್ದಾರೆ. ಪಥಪಟ್ಟಣದ ಪೆದ್ದಾ ಸಿದ್ದಿಯ ಅಲಕಾ ಕೇದಾರೇಶ್ವರ್ ರಾವ್ ತಮ್ಮ ಬ್ಯಾಚುಲರ್ ಆಫ್ ಎಜುಕೇಶನ್ ಅನ್ನು ಪೂರೈಸಿ, 1998ರಲ್ಲಿ ಸರ್ಕಾರಿ ಶಿಕ್ಷಕನಾಗುವ ಸಲುವಾಗಿ ಜಿಲ್ಲಾ ಆಯ್ಕೆ ಸಮಿತಿ(ಡಿಎಸ್‌ಸಿ) ಪರೀಕ್ಷೆ ಬರೆದಿದ್ದರು. ಅವರು ಒಳ್ಳೆಯ ಅಂಕ ಗಳಿಸಿದ್ದರೂ ಕಾನೂನು ಸಮಸ್ಯೆಯಿಂದ ಅವರ ಆಯ್ಕೆ ವಿಳಂಬವಾಯಿತು. …
Read More »ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರವೇ 90ರ ದಶಕದಲ್ಲಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಚಿಂತಿಸಿತ್ತು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಆಯೋಜಿಸಿದ್ದ ಹಸಿರು ಹಬ್ಬ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಇದು ಸ್ವತಃ ಕಾಂಗ್ರೆಸ್‌ನವರೇ ಜಾರಿಗೆ ತರಲು ಯತ್ನಿಸಿದ ಕಾರ್ಯಕ್ರಮ. ಆದರೆ ಇಂದು ಮೋದಿ ನೇತೃತ್ವದ ಸರ್ಕಾರ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ. ಆದರೆ ಕಾಂಗ್ರೆಸ್‌ನವರು …
Read More »
Laxmi News 24×7