Breaking News

Daily Archives: ಜುಲೈ 5, 2022

ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಗಂಟೆ ಬಂದ್

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಗೋವಾ ಸಮೀಪದ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿದು, ಕರ್ನಾಟಕ ಸಂಪರ್ಕಿಸುವ ರಸ್ತೆ 5 ಘಂಟೆಗಳ ಕಾಲ ಬಂದ್ ಆಗಿತ್ತು. ಬಳಿಕ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ರಸ್ತೆ ಸುಗಮಗೊಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಮಾಲಶೇಜ್ ಘಾಟ್ ಗೋವಾ ಸಮೀಪದಲ್ಲಿದೆ. ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟಕ್ಕೆ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿತವಾಗಿತ್ತು. ಗುಡ್ಡ ಕುಸಿತದಿಂದ ಕರ್ನಾಟಕ-ಗೋವಾ ಸಂಪರ್ಕಿಸುವ ರಸ್ತೆಯಲ್ಲೂ …

Read More »

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.

Read More »

ವಿದ್ಯುತ್ ತಗುಲಿ ಶಾಲಾ ಬಾಲಕಿ ಸಾವು

ನಿಪ್ಪಾಣಿ: ತಾಲೂಕಿನ ಡೋಣೆವಾಡಿ ಗ್ರಾಮದ ಪ್ರಾಥಮಿಕ ಮರಾಠಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅನುಷ್ಕಾ ಸದಾಶಿವ ಭೇಂಡೆ(9) ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ವಿಷಯ ತಿಳಿದು ಸದಲಗಾ ಠಾಣೆಯ ಪೊಲೀಸರು ಹಾಗೂ ಭೋಜ ಹೆಸ್ಕಾಂ ಅಧಿಕಾರಿಗಳು ಬಂದು ಪಂಚನಾಮೆ ನಡೆಸಿದರು. ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಶಿಕ್ಷಣ ಇಲಾಖೆಯಿಂದ ಪೋಷಕರಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಹಾಗೂ ಸ್ಥಳೀಯರು ಶಾಲೆಯ ಮುಖ್ಯಶಿಕ್ಷಕರನ್ನು ವಜಾಗೊಳಿಸಬೇಕು …

Read More »

ಖಾನಾಪುರದಲ್ಲಿ ಉತ್ತಮ ವರ್ಷಧಾರೆ

ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಸೋಮವಾರ ಇಡೀ ದಿನ ತಾಲ್ಲೂಕಿನ ದೇವಲತ್ತಿ, ಪಾರಿಶ್ವಾಡ, ನಂದಗಡ, ಬೀಡಿ, ಹಲಸಿ, ಲೋಂಡಾ, ಕಕ್ಕೇರಿ, ಜಾಂಬೋಟಿ, ಕಣಕುಂಬಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದಿದೆ.   ಕರ್ನಾಟಕ-ಗೋವಾ ಗಡಿಯ ಘಟ್ಟ ಪ್ರದೇಶದಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಕಣಕುಂಬಿಯಲ್ಲಿ 4 ಸೆಂ.ಮೀ, ಲೋಂಡಾದಲ್ಲಿ 3.8 ಸೆಂ.ಮೀ, ಜಾಂಬೋಟಿ ಮತ್ತು ಕಕ್ಕೇರಿಯಲ್ಲಿ 2 ಸೆಂ.ಮೀ, …

Read More »

ಬೆಳಗಾವಿ: ಮಹಿಳೆಯೊಬ್ಬರ ಮಿದುಳಿನ ರಕ್ತದ ಗಂಟಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಳಗಾವಿ: ಮಹಿಳೆಯೊಬ್ಬರ ಮಿದುಳಿನಲ್ಲಿ ಉಂಟಾಗಿದ್ದ ಅತ್ಯಂತ ಅಪಾಯಕಾರಿ ರಕ್ತದ ಗಂಟನ್ನು ‘ಬೈಪಾಸ್‌ ಶಸ್ತ್ರಚಿಕಿತ್ಸೆ’ ಮೂಲಕ ಹೊರತೆಗೆಯುವಲ್ಲಿ, ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲೂಕಿನ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ.   49 ವರ್ಷ ವಯಸ್ಸಿನ ಮಹಿಳೆಯ ಮಿದುಳಿಗೆ ರಕ್ತ ಪೂರೈಸುವ ಪ್ರಮುಖ ನಾಳದಲ್ಲಿ ಈ ಗಂಟು ಬೆಳೆದಿತ್ತು. ಹೃದಯದಿಂದ ಪಂಪ್‌ ಆಗಿ ಚಿಮ್ಮುವ ರಕ್ತವು ಮಿದುಳಿಗೆ ತಲುಪುತ್ತಿರಲಿಲ್ಲ. ಸಾಮಾನ್ಯವಾಗಿ ಮಿದುಳಿನ ರಕ್ತನಾಳಗಳಲ್ಲಿ 6ರಿಂದ 7 ಮಿ.ಮೀ …

Read More »

ಮಹಾನಗರ ಪಾಲಿಕೆಗೆ ಮೇಯರ್‌, ಉಪ ಮೇಯರ್‌ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನ ಸದಸ್ಯರ ಪರಿಚಯಾತ್ಮಕ ಕಾರ್ಯಕ್ರಮವು, ಸಮಸ್ಯೆಗಳನ್ನು ಹೇಳಿಕೊಳ್ಳುವ ಸಭೆಯಾಗಿ ಮಾರ್ಪಟ್ಟಿತು. ಮಹಾನಗರ ಪಾಲಿಕೆಗೆ ಸದಸ್ಯರು ಆಯ್ಕೆಗೊಂಡು 10 ತಿಂಗಳಾಗಿದೆ. ಆದರೆ, ಮೇಯರ್‌, ಉಪ ಮೇಯರ್‌ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆಬಿದ್ದಿದೆ. ಹೀಗಾಗಿ, ಇದೂವರೆಗೂ ಪಾಲಿಕೆ ಸದಸ್ಯರು ಪ್ರಮಾನ ವಚನ ಸ್ವೀಕರಿಸಿಲ್ಲ. ಹೀಗಾಗಿ, ತವು ಜನರಿಂದ ಆಯ್ಕೆಯಾಗಿದ್ದರೂ ಅವರ ಸಮಸ್ಯೆಗೆ ಸ್ಪಂದಿಸಲು ಆಗುತ್ತಿಲ್ಲ ಎಂದು ಬಹುಪಾಲು ಸದಸ್ಯರು ಗೋಳು ಹೇಳಿಕೊಂಡರು. ಕೆಎಂಸಿ ಕಾಯ್ದೆ ಪ್ರಕಾರ …

Read More »

ಬೆಳಗಾವಿ: 8 ವರ್ಷಗಳಿಂದ ಡಯಟ್‌ನಲ್ಲಿ ಶೂನ್ಯ ಪ್ರವೇಶಾತಿ

ಬೆಳಗಾವಿ: ತಾಲ್ಲೂಕಿನ ಮಣ್ಣೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್‌) ಕಳೆದ ಎಂಟು ವರ್ಷಗಳಿಂದ ಡಿ.ಇಡಿ ಕೋರ್ಸ್‌ಗೆ ಒಬ್ಬರೂ ಪ್ರವೇಶ ಪಡೆದಿಲ್ಲ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಾರಿಯೂ ‍ಪ್ರಶಿಕ್ಷಣಾರ್ಥಿಗಳು ಪ್ರವೇಶ ಪಡೆಯುವುದು ಅನುಮಾನ.   1994-95ರಲ್ಲಿ ಮಣ್ಣೂರಿನಲ್ಲಿ ಡಯಟ್‌ ತಲೆಎತ್ತಿದೆ. ನಿಯಮಿತವಾಗಿ ಪ‍್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿದ್ದರಿಂದ ಇದಕ್ಕೆ ಹೆಚ್ಚಿನ ಬೇಡಿಕೆ ಬಂದಿತ್ತು. 2011-12ನೇ ಸಾಲಿನವರೆಗೂ ಇಲ್ಲಿ ಪ್ರವೇಶ ಗಿಟ್ಟಿಸಿಕೊಳ್ಳಲು ಹರಸಾಹಸ ಮಾಡಬೇಕಾಗಿತ್ತು. ವಿವಿಧ …

Read More »

ಬಕ್ರೀದ್‌ ಸಮೀಪಿಸುತ್ತಿದ್ದಂತೆ ಕುರಿ, ಮೇಕೆ, ಕೋಳಿಗಳ  ವ್ಯಾಪಾರ ಜೋರಾಗಿದೆ

ರಾಯಬಾಗ : ಬಕ್ರೀದ್‌ (ಜುಲೈ 10) ಹಬ್ಬ ಸಮೀಪಿಸುತ್ತಿದ್ದಂತೆಯೇ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಕುರಿ, ಮೇಕೆ, ಕೋಳಿಗಳ ಸಂತೆಯಲ್ಲಿ ಈಗ ಜನಜಂಗುಳಿ ಉಂಟಾಗಿದೆ. ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಆದರೆ, ಈಗ ತರಕಾರಿ, ಕಾಳು, ಹಣ್ಣುಗಳ ಮಾರಾಟಕ್ಕಿಂತ ಹೆಚ್ಚು ಸುದ್ದಿಯಲ್ಲಿರುವುದು ಕುರಿ, ಮೇಕೆಗಳು. ಪಟ್ಟಣ ಹೊರವಲಯದ ಬ್ಯಾಕುಡ ರಸ್ತೆಯಲ್ಲಿ ಈ ಕುರಿ- ಮೇಕೆ ಸಂತೆ ಸೇರು ತ್ತಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನ ಕುರಿ- ಮೇಕೆ ಮಾರಲು ಬರುತ್ತಾರೆ. …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆ

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ. ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.   ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ …

Read More »