ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದು ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಬೆಂಬಲವನ್ನು ಸೂಚಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಎಐಸಿಸಿ ಹಾಗೂ ಕೆಪಿಸಿಸಿ ಮೂಲಕ ಯಾವೆಲ್ಲ ಹೋರಾಟಗಳನ್ನು ಮಾಡಲಾಯಿತೋ ಮತ್ತೆ ಆ ಎಲ್ಲರನ್ನು ಹುಮ್ಮಸ್ಸು ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದೆ. ಸಿದ್ದರಾಮೋತ್ಸವ ಕಾರ್ಯಕ್ರಮ ಮೊದಲು ಪಕ್ಷದಿಂದ ದೂರವಾಗಿತ್ತು. ಆದರೆ ಅದಕ್ಕೆ …
Read More »Daily Archives: ಜುಲೈ 8, 2022
ಪಿಎಸ್‌ಐ ನೇಮಕಾತಿ ಅಕ್ರಮ: ಪ್ರಭಾವಿಗಳ ಹೆಸರು ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ
ಬೆಂಗಳೂರು: ‘ಪಿಎಸ್‌ಐ ನೇಮಕ ಅಕ್ರಮದಲ್ಲಿ ಬಿಜೆಪಿ ಪ್ರಮುಖರು,ಪ್ರಭಾವಿ ಸಚಿವರು, ನಾಯಕರು ಭಾಗಿಯಾಗಿದ್ದು, ಅವರ ಹೆಸರು ಬಹಿರಂಗಪಡಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದ ‘ಕೈ’ ನಾಯಕರು, ‘ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ’, ‘ರಕ್ಷಿಸಿ, ರಕ್ಷಿಸಿ ನ್ಯಾಯಾಧೀಶರನ್ನು ರಕ್ಷಿಸಿ’ ಎಂದು ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, …
Read More »ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಅನುಮೋದನೆ: C.M.ಬೊಮ್ಮಾಯಿ
ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ …
Read More »ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ಆರೋಪ
ವಿಜಯಪುರ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಖ್ಯಮಂತ್ರಿ ತಕ್ಷಣ ಮಧ್ಯಪ್ರವೇಶಿಸಿ ಕಡಿವಾಣ ಹಾಕಬೇಕು ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ. ವಿಜಯಪುರದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ಅಬಕಾರಿ ಸನ್ನದುದಾರರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಸ್.ಗುರುಸ್ವಾಮಿ, ರಾಜ್ಯದಲ್ಲಿ ಅಬಕಾರಿ ಅಧಿಕಾರಿಗಳು ಅಬಕಾರಿ ಕಾಯ್ದೆಯಲ್ಲಿರುವ ಲೋಪದೋಷಗಳ ಲಾಭ ಪಡೆದು ಮಾರಾಟಗಾರರನ್ನು ಹಿಂಸಿಸಿ ‘ಮಾಮೂಲಿ’ (ಲಂಚ) ಹಣವನ್ನು ಬಲತ್ಕಾರವಾಗಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು …
Read More »ಹಿಂದಿನವರ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಗೆ ಹಿಡಿದ ಗ್ರಹಣ ಬಿಡಿಸಿದ ಶಾಸಕ ಅನಿಲ ಬೆನಕೆ. ಅಭಿವೃದ್ಧಿ ಪಟ್ಟಿಯಲ್ಲಿ ದೇಶದಲ್ಲಿಯೇ 12 ನೇ ಸ್ಥಾನ ಪಡೆದ ಬಿಮ್ಸ್ ಆಸ್ಪತ್ರೆ
ಹಿಂದಿನವರ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಗೆ ಹಿಡಿದ ಗ್ರಹಣ ಬಿಡಿಸಿದ ಶಾಸಕ ಅನಿಲ ಬೆನಕೆ. ಅಭಿವೃದ್ಧಿ ಪಟ್ಟಿಯಲ್ಲಿ ದೇಶದಲ್ಲಿಯೇ 12 ನೇ ಸ್ಥಾನ ಪಡೆದ ಬಿಮ್ಸ್ ಆಸ್ಪತ್ರೆ ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ …
Read More »ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ
ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …
Read More »ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ
ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …
Read More »ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ
ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …
Read More »ತುಮಕೂರಿನ ರೌಡಿಶೀಟರ್ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ
ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ. ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ …
Read More »ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ತಂದೆ-ಮಗ ಅರೆಸ್ಟ್
ಬೆಳಗಾವಿ: ಕಬ್ಬಿನ ಕದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತಂದೆ-ಮಗ ಇಬ್ಬರನ್ನೂ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, 204 ಕೆಜಿ ತೂಕದ ಹಸಿ ಗಾಂಜಾ ಬೆಳೆ ಜಪ್ತಿ ಮಾಡಿದ್ದಾರೆ. ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಬಸಪ್ಪ ರಂಗಪ್ಪ ಲಗಳಿ(77) ಮತ್ತು ಇವರ ಪುತ್ರ ಸಿದ್ದಪ್ಪ ಬಸಪ್ಪ ಲಗಳಿ(40) ಬಂಧಿತರು. ಹೊನಕುಪ್ಪಿ ಗ್ರಾಮದ ಹದ್ದಿನಲ್ಲಿನ ಸರ್ವೇ ನ.316/4ರ ತಮ್ಮ ಜಮೀನಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಕಬ್ಬಿನಗದ್ದೆಯಲ್ಲಿ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ …
Read More »
Laxmi News 24×7