ಹಾಸನ : ಶೀಘ್ರವೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ತಿಂಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕರು ಬಿಜೆಪಿಗೆ ಸೇರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ರಾಜ್ಯ ಮತ್ತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರ ಪ್ರತ್ಯೇಕ …
Read More »Daily Archives: ಜುಲೈ 10, 2022
ಮೂವತ್ತು ತಿಂಗಳಲ್ಲಿ 38 ಕೊಲೆ! ಖಾಕಿ ಕಂಡರೆ ಪುಂಡರಿಗಿಲ್ಲ ಭಯ, ಸಿಎಂ ತವರಲ್ಲಿ ಚಾಕು-ಚೂರಿ ಅಟ್ಟಹಾಸ
ಹುಬ್ಬಳ್ಳಿ: ಮುಖ್ಯಮಂತ್ರಿಯವರ ತವರು ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ, ಕೊಲೆ ಯತ್ನ, ಹಲ್ಲೆಯಂಥ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚಾಕು, ಚೂರಿ, ತಲ್ವಾರ್, ಮತ್ತಿತರ ಮಾರಕಾಸ್ತ್ರಗಳು ಆಟಿಕೆಯಂತಾಗಿವೆ. ಸಾಮಾನ್ಯರೂ ಸಲೀಸಾಗಿ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಕೇವಲ ಎರಡೂವರೆ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆದಿರುವ 38 ಕೊಲೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು …
Read More »P.S.I. ನೇಮಕಾತಿ ಪ್ರಕರಣ ಅಕ್ರಮ: ಪೌಲ್ ಡೈರಿಯಲ್ಲಿ ಪ್ರಭಾವಿಗಳ ಹೆಸರು
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಡಿಜಿಪಿ ಅಮ್ರಿತ್ ಪೌಲ್ ಅವರಿಗೆ ಸೇರಿದ್ದು ಎನ್ನಲಾದ ಡೈರಿಯನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್, ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಅಂಶಗಳನ್ನು ಡೈರಿಯಲ್ಲಿ ದಾಖಲಿಸುತ್ತಿದ್ದರೆಂಬ ಮಾಹಿತಿ ಗೊತ್ತಾಗಿದೆ. ಕೆಲವುಅಧಿಕಾರಸ್ಥರು, ರಾಜಕೀಯ ಪಕ್ಷಗಳ ಮುಖಂಡರು, ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಭಾವಿಗಳ ಹೆಸರು ಡೈರಿಯಲ್ಲಿರುವುದಾಗಿ ಸಿಐಡಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ‘ಪೌಲ್ …
Read More »ಬೆಳಗಾವಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವರಿಗೆ ಸೋಲಿನ ಭಯ ಕಾಂಗ್ರೆಸ್ ಸಮೀಕ್ಷೆಯಲ್ಲಿ ಬಯಲು..
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೇ, ಹಲವು ಹಾಲಿ ಕಾಂಗ್ರೆಸ್ ಶಾಸಕರಿಗೆ ಸೋಲಿನ ಭೀತಿ ಎದುರಾಗಿದೆ. ಹತ್ತಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಸೋಲಿನ ಭೀತಿ ಕಾಡುತ್ತಿದೆ ಎನ್ನಲಾಗಿದೆ. ಇದೆಲ್ಲವೂ ಇತ್ತೀಚಿಗೆ ಕಾಂಗ್ರೆಸ್ ನಡೆಸಿದಂತ ಆಂತರಿಕ ಸಮೀಕ್ಷೆಯಲ್ಲಿ ಬಯಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲ ಶಾಸಕರು ಕೂಡ ಚುನಾವಣೆಯ ( Election ) ವೇಳೆಗೆ ಬಂಡಾಯವೇಳಲಿದ್ದು, ಕೈ ಪಕ್ಷಕ್ಕೆ ಬಂಡಾಯದ ಭೀತಿ ಕೂಡ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು.. ಕೆಲವರಿಗೆ ಕಾರ್ಯಕರ್ತರ ಜೊತೆಗೆ …
Read More »ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ. ತಿಕೋಟಾ ತಾಲ್ಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ. ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ …
Read More »ಗ್ರಾಮ ಪಂಚಾಯತ್‌ಗಳಲ್ಲಿ ಪಂಚತಂತ್ರ 2.0 ಕಡ್ಡಾಯ
ಬೆಂಗಳೂರು: ಪಂಚಾಯತ್‌ಗಳ ಆಡಳಿತ, ಯೋಜನೆ ಮತ್ತು ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಯಾಗಿಸಲು ಪಂಚತಂತ್ರ 2.0 ತಂತ್ರಾಂಶ ಹಾಗೂ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ 2.0 ಅಭಿವೃದ್ಧಿಪಡಿಸಲಾಗಿದ್ದು, ರಾಜ್ಯದ ಎಲ್ಲ ಪಂಚಾಯತ್‌ಗಳಲ್ಲಿ ಇದನ್ನು ಕಡ್ಡಾಯ ಗೊಳಿಸಲಾಗಿದೆ. ಗ್ರಾಮ ಪಂಚಾಯತ್‌ಗಳ ದೈನಂದಿನ ಕಾರ್ಯಗಳ ಮೇಲ್ವಿಚಾರಣೆ, ಸೇವೆಗಳ ವಿಲೇ ವಾರಿಗೆ ಬೇಕಾದ ಯೋಜನೆಗಳ ಅನುಷ್ಠಾನ ಮತ್ತು ತೀರ್ಮಾನಗಳನ್ನು ಕೈಗೊಳ್ಳಲು 2011ರಿಂದ ಬಳಸಲಾಗುತ್ತಿದ್ದ ಪಂಚತಂತ್ರ 1.0 ತಂತ್ರಾಂಶವನ್ನು ಉನ್ನತೀಕರಿಸಿ ಪಂಚತಂತ್ರ …
Read More »Bakrid 2022: ‘ಬಕ್ರೀದ್’ನ ಸಂದೇಶ
ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್ ಅದ್‌ಹಾ’. ಭಾರತದಲ್ಲಿ ಈ ಹಬ್ಬ ‘ಬಕ್ರೀದ್’ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ದೇಶದಾದ್ಯಂತ ಮುಸ್ಲಿಮರು ಇಂದು (ಜುಲೈ 10) ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ‘ರಂಜಾನ್’ ತಿಂಗಳ ಉಪವಾಸದ ಬಳಿಕ ‘ಈದುಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್ಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ …
Read More »
Laxmi News 24×7