Breaking News

Daily Archives: ಜುಲೈ 12, 2022

ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭ: ಜೊಲ್ಲೆ

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದರು.   ಸೋಮವಾರ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶಿಲನೆ ಹಾಗೂ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು …

Read More »

ನಮ್ ಗೌಡ್ರಿಗೆ ಏನೂ ಅನ್ನಬೇಡಿರಪ್ಪಾ; ಕಾಂಗ್ರೆಸ್ ಕೊಟ್ಟ ಕಟ್ಟಪ್ಪಣೆ ಅಸಲಿಯತ್ತು ಏನು!?

ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಕಾಂಗ್ರೆಸ್ ಕಟ್ಟಾಳುಗಳನ್ನು ಕೂಗಿ ಕರೆದ ಹೈಕಮಾಂಡ್ ಕಟ್ಟುನಿಟ್ಟಿನ ಕಟ್ಟಪ್ಪಣೆಯೊಂದನ್ನು ನೀಡಿದೆ. ಸುಖಾಸುಮ್ಮನೆ ವೈಯಕ್ತಿಕ ದಾಳಿ ನಡೆಸದಂತೆ ಎಚ್ಚರಿಕೆ ನೀಡಿದೆ.   ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆಗೆ ಕೇಂದ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೌಪ್ಯ ಸಭೆಯೊಂದನ್ನು ನಡೆಸಿದ್ದಾರೆ. ಈ ವೇಳೆ ಚುನಾವಣಾ ತಂತ್ರಗಾರಿಕೆ ಕುರಿತು …

Read More »

ಪಿಎಸ್‌ಐ ಅಕ್ರಮ: ಖಾಲಿ ಉತ್ತರ ಪತ್ರಿಕೆಯಲ್ಲಿ ಮಂಜುನಾಥ ಕರಾಮತ್ತು

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಮಂಜುನಾಥ ಮೇಳಕುಂದಿ ಒಎಂಆರ್‌ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ಕೆಲವೇ ನಿಮಿಷಗಳಲ್ಲಿ ಪರೀಕ್ಷಾ ಸಿಬ್ಬಂದಿಯಿಂದ ಭರ್ತಿ ಮಾಡಿಸುವ ಮೂಲಕ ಅಭ್ಯರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿದ್ದ. ಆ ನಂತರ ತನ್ನ ಪಾಲಿನ ಹಣ ಬರುವವರೆಗೂ ಉತ್ತರ ಪತ್ರಿಕೆಯ ಅಭ್ಯರ್ಥಿಗಳ (ಕ್ಯಾಂಡಿಡೇಟ್ ಕಾಪಿ) ಪ್ರತಿಯನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದ ಸಂಗತಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹೊರಬಿದ್ದಿದೆ. ಪ‍್ರಕರಣದಲ್ಲಿ ಮೊಟ್ಟಮೊದಲು ಬಂಧನಕ್ಕೊಳಗಾದ ಅಭ್ಯರ್ಥಿ, ಸೇಡಂನ ವೀರೇಶನಿಗೆ …

Read More »

ಯಾಕ್ರೈಯ್ಯಾ ಮೋದಿ ಮೋದಿ ಅಂತಿರಾ? ಮೋದಿ ನಿಮ್ಮ ಮನೆ ಹಾಳು ಮಾಡಿದ್ದಾರೆ”: ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಅರಮನೆ ಮೈದಾನದಲ್ಲಿ ಯುವ ಜನೋತ್ಸವ ವಿಸ್ತೃತ ಕಾರ್ಯಕಾರಿ ಸಭೆಯಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಯುವ ಗರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇಶದ ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಈ ದೇಶದ …

Read More »

ಬೆಳಗಾವಿ ವಿಭಾಗ ಅಮ್ಲನ್ ಆದಿತ್ಯ ಬಿಸ್ವಾಸ್, & 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ.   ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ವಿಭಾಗಕ್ಕೆ …

Read More »

ಹೀಗಿರಬೇಕು ಮದುವೆ ಅಗ್ರಿಮೆಂಟ್‌! ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ!

ಮದುವೆಯಲ್ಲಿ ನವ ವಧು-ವರರು ಏಳೇಳು ಜನ್ಮಕ್ಕೂ ಜತೆಯಾಗಿರುವುದಾಗಿ ಪ್ರಮಾಣಿಸುವುದು ಸಾಮಾನ್ಯ. ಆದರೆ ಈ ಮದುವೆಯಲ್ಲಿ ನಡೆದ ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ. ‘ತಿಂಗಳಿಗೊಂದೇ ಪಿಜ್ಜಾ ತರಿಸಬೇಕು’, ’15 ದಿನಕ್ಕೊಮ್ಮೆ ಶಾಪಿಂಗ್‌ಗೆ ಕರೆದೊಯ್ಯಬೇಕು’, ‘ಮನೆ ಊಟಕ್ಕೆ ಯಾವಾಗಲೂ ಬೇಡ ಎನ್ನಕೂಡದು’, ‘ಪ್ರತಿದಿನ ಜಿಮ್‌ಗೆ ಹೋಗಬೇಕು’, ‘ಪ್ರತಿ ಪಾರ್ಟಿಯಲ್ಲಿ ಒಳ್ಳೊಳ್ಳೆ ಫೋಟೋ ತೆಗೆದುಕೊಡಬೇಕು’, ‘ಪ್ರತಿ ಭಾನುವಾರ ಗಂಡನೇ ತಿಂಡಿ ರೆಡಿ ಮಾಡಬೇಕು’.   ಇದು ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ವರ-ವಧು …

Read More »

ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ

ಬೆಳಗಾವಿ: ಕಳೆದೊಂದು ವಾರದಿಂದ ಕುಂದಾನಗರಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಖಾನಾಪುರ ತಾಲೂಕಿನ ಗುರ್ಲಗಂಜಿ ಗ್ರಾಮದ ಶಾಲಾ ಕೊಠಡಿಯೊಂದು ಕುಸಿದು ಬಿದ್ದಿದೆ. ಇನ್ನೊಂದೆಡೆ, ಮುಡೇವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತವಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಖಾನಾಪೂರ ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಶಾಲಾ ಗೋಡೆಗಳು ಮಳೆ ಅಬ್ಬರಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ …

Read More »