Breaking News

Daily Archives: ಜುಲೈ 17, 2022

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್

ಬೆಂಗಳೂರು: ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿದೆ. ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.   ಜುಲೈ.5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ದಾಳಿಯ …

Read More »

ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿಕೆ, ಹಲವೆಡೆ ಇಂದು, ನಾಳೆ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಪ್ರವಾಹದಿಂದಾಗಿ ಎರಡು ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರ ತಾಲೂಕಿನ ಗುಂಡಬಾಳ, ಹಡಿನ ಬಾಳ ಗ್ರಾಮಗಳು ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಅಡಿಕೆ ತೋಟ, ಮನೆಗಳಿಗೆ ನೀರು ನುಗ್ಗಿದೆ. ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದ್ದು, ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ರವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಘಟಪ್ರಭಾ ನದಿ …

Read More »

ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ’ : ವಿದ್ಯುತ್ ಕಂಬಕ್ಕೆ ಅಂಟಿಸಿದ ಪೋಸ್ಟ್ ವೈರಲ್!

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕ್ಷೇತ್ರವಾದ ಮಲ್ಲೇಶ್ವರಂನಲ್ಲಿ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅನ್ನು ವಿದ್ಯುತ್ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.   ಹಲವು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ವಾಹನ ಸವಾರರು ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಶಾಪಿಂಗ್ …

Read More »

ದಾಖಲಾತಿಗಳ ಪರಿಶೀಲನೆಗೆಂದು ಸುಖಾಸುಮ್ಮನೆ ವಾಹನಗಳನ್ನು ತಡೆಯದಂತೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಮತ್ತೊಮ್ಮೆ ಪೊಲೀಸರಿಗೆ ಖಡಕ್ ಸೂಚನೆ

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ. ಕಣ್ಣಿಗೆ ಕಾಣುವಂತಹ ಅಪರಾಧ ಕಂಡುಬಂದರೆ ಮಾತ್ರ ವಾಹನ ನಿಲ್ಲಿಸಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.  

Read More »

ಭಾರತೀಯರು ಸ-ಹೃದಯಿಗಳು, ಪ್ರೀತಿಯ ಪ್ರತೀಕರು : ಶ್ರೀ ಸಿದ್ದೇಶ್ವರ ಸ್ವಾಮಿಜಿ

ಮುಗಳಖೋಡ: ಯಾವ ವ್ಯಕ್ತಿ ಸಿಹಿ ಮನಸ್ಸಿನಿಂದ ತುಂಬು ಹೃದಯದ ಪ್ರೀತಿ ಮತ್ತು ಭಕ್ತಿ ಭಾವದಿಂದ ಬೇರೆ ವ್ಯಕ್ತಿಗಳನ್ನು ಗೌರವಿಸುವರವು ದೇವರಿಗೆ ಹತ್ತಿರ ಇರುವರು.   ಮತ್ತು ತಂದೆ ತಾಯಿ, ಹಿರಿಯರು , ಶರಣರಿಗೆ ಪೂಜ್ಯ ಭಾವದಿಂದ ನೋಡಿ ಧಾರ್ಮಿಕತೆ ಬೇಳೆಸುವ ಜನರೆ ಭಾರತೀಯರು ಎಂದು ವಿಜಯಪೂರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹೇಳಿದರು.   ಅವರು ಮುಗಳಖೋಡ ಪಟ್ಟಣದ ಚವಿವ ಸಂಘದ ಆವರಣದಲ್ಲಿರುವ ಸಾಯಿ ಪ್ರತಿಷ್ಠಾಪನೆಯ ದಶಮಾನೋತ್ಸವ ಹಾಗೂ …

Read More »

ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಈ ಹಿಂದೆ ಹಲವು ಭಾರಿ ವಿಧಾನಸೌಧದ ಕೊಠಡಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಕೂಡ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ.   ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಬ್ಲಾಸ್ ಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ಹೊಂತಿಕೊಂಡಂತ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.

Read More »

ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂದಿನ ಚುನಾವಣೆಯಲ್ಲಿ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.       ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ …

Read More »

ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೈದಿಗಳಿಗೆ ದಿನಗೂಲಿ 200 ರೂ. ನೀಡಲಾಗುತ್ತಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ಕೂಲಿ 525 ರೂ. ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 7 ಕೋಟಿ ರೂ. ವಿಶೇಷ ಅನುದಾನ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.   ಸ್ವಾತಂತ್ರ್ಯ …

Read More »