Breaking News

Daily Archives: ಜುಲೈ 25, 2022

ಬುರ್ಖಾ ಧರಿಸಿ ಆಲಮಟ್ಟಿ ಜಲಾಶಯಕ್ಕೆ ನುಗ್ಗಲು ಯತ್ನ: ಹಾಸನ ಮೂಲದ ಯುವಕ ಪೊಲೀಸ್ ವಶಕ್ಕೆ

ಆಲಮಟ್ಟಿ (ವಿಜಯಪುರ): ಸೋಮವಾರ ಬೆಳ್ಳಂಬೆಳಿಗ್ಗೆ ಮಹಿಳೆಯರ ವೇಷದಲ್ಲಿದ್ದ ಶಂಕಿತ ಯುವಕ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನುಗ್ಗಲು ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಜರುಗಿದೆ. ನಸುಕಿನಲ್ಲಿ ಆಲಮಟ್ಟಿ ಪರಿಸರದಲ್ಲಿ ಕಾಣಿಸಿಕೊಂಡ ಯುವಕ ಬುರ್ಖಾ ಧರಿಸಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯ ಪ್ರವೇಶಕ್ಕೆ ಮುಂದಾಗಿದ್ದಾನೆ. ಈ ವೇಳೆ ಜಲಾಶಯದ ಪ್ರವೇಶ ದ್ವಾರದಲ್ಲಿ ಭದ್ರತೆಗೆ ಇದ್ದ ಪೊಲೀಸರು ಇಷ್ಟು ಬೇಗ ಜಲಾಶಯ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ವೇಳೆ ನಡೆದ …

Read More »

ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್

ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ …

Read More »

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು.   ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು. 21 …

Read More »

ಸುಷ್ಮಿತಾ ಸೇನ್ ಕನ್ನಡಕ ‌ʼಝೂಮ್ʼ ಮಾಡಿದಾಗ ಕಂಡಿದ್ದೇನು

ಉದ್ಯಮಿ‌ ಲಲಿತ್ ಮೋದಿ ಜೊತೆಗಿನ ಒಡನಾಟದಿಂದ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ಈಗ ಹೆಚ್ಚು ಪ್ರಚಲಿತದಲ್ಲಿದ್ದಾರೆ.ಲಲಿತ್ ಮೋದಿ ಜೊತೆಗೆ ಡೇಟಿಂಗ್ ಇಳಿದಿದ್ದಕ್ಕೆ ಆಕೆಯನ್ನು ‘ಗೋಲ್ಡ್ ಡಿಗ್ಗರ್’ ಎಂದು ಕರೆಯುವುದರಿಂದ ಹಿಡಿದು ಮೀಮ್‌ಗಳನ್ನು ರಚಿಸುವವರೆಗೆ ಸಾಮಾಜಿಕ ಜಾಲತಾಣದಲ್ಲಿ ಗೋಳಾಡಿಸಿದ್ದಾರೆ. ಈಗ ಹೊಸ ವಿಷಯದ ಮೂಲಕ‌ ಪುನಃ ಆಕೆಯನ್ನು ಎಳೆದುತಂದಿದ್ದಾರೆ. ಆಕೆ ಇತ್ತೀಚೆಗೆ ತನ್ನ ಸಾಮಾಜಿಕ ಜಾಲತಾಣದ ಪ್ರೊಫೈಲ್‌ನಲ್ಲಿ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದು, ಆ ಫೋಟೋ ಸಾಮಾನ್ಯ ಸೆಲ್ಫಿಯಂತೆ ಕಂಡುಬಂದಿದೆ. …

Read More »

ಹೊಸಪೇಟೆಯ ಅಪ್ಪು ಪುತ್ಥಳಿ ಮುಂದೆ ಯುವರಾಜ್‌ಕುಮಾರ್, ಅನುಶ್ರೀ: ಯುವರತ್ನನಿಗೆ ನಮನ!

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವೇ ಇಲ್ಲ. ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ಮಾಡಿದ ಕಲಾಸೇವೆ ಒಂದೆಡೆಯಾದರೆ, ಅವರ ಸಮಾಜಮುಖಿ ಕೆಲಸಗಳು ಅದೆಷ್ಟೋ ಯುವಕರ ಪ್ರೇರಣೆಗೆ ಕಾರಣವಾಗಿದೆ. ಪುನೀತ್ ರಾಜ್‌ಕುಮಾರ್ ಅಗಲಿಕೆ ಬಳಿಕ ಅವರನ್ನು ಯುವರಾಜ್‌ಕುಮಾರ್‌ರಲ್ಲಿ ಕಾಣುತ್ತಿದ್ದಾರೆ. ಇತ್ತ ಅಣ್ಣಾವ್ರ ಮೊಮ್ಮಗ ಕೂಡ ಅಪ್ಪು ಅಭಿಮಾನಿಗಳನ್ನು ತನ್ನ ಅಭಿಮಾನಿಗಳು ಅಂತಲೇ ನೋಡುತ್ತಿದ್ದಾರೆ. ಯುವ ರಾಜ್‌ಕುಮಾರ್ ಹೋದಲ್ಲೆಲ್ಲಾ ಪವರ್‌ಸ್ಟಾರ್ ಅಭಿಮಾನಿಗಳು ಅವರೊಂದಿಗೆ ಮಾತಾಡಲು ತವಕಿಸುತ್ತಿದ್ದಾರೆ. ಇತ್ತೀಚೆಗೆ ಯುವರಾಜ್‌ಕುಮಾರ್ ಹೊಸಪೇಟೆಗೆ …

Read More »

ಮಕ್ಕಳ ಮುದ್ದಿನ ಬೆಕ್ಕು ರಕ್ಷಿಸಿದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ

ಬೆಳಗಾವಿ: ಇಲ್ಲಿನ ಖಡೇಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಬಾಲ್ಕನಿ ತುದಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಕಾಪಾಡಲು ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಹಾಗೂ ಪೊಲೀಸರೇ ಬರಬೇಕಾಯಿತು! ಹೌದು. ಖಡೇಬಜಾರಿನಲ್ಲಿ ವಾಸವಾಗಿರುವ ಕುಟುಂಬದ ಮಕ್ಕಳು ಸಾಕಿದ ಮುದ್ದಿನ ಬೆಕ್ಕು, ಶನಿವಾರ ರಾತ್ರಿ ಕಟ್ಟಡದ ಮೂರನೇ ಅಂತಸ್ತಿನ ಬಾಲ್ಕನಿಯ ತುದಿಗೆ ಇಳಿದಿತ್ತು. ಅತ್ತ ಮರಳಿ ಬಾಲ್ಕನಿಯ ಕಿಟಕಿಗೂ ನೆಗೆಯಲಾಗದೇ, ಇತ್ತ ಕೆಳಗೂ ಇಳಿಯಲಾಗದೆ ಪ್ರಾಣ ಭಯದಿಂದ ಪರದಾಡುತ್ತಿತ್ತು. ಎರಡು ತಾಸು ‘ಮ್ಯಾಂವ್ ಗುಡುತ್ತ…’ ಅತ್ತಿಂದಿತ್ತ …

Read More »

ಸಚಿವರ ಹೇಳಿಕೆಗೆ ವಿರೋಧ: ಶಿಕ್ಷಕನಿಗೆ ನೋಟಿಸ್‌

ಬೆಳಗಾವಿ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು, 13,800 ಸರ್ಕಾರಿ ಶಾಲೆಗಳ ವಿಲೀನ ಕುರಿತು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ವಿರೋಧಿಸಿ, ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ್‌ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೀರಣ್ಣ ಮಡಿವಾಳರ ಅವರಿಗೆ ಚಿಕ್ಕೋಡಿ ಡಿಡಿಪಿಐ ಎಂ.ಎಲ್‌. ಹಂಚಾಟೆ ಅವರು ಕಾರಣ ಕೇಳಿ ಜುಲೈ 22ರಂದು ನೋಟಿಸ್‌ ಜಾರಿಗೊಳಿಸಿದ್ದಾರೆ.   ‘ಸಚಿವರ ಹೇಳಿಕೆಗೆ ನೀವು, ಇದು 13,800 ಶಾಲೆಗಳ …

Read More »

ನಿಮ್ಮ ಅಪ್ಪನ ಆಣೆ ನೀವಿಬ್ಬರೂ ಸಿಎಂ ಆಗುವ ಪ್ರಶ್ನೆಯೇ ಇಲ್ಲ: B.S.Y.

ಶಿಕಾರಿಪುರ :ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಯಾಗುತ್ತೇವೆ ಎಂದು ಓಡಾಡುತ್ತಿದ್ದಾರೆ. ಅವರಿಗೆ ಕಿವಿಮಾತು ಹೇಳಲು ಇಚ್ಚಿಸುತ್ತೇನೆ. ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿಯಾಗುವ ಪ್ರಶ್ನೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು. ತಾಲ್ಲೂಕಿನ ಆಂಜನಾಪುರ ಗ್ರಾಮ ಸಮೀಪ ಶುಕ್ರವಾರ ನಡೆದ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ …

Read More »

ಸಿಎಂ ಆಗಲು ಬ್ಯಾಕ್ ಗ್ರೌಂಡ್ ಚೆನ್ನಾಗಿರಬೇಕು: ಡಿಕೆಶಿಗೆ HDK ಟಾಂಗ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ವಿರುದ್ಧ ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ  ವಾಗ್ದಾಳಿ ನಡೆಸಿದರು. ‌ಸಿಎಂ ವಿಚಾರವಾಗಿ ಕಿತ್ತಾಟ ಹಿನ್ನೆಲೆ ವಾಗ್ದಾಳಿ ನಡೆಸಿ ರಾಮನಗರದಲ್ಲಿ ಯಾರೇ ಬಂದರೂ ನಮ್ಮನ್ನ ಏನು‌ ಮಾಡಲು ಸಾಧ್ಯವಿಲ್ಲ. ಕಳೆದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇರಲಿಲ್ಲ ಅಷ್ಟೇ.‌ ಉಳಿದ ಎಲ್ಲಾ ಚುನಾವಣೆಯಲ್ಲಿರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (ಇದ್ದರು. ಜನತೆಯ ಆರ್ಶೀವಾದ ಇರುವವರೆಗೆ ಏನು ಆಗಲ್ಲ. ರಾಮನಗರದಲ್ಲಿ (ಶಿವಕುಮಾರ್ ಅವಕಾಶ ಕೇಳಿರುವುದು ತಪ್ಪಿಲ್ಲ. ಆದರೆ ಜನರ ಕಷ್ಟಸುಖಕ್ಕೆ ಕೆಲಸ ಮಾಡಿದ್ದೇನೆ …

Read More »

ಔತಣ ಕೂಟದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಅವಮಾನಿಸಿದರಾ ಪ್ರಧಾನಿ ಮೋದಿ ?

ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆ ನಡೆದಿದ್ದು, ಎನ್.ಡಿ.ಎ. ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದಾರೆ. ದ್ರೌಪದಿ ಮುರ್ಮ ರಾಷ್ಟ್ರದ ನೂತನ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಔತಣಕೂಟ ಏರ್ಪಡಿಸಲಾಗಿದ್ದು, ಈ ವೇಳೆ ರಾಮನಾಥ್ ಕೋವಿಂದ್ ಅವರು ನಮಸ್ಕರಿಸಿದರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ …

Read More »