Breaking News

Daily Archives: ಜುಲೈ 27, 2022

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ …

Read More »

ಮೊಬೈಲ್‌ ಕದ್ದು ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ದೋಚುತ್ತಿದ್ದ ಕದೀಮರು

ಕಲಬುರಗಿ: ಮೊಬೈಲ್‌ ಕಳ್ಳತನ ಮಾಡಿ ಫೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 22 ಮೊಬೈಲ್‌ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್‌ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್‌ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ …

Read More »

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ರಾಜ್ಯ ಶಿಕ್ಷಣ ಇಲಾಖೆಯು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ.   ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು-2012ರಂತೆ ಶೈಕ್ಷಣಿಕ ವರ್ಷದಲ್ಲಿ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ. 2016-17ನೇ ಶೈಕ್ಷಣಿಕ …

Read More »

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ. ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು. ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ. ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು …

Read More »

ಚಂದ್ರು, ಹರ್ಷ, ಪ್ರವೀಣ, ನಾಳೆ ಇನ್ಯಾರೋ ? ಸಿ.ಟಿ.ರವಿ, ರೇಣುಕಾಚಾರ್ಯ ಬೇಸರ

ಬೆಂಗಳೂರು :ಚಂದ್ರ, ಹರ್ಷ, ಪ್ರವೀಣ ನಾಳೆ ಇನ್ಯಾರೋ ? ಎಂದು ಬಿಜೆಪಿ ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧವೇ ಸಿ.ಟಿ. ರವಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂಥ ಘಟನೆಗಳಿಂದ ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಚಂದ್ರು, ಹರ್ಷ, ಪ್ರವೀಣ್ ನಾಳೆ …

Read More »

ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಅಂತಿಮ ಯಾತ್ರೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸಚಿವರು ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.   ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈ ವೇಳೆ ಆಗಮಿಸಿದ ಸಚಿವರಾದ ಸುನಿಲ್ ಕುಮಾರ್ , ಎಸ್ . ಆಂಗಾರ , ಬಿಜೆಪಿ ರಾಜ್ಯಾಧ್ಯಕ್ಷ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತೀರ್ಮಾನಿಸುವುದು ಜನ,ಬಿಜೆಪಿ ನಾಯಕರಲ್ಲ: ರಮೇಶ್ ಕುಮಾರ್

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುವುದು ರಾಜಕೀಯ ಸಹಜ. ಆದರೆ ಯಾರು ಅಧಿಕಾರಕ್ಕೆ ಬರಬೇಕೆಂದು ತೀರ್ಮಾನಿಸುವುದು ರಾಜ್ಯದ ಜನತೆಯೇ ಹೊರತು ಬಿಜೆಪಿ ನಾಯಕರಲ್ಲ ಎಂದು ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷರಾದ ಶಾಸಕ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.   ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕರೇ ಹೇಳಿದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತೆಂದು ಕಾಂಗ್ರೆಸ್ ನಾಯಕರು ಹೇಳಿದರೆ ಅದರ ರಾಜಕಾರ …

Read More »

ಪ್ರವೀಣ್‌ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.   ಪ್ರವೀಣ್‌ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ …

Read More »

ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, …

Read More »

ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ

ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್‍ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …

Read More »