ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ. ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ …
Read More »Monthly Archives: ಜುಲೈ 2022
‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು …
Read More »ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥ
ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು …
Read More »ಬಾಳೆಹಣ್ಣಿನ ದರ ಏರಿಕೆ, ಶಾಲಾ ಮಕ್ಕಳಿಗೆ ಹಣ್ಣಿನ ಬದಲು ಶೇಂಗಾ ಚಿಕ್ಕಿ
ಬೆಲೆ ಏರಿಕೆ ಎಫೆಕ್ಟ್ ಈಗ ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳಿಗೂ ತಟ್ಟಿದೆ. ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ನೀಡಲು ಮೌಖಿಕವಾಗಿ ಸೂಚಿಸಲಾಗಿದೆ. ಪೌಷ್ಟಿಕಾಂಶ ಹೆಚ್ಚಳಕ್ಕಾಗಿ ಕಲ್ಯಾಣ ಕರ್ನಾಟಕದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಆದರೆ ಇದಕ್ಕಾಗಿ ನಿಗದಿಪಡಿಸಿರುವ ದರಕ್ಕಿಂತ ಮಾರುಕಟ್ಟೆಯಲ್ಲಿ ಬಾಳೆಹಣ್ಣು ದರ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಈ …
Read More »ರಾಷ್ಟ್ರಪತಿ ಪದಗ್ರಹಣ ಸಮಾರಂಭದಲ್ಲಿ ಖರ್ಗೆಗೆ ಅಪಮಾನವಾಗಿಲ್ಲ: ಜೋಶಿ
ನವದೆಹಲಿ, ಜುಲೈ 25: ”ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಮಾಡಿ, ಅಗೌರವ ತೋರಲಾಗಿದೆ” ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ತಿರುಗೇಟು ನೀಡಿದ್ದಾರೆ. Respecting the position and seniority of @kharge ji, he was offered to be seated in the first row …
Read More »ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್ ರೋಣ’:
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …
Read More »ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ ಬೆಳಗಾವಿ ಸಂಚಾರಿ ಜಾಗೃತ ದಳದ ಸಿಬ್ಬಂದಿ
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿ ಅರಣ್ಯ ಸಂಚಾರಿ ಜಾಗೃತ ದಳದ ತಂಡ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಜ್ಜರಿ, ದೇವರಗುಡ್ಡ, ರಾಣೆಬೆನ್ನೂರಿನ ಮೂವರು ವ್ಯಕ್ತಿಗಳು ಹಾಗೂ ಬ್ಯಾಡಗಿ ತಾಲೂಕಿನ ಬಡಪ್ಪನಹಳ್ಳಿ ಗ್ರಾಮದ ಓರ್ವ ವ್ಯಕ್ತಿ, ಹಾವೇರಿ ತಾಲೂಕಿನ ಬರಡಿ ಗ್ರಾಮದ ಓರ್ವ ವ್ಯಕ್ತಿಯನ್ನು ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಬಂಧಿಸುವಲ್ಲಿ ಬೆಳಗಾವಿಯ ಅರಣ್ಯ …
Read More »ಹರ ಘರ್ ತಿರಂಗಾ ಪೊಸ್ಟರ್ ತ್ರೀ ಚಕ್ರ ವಿತರಣೆ ಬಿಡುಗಡೆಗೊಳಿಸಿದ ಸಚಿವ ಕತ್ತಿ
ವಿಜಯಪುರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ವಿಕಲಚೇತನ ಇಲಾಖೆಯಿಂದ 10 ಜನ ಅಂಗವಿಕಲರಿಗೆ ತ್ರೀ ಚಕ್ರ ಸೈಕಲ್ ವಿತರಣೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಹಾಗೂ ಚೆಕ್ ವಿತರಿಸಲಾಯಿತು. ಹರ್ ಘರ್ ತಿರಂಗಾ ಪ್ರಚಾರದ ಪೋಸ್ಟರ್ …
Read More »ರಾಜಕುಮಾರ ಟಾಕಳೆಗೆ ಶಿಕ್ಷೆಯಾಗುವಂತೆ ಮಾಡುತ್ತೇನೆ-: ನವ್ಯಶ್ರೀ
ನವ್ಯಶ್ರೀ ರಾವ್ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬoಧಿಸಿದoತೆ ನವ್ಯಶ್ರೀ ರಾವ್ ವಿರುದ್ಧ ರಾಜ್‌ಕುಮಾರ್ ಟಾಕಳೆ ದೂರನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀ ರಾವ್ ಇಂದು ವಿಚಾರಣೆಗೆ ಎಪಿಎಂಸಿ ಠಾಣೆಗೆ ಹಾಜರಾಗಿದ್ದಾರೆ. ಕೆಲ ದಿನಗಳ ಹಿಂದೆ ಕೈ ನಾಯಕಿ ನವ್ಯಶ್ರೀ ರಾವ್‌ರವರ ಅಶ್ಲೀಲ ವೀಡಿಯೋ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಇದ್ದ ಫೊಟೊ ವೈರಲ್ ಆಗಿದ್ದವು. ಈ ಕುರಿತಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನವ್ಯಶ್ರೀ ವಿರುದ್ಧ ಜುಲೈ …
Read More »ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ …
Read More »
Laxmi News 24×7