Breaking News

Monthly Archives: ಜುಲೈ 2022

BSY ಹೇಳಿದಾಕ್ಷಣ ಸ್ಪರ್ಧೆ ಸುಗಮವಲ್ಲ: ಸಿ.ಟಿ. ರವಿ; ನನಗೂ ರಾಜಕೀಯ ಗೊತ್ತು: ವಿಜಯೇಂದ್ರ

ಬೆಂಗಳೂರು: ಶಿಕಾರಿಪುರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ನಂತರ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಅವರು, ವಿಜಯೇಂದ್ರ ಸ್ಪರ್ಧೆ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.   ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ಯಡಿಯೂರಪ್ಪ ಘೋಷಣೆ ಮಾಡಿರುವುದು ಸಲಹೆ ಅಷ್ಟೇ. ಯಾರಿಗೆ …

Read More »

ಪಂಜಾಬ್: ಹುತಾತ್ಮ ಯೋಧನ ಕುಟುಂಬಕ್ಕೆ 1 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ಪಂಜಾಬ್ ಸಿಎಂ

ಪಂಜಾಬ್: ಹುತಾತ್ಮ ಯೋಧರ ಕುಟುಂಬಗಳಿಗೆ ನೆರವು ನೀಡುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂಡೋ-ಚೀನಾ ಗಡಿಯಲ್ಲಿ ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಯೋಧ ಕುಲದೀಪ್ ಸಿಂಗ್ ಅವರ ಕುಟುಂಬಕ್ಕೆ ಶುಕ್ರವಾರ 1 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದರು.   “ಭಾರತೀಯ ಸೇನೆಯ 21 ಸಿಖ್ ರೆಜಿಮೆಂಟ್ ನ ಕುಲದೀಪ್ ಸಿಂಗ್ ಅವರು ದೇಶದ ಗಡಿಗಳನ್ನು ರಕ್ಷಿಸುವಾಗ ತಮ್ಮ ಜೀವ ತ್ಯಾಗ ಮಾಡಿದ್ದಾರೆ ಮತ್ತು ಪಂಜಾಬ್ ಸರ್ಕಾರವು ಈ …

Read More »

ನವದೆಹಲಿ: ಭ್ರಷ್ಟ ಸಚಿವರಿಗೆ ಕೇಜ್ರಿವಾಲ್ ಬೆಂಬಲ ನೀಡುತ್ತಿದ್ದಾರೆ ಎಂದ ಅನುರಾಗ್ ಠಾಕೂರ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭ್ರಷ್ಟ ಸಚಿವರನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಜ್ರಿವಾಲ್ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರ ಭ್ರಷ್ಟ ಸಚಿವರು ಕೂಡ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು. ಕೇಜ್ರಿವಾಲ್ ಸರ್ಕಾರವು ಮದ್ಯ ಮಾಫಿಯಾಕ್ಕೆ ಲಾಭಗಳನ್ನು ನೀಡುತ್ತಿದೆ ಎಂದು ಆರೋಪಿಸಿದ ಅನುರಾಗ್ ಠಾಕೂರ್, ಈ ಪ್ರಕರಣದಲ್ಲಿ ಬಿಜೆಪಿ …

Read More »

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.   ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.   ವಿದ್ಯಾರ್ಥಿನಿಯರ ಪೋಷಕರು ನೀಡಿದಂತ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು …

Read More »

ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆ

ಮದುವೆಗಳು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತವೆ ಅಂತಾರೆ. ಯಾರ‌್ಯಾರ ಬಾಳಲ್ಲಿ ಯಾರ‌್ಯಾರು ಸಂಗಾತಿಯಾಗಬೇಕು ಅಂತಾ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತಂತೆ. ಆದ್ರೆ ಇಲ್ಲಿ ಎರಡು ಕುಟುಂಬಗಳು ತಮ್ಮ ಮೂಗ – ಕಿವುಡ ಮಕ್ಕಳ ಮದುವೆ ಆಗುತ್ತೋ ಇಲ್ವೋ ಅಂತಾ ಚಿಂತೆಯಲ್ಲಿದ್ದಾಗ ಮೂಗನೊಬ್ಬ ಆಪತ್ಬಾಂಧವನಾಗಿ ಬಂದಿದ್ದಾನೆ.     ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿ ಜ್ಯೋತೆಪ್ಪ ಉಮರಾಣಿ ನೆಚ್ಚಿನ ಮಗಳಾದ ಸ್ವಾತಿ ಮದುವೆ ಮಾಡಲು ಆಗದೇ …

Read More »

ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ

ಯುವಕರಿಬ್ಬರು ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜುಲೈ ೨೩ ರಂದು ನಡೆದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ಎಂಬ ಇಬ್ಬರು ಯುವಕರ ಹುಟ್ಟುಹಬ್ಬವಿತ್ತು. ಈ ವೇಳೆ ಸಾರ್ವಜನಿಕವಾಗಿ ಈ ಯುವಕರು ತಲ್ವಾರ್‌ನಿಂದ …

Read More »

ಬುರ್ಖಾ ಧರಿಸಿ ಆಲಮಟ್ಟಿ ಜಲಾಶಯಕ್ಕೆ ನುಗ್ಗಲು ಯತ್ನ: ಹಾಸನ ಮೂಲದ ಯುವಕ ಪೊಲೀಸ್ ವಶಕ್ಕೆ

ಆಲಮಟ್ಟಿ (ವಿಜಯಪುರ): ಸೋಮವಾರ ಬೆಳ್ಳಂಬೆಳಿಗ್ಗೆ ಮಹಿಳೆಯರ ವೇಷದಲ್ಲಿದ್ದ ಶಂಕಿತ ಯುವಕ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನುಗ್ಗಲು ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಜರುಗಿದೆ. ನಸುಕಿನಲ್ಲಿ ಆಲಮಟ್ಟಿ ಪರಿಸರದಲ್ಲಿ ಕಾಣಿಸಿಕೊಂಡ ಯುವಕ ಬುರ್ಖಾ ಧರಿಸಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯ ಪ್ರವೇಶಕ್ಕೆ ಮುಂದಾಗಿದ್ದಾನೆ. ಈ ವೇಳೆ ಜಲಾಶಯದ ಪ್ರವೇಶ ದ್ವಾರದಲ್ಲಿ ಭದ್ರತೆಗೆ ಇದ್ದ ಪೊಲೀಸರು ಇಷ್ಟು ಬೇಗ ಜಲಾಶಯ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ವೇಳೆ ನಡೆದ …

Read More »

ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್

ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ …

Read More »

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು.   ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು. 21 …

Read More »

ಸುಷ್ಮಿತಾ ಸೇನ್ ಕನ್ನಡಕ ‌ʼಝೂಮ್ʼ ಮಾಡಿದಾಗ ಕಂಡಿದ್ದೇನು

ಉದ್ಯಮಿ‌ ಲಲಿತ್ ಮೋದಿ ಜೊತೆಗಿನ ಒಡನಾಟದಿಂದ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ಈಗ ಹೆಚ್ಚು ಪ್ರಚಲಿತದಲ್ಲಿದ್ದಾರೆ.ಲಲಿತ್ ಮೋದಿ ಜೊತೆಗೆ ಡೇಟಿಂಗ್ ಇಳಿದಿದ್ದಕ್ಕೆ ಆಕೆಯನ್ನು ‘ಗೋಲ್ಡ್ ಡಿಗ್ಗರ್’ ಎಂದು ಕರೆಯುವುದರಿಂದ ಹಿಡಿದು ಮೀಮ್‌ಗಳನ್ನು ರಚಿಸುವವರೆಗೆ ಸಾಮಾಜಿಕ ಜಾಲತಾಣದಲ್ಲಿ ಗೋಳಾಡಿಸಿದ್ದಾರೆ. ಈಗ ಹೊಸ ವಿಷಯದ ಮೂಲಕ‌ ಪುನಃ ಆಕೆಯನ್ನು ಎಳೆದುತಂದಿದ್ದಾರೆ. ಆಕೆ ಇತ್ತೀಚೆಗೆ ತನ್ನ ಸಾಮಾಜಿಕ ಜಾಲತಾಣದ ಪ್ರೊಫೈಲ್‌ನಲ್ಲಿ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದು, ಆ ಫೋಟೋ ಸಾಮಾನ್ಯ ಸೆಲ್ಫಿಯಂತೆ ಕಂಡುಬಂದಿದೆ. …

Read More »