ಬೆಂಗಳೂರು: ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಹಾಂತೇಶ್ ಬೀಳಗಿ ಅವರನ್ನು ನೇಮಿಸಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಿ.ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ., ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಆಗಿದ್ದಾರೆ. ಕೆ. ಶ್ರೀನಿವಾಸ್ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ಆಗಿದ್ದ ತುಳಸಿ ಮದ್ದಿನೇನಿ …
Read More »Monthly Archives: ಜುಲೈ 2022
ಅಕ್ರಮ ಅಕ್ಕಿ ಸಾಗಾಟ ; ಅಧಿಕಾರಿಗಳ ತಪಾಸಣೆ; ಚಾಲಕನ ಬಂಧನ
ಕುಳಗೇರಿ ಕ್ರಾಸ್ : ಸರಕಾರದ ವಿವಿಧ ಯೋಜನೆಗಳಲ್ಲಿ ಉಚಿತವಾಗಿ ಫಲಾನುಭವಿಗಳಿಗೆ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ರಮ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ, ವಾಹನವನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದು, ಚಾಲಕನನ್ನು ಹಿಡಿದು ಬಂಧಿಸಿದ ಘಟನೆ ಬಾದಾಮಿ ತಾಲೂಕಿನ ರೇಲ್ವೆ ಸ್ಟೇಶನ್ ಗ್ರಾಮದ ಹತ್ತಿರ ನಡೆದಿದೆ. ಬಾದಾಮಿಯಿಂದ ಬಾಗಲಕೋಟೆ ಕಡೆಗೆ ಹೊರಟಿದ್ದ ಅಶೋಕ ಲೇಲ್ಯಾಂಡ್ ವಾಹನದಲ್ಲಿ ಸರಕಾರದ ಅನುಮತಿ ಇಲ್ಲದೇ ರೂ.೨೩೧೦೦ ಮೌಲ್ಯದ ೧೦೫೦ …
Read More »ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು. ಸ್ಥಳಕ್ಕೆ …
Read More »ಹಾನಿಗೊಳಗಾದ ಮನೆಗಳಿಗೆ 924ಕೋಟಿ ರೂ. ಪರಿಹಾರ
ಬೆಳಗಾವಿ: ಮಳೆಯಿಂದ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿಯ ಬಗ್ಗೆ ನಿಖರವಾಗಿ ಸಮೀಕ್ಷೆ ನಡೆಸಬೇಕು. ಅಲ್ಲದೇ ತಕ್ಷಣವೇ ಪರಿಹಾರವನ್ನು ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಸಭೆ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತಗೊಂಡಿದೆ. ನೀರು ಸುರಿದ ಬಳಿಕ ಸಮೀಕ್ಷೆ …
Read More »ರಿಟರ್ನ್ ಗಿಫ್ಟ್’ ನೀಡಿದ ಪ್ರಕೃತಿ, ಮುಂಬೈ ಬೀಚ್ ನೋಡಿದ್ರೆ ಗೊತ್ತಾಗುತ್ತೆ!
ಮಾನವನ ದುರಾಸೆಯಿಂದ ಪ್ರಕೃತಿ ನಶಿಸುತ್ತಿದೆ. ಮರಗಳನ್ನು ಕಡಿದು ನಗರ ನಿರ್ಮಾಣ, ತ್ಯಾಜ್ಯವನ್ನು ಬಯಲು ಪ್ರದೇಶ, ಸಮುದ್ರಕ್ಕೆಸೆದು ಸುಂದರ ಪರಿಸರ ವ್ಯವಸ್ಥೆಯನ್ನೇ ಹಾಳು ಮಾಡಲಾಗುತ್ತಿದೆ. ಹೀಗೆ ಮಾಡಿದ ಮನುಷ್ಯನಿಗೆ ಅದೇ ಪ್ರಕೃತಿ ಪ್ರತಿಯಾಗಿ ನೀಡಿದ ಕೊಡುಗೆಯನ್ನು ಮುಂಬೈ ಬೀಚ್‌ನಲ್ಲಿ ಕಾಣಬಹುದು!. ಅರಬ್ಬಿ ಸಮುದ್ರದ ದಡದಲ್ಲಿರುವ ಮುಂಬೈ ನಗರಿಗೆ ನಿಸರ್ಗ ತನ್ನದೇ ಆದ ರೀತಿಯಲ್ಲಿ ಕೊಟ್ಟಿರುವ ಎಚ್ಚರಿಕೆ ಇದು. ಸಾವಿರಾರು ಟನ್‌ಗಟ್ಟಲೆ ಪ್ರಮಾಣದಲ್ಲಿ ಬಿಸಾಡಲಾಗಿದ್ದ ತ್ಯಾಜ್ಯವನ್ನು ಸಮುದ್ರ ವಾಪಸ್ ತಂದು ಮಾಹಿಮ್ …
Read More »ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ
ಕಾಂಗ್ರೆಸ ಪಕ್ಷದವರು ಎಂದೂ ಸತ್ಯ ಹೇಳುವುದಿಲ್ಲ. ಅವರು ಸತ್ಯ ಮಾತನಾಡಿದ ದಿನ ಅವರಿಗೆ ಸಾವು ಬರುತ್ತದೆ ಎಂದು ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಚಿಕ್ಕೋಡಿಯಲ್ಲಿ ಪ್ರವಾಹ ಕುರಿತು ಅಧಿಕಾರಿಗಳೊಂದಿಗೆ ಮುಂಜಾಗೃತಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಬಾಂಬ್ ಹಾರಿಸಿ ಪಾಕಿಸ್ತಾನ ಹೆಸರು ಹೇಳುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಸಿದ್ದರಾಮಯ್ಯ ಅವರು 7 ಕೆಜಿ ಅಕ್ಕಿ …
Read More »ವಿವಿಧ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ: ೧೫೦ ಕೆಜಿ ಪ್ಲಾಸ್ಟಿಕ್ ಚೀಲ ವಶ೨೩ ಸಾವಿರ ದಂಡ
ಬೈಲಹೊಂಗಲ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಸೋಮವಾರ ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೫೦ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ. ೨೩ ಸಾವಿರ ದಂಡ ವಿದಿಸಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡದಿರುವ ಬಗ್ಗೆ ಎಚ್ಚರಿಕೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ಜುಲೈ ೧ ರಿಂದ ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಕೇಂದ್ರ ಸರ್ಕಾರ …
Read More »ಸಿ.ಟಿ ರವಿ ಅವರಿಗೆ ಹುಟುಹಬ್ಬದ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದು ಹಾಕಿ ಕಾಂಗ್ರೆಸ್ ನಾಯಕಿ ಬಿಂದು ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಮುಂದೆ ಸಿ.ಟಿ ರವಿ ಅವರಿಗೆ ಹುಟುಹಬ್ಬದ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದು ಹಾಕಿ ಕಾಂಗ್ರೆಸ್ ನಾಯಕಿ ಬಿಂದು ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ವಿಧಾನಸೌಧದ ಬಳಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಹುಟುಹಬ್ಬದ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದು ಹಾಕಿ ಕಾಂಗ್ರೆಸ್ ನಾಯಕಿ ಬಿಂದು ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಸಿ.ಟಿ. ರವಿ ಬರ್ತ್ ಡೇ ಫ್ಲೆಕ್ಸ್ ಹರಿದ ಬಿಂದು …
Read More »ರಾಷ್ಟ್ರಪತಿ ಚುನಾವಣೆ ಮತಮೌಲ್ಯದ ಲೆಕ್ಕಾಚಾರವೇನು? ಇಲ್ಲಿದೆ ಮಾಹಿತಿ
ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆಯು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಿಂತ ಸ್ವಲ್ಪ ಭಿನ್ನವಾಗಿರುತ್ತದೆ. ಈ ಪ್ರಕ್ರಿಯೆಯಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳ ಸದಸ್ಯರು ರಾಷ್ಟ್ರಪತಿ ಚುನಾವಣೆಯ ಮತದಾರರಾಗಿರುತ್ತಾರೆ. ಆದರೆ, ರಾಷ್ಟ್ರಪತಿ ಅವರು ನಾಮನಿರ್ದೇಶನ ಮಾಡಿದ ರಾಜ್ಯಸಭೆಯ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ. ಒಬ್ಬ ಜನಪ್ರತಿನಿಧಿ ಚಲಾಯಿಸುವ ಮತವನ್ನು ಒಂದು ಮತ ಎಂದು ಪರಿಗಣಿಸಲಾಗುವುದಿಲ್ಲ. ಬದಲಾಗಿ, ಆಯಾ ರಾಜ್ಯಗಳ ಜನಸಂಖ್ಯೆಯ ಆಧಾರದ ಮೇಲೆ ಅಲ್ಲಿನ ಶಾಸಕನ …
Read More »ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಪರಲೋಕಕ್ಕೆ ಕಳುಹಿಸಿದ ಪತ್ನಿ!
ಕಲಬುರಗಿ: ಎರಡು ತಿಂಗಳ ಹಿಂದೆ ನಡೆದ ವ್ಯಕ್ತಿಯೊಬ್ಬರ ಕೊಲೆ ಕೇಸನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂದು ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಮಹಾದೇವಿ, ಸಂತೋಷ್ ಬಿರಾದಾರ್, ಸತೀಶ್ರನ್ನು ಬಂಧಿಸಲಾಗಿದೆ. ಘಟನೆ ಏನು?: ಮೇ 15 ರಂದು ಜಿಲ್ಲೆಯ ಅಫಜಲಪುರ ತಾಲೂಕಿನ ಕೇಶ್ವಾಪುರ ಗ್ರಾಮದ ಬಳಿ ಜಮೀನುವೊಂದರಲ್ಲಿ ಗುರುಪ್ಪ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಪತ್ನಿಯ ವಿರುದ್ಧವೇ ಕುಟುಂಬಸ್ಥರು …
Read More »
Laxmi News 24×7