ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ. ಕಣ್ಣಿಗೆ ಕಾಣುವಂತಹ ಅಪರಾಧ ಕಂಡುಬಂದರೆ ಮಾತ್ರ ವಾಹನ ನಿಲ್ಲಿಸಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Read More »Monthly Archives: ಜುಲೈ 2022
ಭಾರತೀಯರು ಸ-ಹೃದಯಿಗಳು, ಪ್ರೀತಿಯ ಪ್ರತೀಕರು : ಶ್ರೀ ಸಿದ್ದೇಶ್ವರ ಸ್ವಾಮಿಜಿ
ಮುಗಳಖೋಡ: ಯಾವ ವ್ಯಕ್ತಿ ಸಿಹಿ ಮನಸ್ಸಿನಿಂದ ತುಂಬು ಹೃದಯದ ಪ್ರೀತಿ ಮತ್ತು ಭಕ್ತಿ ಭಾವದಿಂದ ಬೇರೆ ವ್ಯಕ್ತಿಗಳನ್ನು ಗೌರವಿಸುವರವು ದೇವರಿಗೆ ಹತ್ತಿರ ಇರುವರು. ಮತ್ತು ತಂದೆ ತಾಯಿ, ಹಿರಿಯರು , ಶರಣರಿಗೆ ಪೂಜ್ಯ ಭಾವದಿಂದ ನೋಡಿ ಧಾರ್ಮಿಕತೆ ಬೇಳೆಸುವ ಜನರೆ ಭಾರತೀಯರು ಎಂದು ವಿಜಯಪೂರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹೇಳಿದರು. ಅವರು ಮುಗಳಖೋಡ ಪಟ್ಟಣದ ಚವಿವ ಸಂಘದ ಆವರಣದಲ್ಲಿರುವ ಸಾಯಿ ಪ್ರತಿಷ್ಠಾಪನೆಯ ದಶಮಾನೋತ್ಸವ ಹಾಗೂ …
Read More »ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ
ಬೆಂಗಳೂರು: ಈ ಹಿಂದೆ ಹಲವು ಭಾರಿ ವಿಧಾನಸೌಧದ ಕೊಠಡಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಕೂಡ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ. ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಬ್ಲಾಸ್ ಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ಹೊಂತಿಕೊಂಡಂತ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.
Read More »ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂದಿನ ಚುನಾವಣೆಯಲ್ಲಿ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ …
Read More »ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ
ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೈದಿಗಳಿಗೆ ದಿನಗೂಲಿ 200 ರೂ. ನೀಡಲಾಗುತ್ತಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ಕೂಲಿ 525 ರೂ. ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 7 ಕೋಟಿ ರೂ. ವಿಶೇಷ ಅನುದಾನ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ವಾತಂತ್ರ್ಯ …
Read More »ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …
Read More »ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು
ನಿಪ್ಪಾಣಿ (ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಮಾಂದೂರು ಗ್ರಾಮದ ಬಳಿ ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಶನಿವಾರ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಂದೂರಿನ ನಿವಾಸಿ ಶಿವಾಜಿ ಕೊರವಿ (54) ಮೃತಪಟ್ಟವರು. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಗ್ರಾಮದ ಹೊರವಲಯದಲ್ಲಿ ದೂಧಗಂಗಾ ನದಿ ಧುಮ್ಮಿಕ್ಕುತ್ತಿದೆ. ಶನಿವಾರ ಬೆಳಿಗ್ಗೆ ಮೀನು ಹಿಡಿಯಲು ನದಿಗೆ ಇಳಿದಿದ್ದ ಶಿವಾಜಿ ನೋಡನೋಡುತ್ತಿದ್ದಂತೆ ನೀರಿನ ಸೆಳವಿಗೆ ಸಿಕ್ಕು ತೇಲಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಹಾಗೂ …
Read More »ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಭರ್ತಿಗೆ ನಾಲ್ಕೇ ಅಡಿ ಬಾಕಿ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ. 2,475 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಶುಕ್ರವಾರದ ಬೆಳಿಗ್ಗೆವರೆಗೆ 2,471 ಅಡಿ ನೀರು ಸಂಗ್ರಹವಾಗಿದೆ. ‘ಪ್ರತಿವರ್ಷ ಜುಲೈ ಅಂತ್ಯಕ್ಕೆ ಭರ್ತಿಯಾಗುತ್ತಿತ್ತು. ಆದರೆ, ಖಾನಾಪುರ, ಬೆಳಗಾವಿ ತಾಲ್ಲೂಕು ಹಾಗೂ ಮಹಾರಾಷ್ಟ್ರದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿರುವುದರಿಂದ …
Read More »ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಜಿಲ್ಲೆಗೆ ಬರದೇ, ಎಲ್ಲೋ ಕುಳಿತ ಉಸ್ತುವಾರಿ ಸಚಿವ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಬರದೇ, ಎಲ್ಲೋ ಕುಳಿತು ಮಾತನಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿ ಕಾರಿದರು. ‘ಗಡಿ ಜಿಲ್ಲೆಯಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದೆ. ಈಗಾಗಲೇ ಶಾಲೆ, ಮನೆಗಳ ಕಟ್ಟಡಗಳೂ ಕುಸಿದಿವೆ. ಜೀವ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಗೋವಿಂದ ಕಾರಜೋಳ …
Read More »ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ
ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ. ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ. ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, …
Read More »
Laxmi News 24×7