Breaking News

Monthly Archives: ಜುಲೈ 2022

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.   ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ

ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ಕಕವನ್ನು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಉದ್ಘಾಟಿಸಿದರು. ಶುಕ್ರವಾರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪ್ರಕಟಿಸಿರುವ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ತಕವನ್ನು ಅಶೋಕ ಚಂದರಗಿ ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ಸಾಹಿತಿ ಯ.ರು.ಪಾಟೀಲ, ಮಾಜಿ ಮೇಯರ್ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Read More »

ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್. ಸಚಿವ ಸುನಿಲ್ ಕುಮಾರ್ ಗೆ ಒಲಿದ ಅದೃಷ್ಟ.

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌, ನಳಿನ್ ಕುಮಾರ್ ಕಟೀಲ್, …

Read More »

ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ.   ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.

Read More »

ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಬಾಲಕ ಸಾವು ಪ್ರಕರಣ : ಕೆಲವೇ ಗಂಟೆಗಳಲ್ಲಿ ಪರಿಹಾರ ನೀಡಿದ ಡಿಸಿ

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ. ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ‌.ಎಸ್ ಮೂಲಕ ಜಮಾ‌ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ.   ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, …

Read More »

ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್‌ ಮೇಲೆಯೇ ಸಾವನ್ನಪಿದು.   ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …

Read More »