Breaking News

Monthly Archives: ಜುಲೈ 2022

ಖಾನಾಪುರ: ಕಣಕುಂಬಿ ಅರಣ್ಯದಲ್ಲಿ 13 ಸೆಂ.ಮೀ. ಮಳೆ

ಖಾನಾಪುರ: ತಾಲ್ಲೂಕಿನ ಕಣಕುಂಬಿ ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆಯವರೆಗೆ 13 ಸೆಂ.ಮೀ. ಮಳೆಯಾಗಿದೆ. ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ. ಹಬ್ಬನಹಟ್ಟಿಯ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ ಬಹುತೇಕ ಮುಳುಗಡೆಯಾಗಿದೆ. ಸತತ ಮಳೆಯ ಕಾರಣ ಕಾನನದಂಚಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

Read More »

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.   ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.

Read More »

ಬೆಳಗಾವಿ: ಯಲ್ಲಿ ಧಾರಾಕಾರ ಮಳೆ , ಈವರೆಗೆ 317 ಮನೆಗಳು ಕುಸಿದಿವೆ.

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಈವರೆಗೆ 317 ಮನೆಗಳು ಕುಸಿದಿವೆ. ಚಿಕ್ಕೋಡಿ ತಾಲ್ಲೂಕಿನಲ್ಲಿ 82, ಚನ್ನಮ್ಮನ ಕಿತ್ತೂರು ತಾಲ್ಲೂಕಿನಲ್ಲಿ 39, ರಾಮದುರ್ಗ ತಾಲ್ಲೂಕಿನಲ್ಲಿ 43, ಸವದತ್ತಿ 35 ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ 19 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.   ಉಳಿದಂತೆ, ಮೂಡಲಗಿ ತಾಲ್ಲೂಕು 22, ಕಾಗವಾಡ 24, ಬೈಲಹೊಂಗಲ 19, ಹುಕ್ಕೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 14 ಮನೆಗಳ ಗೋಡೆಗಳು ಕುಸಿದಿವೆ. ನಿರಂತರ ಸುರಿಯುತ್ತಿರುವ ಮಳೆಯಿಂದಯಾಗಿ …

Read More »

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೈನಿಕನಿಗೆ ಬೆಳಗಾವಿ ಎಂಎಲ್‌ಐಆರ್‌ಸಿ ಯೋಧರಿಂದ ಅಂತಿಮ ನಮನ

ಬೆಳಗಾವಿ ತಾಲೂಕಿನ ಬೋಕನೂರ್ ಕ್ರಾಸ್ ಹತ್ತಿರ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯೋಧನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.   ಹೌದು ರಸ್ತೆ ಅಪಘಾತದಲ್ಲಿ ಸೈನಿಕನೋರ್ವ ದುರ್ಮರಣ ಹೊಂದಿದ್ದಾನೆ. ಮೃತಬ ವ್ಯಕ್ತಿಯನ್ನು ಓಂಕಾರ ಮಹಾದೇವ ಹಿಂಡಲಗೇಕರ (೨೨) ಎಂದು ಗುರುತಿಸಲಾಗಿದೆ. ಓಂಕಾರ ಹಿಂಡಲಗೇಕರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗುಂದಿ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಬೋಕನೂರ ಕ್ರಾಸ್ ಹತ್ತಿರ ನಿಯಂತ್ರಣ ಕಳೆದುಕೊಂಡು ಕಾರ ಮರಕ್ಕೆ …

Read More »

ಮಹಿಳಾ ಚಾಲಕರ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಓ ದರ್ಶನ್ ಚಾಲನೆ

ಗ್ರಾಮೀಣ ಪ್ರದೇಶದ ಘನ ಮತ್ತು ದ್ರವ್ಯ ತ್ಯಾಜ್ಯ ಘಟಕದ ನಿರ್ವಹಣೆಯ ವಾಹನಗಳಿಗೆ ಮಹಿಳಾ ಚಾಲಕರಿಗೆ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ, ಸಂಜೀವಿನಿ ಡೇ-ಎನ್‍ಆರ್‍ಎಲ್‍ಎಂ, ಸ್ವಚ್ಛ ಭಾರತ ಮಿಶನ್ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿಗಳ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆಗಾಗಿ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ …

Read More »

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …

Read More »

ಡಾಲರ್‌ ಎದುರು ಮತ್ತೆ ಮಂಕಾದ ರೂಪಾಯಿ, ದಾಖಲೆಯ ಕನಿಷ್ಟ ಮಟ್ಟಕ್ಕೆ ಇಳಿಕೆ

ಭಾರತದ ರೂಪಾಯಿ ಮೌಲ್ಯ ಮತ್ತೆ ಕುಸಿದಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆ ಅಮೆರಿಕನ್‌ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 79.55 ರಷ್ಟಾಗಿತ್ತು. ಈ ಮೂಲಕ ಅತ್ಯಂತ ಕನಿಷ್ಠ ಮೌಲ್ಯವನ್ನು ರೂಪಾಯಿ ದಾಖಲಿಸಿದೆ. ನಿನ್ನೆ ವಹಿವಾಟು ಅಂತ್ಯಕ್ಕೆ ರೂಪಾಯಿ ಮೌಲ್ಯ 79.44 ರಷ್ಟಿತ್ತು. ದಾಖಲೆಯ ಮುಕ್ತಾಯದ ನಂತರ ಮತ್ತಷ್ಟು ಕುಸಿತ ಕಂಡಿದೆ. ಡಾಲರ್‌ನಲ್ಲಿನ ಸಾಮರ್ಥ್ಯ ಮತ್ತು ದೇಶೀಯ ಷೇರುಗಳಲ್ಲಿನ ದೌರ್ಬಲ್ಯವು ರೂಪಾಯಿಯ ಮೇಲೆ ಒತ್ತಡವನ್ನುಂಟು ಮಾಡಿದೆ. ಆದರೂ ತೈಲ ದರ ಕೊಂಚ ನಿಯಂತ್ರಣದಲ್ಲಿರುವುದರಿಂದ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರ ವರ್ಗಾವಣೆ ಹಿಂದಿದೆಯಾ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮಾಲಿಕರ ಕೈವಾಡ..?

ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲನ ಆದಿತ್ಯ ಬಿಸ್ವಾಸ್‌ ಅವರನ್ನು ಸರಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಈ ಆದೇಶ ಮಂಗಳವಾರ ಹೊರಬೀಳುತ್ತಿದ್ದಂತೆ ಇದರ ಹಿಂದೆ ಬೆಳಗಾವಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯವರ ಕೈವಾಡ ಇರಬಹುದು ಎಂದು ಜನ ಆಡಿಕೊಳ್ಳುತ್ತಿದ್ದಾರೆ. ಯಾಕಂದರೆ ಅಭಿವೃದ್ಧಿಯಿಂದ ವಂಚಿತವಾಗಿದ್ದ ಬೆಳಗಾವಿ ಬಿಮ್ಸ್ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಬಿಮ್ಸ್ ಆಸ್ಪತ್ರೆಯ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿಯಾಗಿ ಚಾರ್ಚ ತೆಗೆದುಕೊಂಡ ನಂತರ ಇಡೀ ದೇಶದಲ್ಲಿರುವ ಎಲ್ಲ ಸರ್ಕಾರಿ …

Read More »

ಡಿಕೆ ಬ್ರದರ್ಸ ಚಿತ್ರನ್ನಾ ಗಿರಾಕಿಗಳು:ಅಶ್ವತ್ಥ್ ನಾರಾಯಣ್

ಡಿ.ಕೆ.ಸಹೋದರರು ಚಿತ್ರನ್ನಾ ಗಿರಾಕಿಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಲೇವಡಿ ಮಾಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ್ ಅಧಿಕಾರಕ್ಕಾಗಿ ಬದುಕುವವರು ಅವರು. ನಾವು ಜನರಿಗೋಸ್ಕರ ಬದುಕುತ್ತಿದ್ದೇವೆ. ಭ್ರμÁ್ಟಚಾರದಲ್ಲಿ ತುಂಬಿದ ಸಿದ್ದರಾಮಯ್ಯನವರಿಗೆ ಮತ್ತೆ ಅಧಿಕಾರದ ಆಸೆ ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್‍ನಲ್ಲೇ ಅವರವರಲ್ಲಿ ಹೊಡೆದಾಟ ಶುರುವಾಗಿದೆ. ಸಿದ್ದರಾಮಯ್ಯನವರ ಕಾರ್ಯಕ್ರಮ ಮಾಡಬೇಕಾ ಬೇಡವಾ. ಸಿದ್ದರಾಮಯ್ಯನವರ ಪಂಚೆ ಎಳೆಯಬೇಕಾ ಬೇಡವಾ. ಅವರಲ್ಲಿಯೇ ಜಂಜಾಟ ಶುರುವಾಗಿದೆ. ಸಿದ್ದರಾಮಯ್ಯ ಮೇಲಾ, ಡಿಕೆ …

Read More »